3 lakh tractor purchase subsidy ಟ್ರ್ಯಾಕ್ಟರ್ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

3 lakh tractor purchase subsidy : ತೋಟಗಾರಿಕೆಯಲ್ಲಿ ಕೃಷಿ ಯಂತ್ರೋಪಕರಣ ಬಳಕೆ ಮಾಡಿ ವ್ಯವಸಾಯ ಮಾಡಲು ಇಚ್ಚಿಸುವ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ.

ಬಿತ್ತನೆಯಿಂದ ಹಿಡಿದು ರಾಶಿ ಮಾಡುವವರಿಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿ ನೀಡಲಾಗುವುದು.

ಹೌದು, ರೈತ ಮಿತ್ರರೇ ಯಾಂತ್ರೀಕರಣ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು? ಯಾವ ರೈತರಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

3 lakh tractor purchase subsidy ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ   ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮ (ಎಸ್.ಎಮ್.ಎ.ಎಮ್.) ದಡಿ ಸಹಾಯಧನ ಪಡೆಯಲು ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ Ganga Kalyana scheme subsidy ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ 2025

ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ದಿನಾಂಕ: 01-05-2025ರ ಮಾಹೆಯ ನಂತರ ವೈಯಕ್ತಿಕವಾಗಿ ಖರೀದಿಸುವ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ತೋಟಗಾರಿಕೆ ಇಲಾಖೆವತಿಯಿಂದ ಇತರೆ ವರ್ಗದ ರೈತರಿಗೆ ಟ್ರಾö್ಯಕ್ಟರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಉತ್ಕೃಷ್ಟ ಗುಣಮಟ್ಟದ ಉಪಕರಣಗಳಿಗೆ ಶೇ. 40ರ ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 50 ರ ಸಹಾಯಧನ ನೀಡಲಾಗುತ್ತದೆ.

3 lakh tractor purchase subsidy

ಟ್ರ್ಯಾಕ್ಟರ್ ಖರೀದಿಸಿರುವ ಇತರೆ ವರ್ಗದ ರೈತರಿಗೆ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ರೈತರಿಗೆ ಪ್ರತಿ ಟ್ರ್ಯಾಕ್ಟರ್ ಗೆ ಶೇ.40 ರಂತೆ ಗರಿಷ್ಠ 75,000 ರೂ. ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಗರಿಷ್ಠ 3 ಲಕ್ಷ ರೂ. ಮೀರದಂತೆ ಸಹಾಯಧನ ನೀಡಲಾಗುತ್ತದೆ. ಎಲ್ಲಾ ರೀತಿಯ ಟ್ರ್ಯಾಕ್ಟರ್ , ಮಿನಿ ಟ್ರ್ಯಾಕ್ಟರ್ ಟ್ರೇಲರ್ ಮತ್ತುಟ್ರ್ಯಾಕ್ಟರ್-ಟ್ರೋಲಿ (Track-trolly)) ಯಂತ್ರೋಪಕರಣಗಳಿಗೆ ಸಹಾಯಧನ ನೀಡುವಾಗ ರಜಿಸ್ಟ್ರೇಶನ್ (Registration)) ಕಡ್ಡಾಯವಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ತಾಲ್ಲೂಕಾಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಅಫಜಲಪುರ ತಾಲೂಕು: ಶಿವಯೋಗಪ್ಪ-9743518608, ಆಳಂದ ತಾಲೂಕು: ಸುರೇಂದ್ರನಾಥ-8095143035, ಚಿಂಚೋಳಿ ತಾಲೂಕು: ರಾಜಕುಮಾರ ಗೋವಿನ-9611250501. ಚಿತ್ತಾಪೂರ ತಾಲೂಕು: ಶಂಕರಗೌಡ-7760969088. ಕಲಬುರಗಿ ತಾಲೂಕು: ಬಾಬುರಾವ ಪಾಟೀಲ-9900108196. ಜೇವರ್ಗಿ ತಾಲೂಕು: ಸಮಿಯೋದ್ದಿನ-9986516251 ಹಾಗೂ ಸೇಡಂ ತಾಲೂಕು- ಈಶ್ವರ ಪವಾರ್ 9972147778 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

3 lakh tractor purchase subsidy ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ:  ವಿವಿಧ ಯೋಜನೆಗಳಡಿ  ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ,ಜೂ.09.(ಕ.ವಾ.)-ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು  ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಹ ಫಲಾನುಭವಿಗಳು ಕಲಬುರಗಿ-ಒನ್/ಕರ್ನಾಟಕ-ಒನ್/ಅಟಲ್-ಜಿಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಯನ್ನು

https://www.kaushalkar.com/

ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ 2025ರ ಜುಲೈ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ

https://kvcdcl.karnataka.gov.in/

ವೆಬ್‌ಸೈಟ್‌ನ್ನು ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/ 7899899039 ಗಳಿಗೆ, ಜಿಲ್ಲಾ  ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕೆ÷್ವರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment