4 days heavy rain ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ

Written by Admin

Published on:

Spread the love

4 days heavy rain : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಮೇ 15, 16, 17 ಹಾಗೂ 18 ರಂದು ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 18 ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಗುಡುಗು ಸಹತಿ ಮಳೆಯಾಗುವ ಸಾಧ್ಯತೆಯಿದೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ಈಗಾಗಲೇ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಹಲವೆಡೆ ಗುರುವಾರ ಸಂಜೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ ಇನ್ನೂ ಕಲಬುರಗಿ ಹಾಗೂ ದಾವಣಗೆರೆ  ಜಿಲ್ಲೆಯಲ್ಲಿ ಸಿಡಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

4 days heavy rain ಮುಂಗಾರು ಪ್ರವೇಶದ ಮುನ್ಸೂಚನೆ

ನೈಋತ್ಯ ಮುಂಗಾರು ಮೇ 16 ರ ಸುಮಾರಿಗೆ ದಕ್ಷಿಣ ಬಂಗಾಳ ಕೊಲ್ಲಿ ಅಂಡಮಾನ ಸಮುದ್ರ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ.

ಇದು ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಕೇರಳಕ್ಕೆ ಅಪ್ಪಳಿಸುವ ಸೂಚನೆ ನೀಡುತ್ತಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ. ಪ್ರಸ್ತುತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಲಕ್ಷಣಗಳಿವೆ.

ಮೇ 15 ರಂದು ಧಾರವಾಡ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ರಭಸದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಮಂಡ್ ಜಿಲ್ಲೆಗಳಲ್ಲಿಯೂಮೇ 14 ರಂದು ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದೆ.

4 days heavy rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

4 days heavy rain ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : Crop insurnace compensation credit ರೈತರಿಗೆ ಗುಡ್ ನ್ಯೂಸ್ 2.23 ಕೋಟಿ ರೂಪಾಯಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment