PM kisan fund released ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಈಗ ತಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಪಿಎಂ ಕಿಸಾನ್ ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ 15 ಕಂತುಗಳ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆ ಎಂದರೇನು? ಯಾವ ಯಾವ ರೈತರಿಗೆ PM kisan fund released? ಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವ ಯಾವ ರೈತರಿದ್ದಾರೆ ಎಂಬುದರ ಮಾಹಿತಿ ಈಗ ಮೊಬೈಲ್ ನಲ್ಲೇ ಸಿಗುತ್ತದೆ. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಪಿಎಂ ಕಿಸಾನ್ ಯೋಜನೆ ಎಂದರೇನು? (What is PM Kisan Scheme)
ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಯಿತು. ಬಡ ರೈತರಿಗೆ ಆರ್ಥಿಕವಾಗಿ ಸಹಾಯವಾಗಲೆಂಬ ಉದ್ದೇಶದಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲಾಯಿತು. ಹೌದು, ಈ ಯೋಜನೆಯು ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿಯೇ ಅತೀ ಪ್ರಸಿದ್ಧಿ ಹೊಂದಿದೆ.
ಇದನ್ನೂ ಓದಿ Crop Insurance Status 2023-24 ಮೊಬೈಲ್ ನಲ್ಲೇ ಚೆಕ್ ಮಾಡಿ
ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಪ್ರತಿ ವರ್ಷ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿಯನ್ನು ರೈತರಿಗೆ ಜಮೆ ಮಾಡಲಾಗುವುದು.
ಯಾವ ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗಲಿದೆ?
ಪಿಎಂ ಕಿಸಾನ್ ಯೋಜನೆಯನ್ನು ಪ್ರತಿ ವರ್ಷ ಒಟ್ಟು ಮೂರು ಕಂತುಗಳಲ್ಲಿ ಜಮೆ ಮಾಡಲಾಗುವುದು. ಏಪ್ರೀಲ್ – ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆಯಾಗುತ್ತದೆ. ಆಗಸ್ಟ್ – ನವೆಂಬರ್ ತಿಂಗಳ ಮಧ್ಯದಲ್ಲಿ ಎರಡನೇ ಕಂತು ಜಮೆಯಾಗುತ್ತದೆ. ಡಿಸೆಂಬರ್- ಮಾರ್ಚ್ ತಿಂಗಳಲ್ಲಿ ಮೂರನೇ ಕಂತಿನ ಹಣ ಜಮೆಯಾಗಲಿದೆ. ಕಳೆದ15ನೇ ಕಂತು ನವೆಂಬರ್ ತಿಂಗಳಲ್ಲಿ ಜಮೆಯಾಗಿದ್ದರಿಂದ 16ನೇ ಕಂತು ಏಪ್ರೀಲ್ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಆದರೆ ಏಪ್ರೀಲ್ ತಿಂಗಳಲ್ಲಿ ಚುನಾವಣೆ ಇರುವುದರಿಂದ ಚುನಾವಣೆ ಮೊದಲೇ ಅಂದರೆ ಮಾರ್ಚ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿ ಖುಷಿ ಸುದ್ದಿ ನೀಡುವ ಸಾಧ್ಯತೆಯಿದೆ. ಹೌದು, ಮಾರ್ಚ್ ತಿಂಗಳಲ್ಲಿ PM kisan fund released ಆಗುವ ಸಾಧ್ಯತೆಯಿದೆ.
PM kisan ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಇಲ್ಲೇ ಚೆಕ್ ಮಾಡಿ? (Check your PM Kisan EKYC)
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಹೆಸಿರಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನೀವು ಒಂದು ವೇಳೆ ಇಕೆವೈಸಿ ಮಾಡಿಸಿದ್ದರೆ EKYC is Already Done ಎಂಬ ಮೆಸೆಜ್ ನಿಮಗೆ ಕಾಣಿಸುತ್ತದೆ.
ಇಕೆವೈಸಿ ಮಾಡಿಸದವರು ಏನು ಮಾಡಬೇಕು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳುಇನ್ನೂ ಇಕೆವೈಸಿ ಮಾಡಿಸದಿದ್ದರೆ ಹಾಗೂ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತಿಲ್ಲವಾದರೆ ನೀವು ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು.
ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಬಹುದೇ? (PM kisan Ekyc can we do in mobile)
ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿಯೂ ಇಕೆವೈಸಿ ಮಾಡಿಸಬಹುದು. ಹೌದು, ಇಕೆವೈಸಿ ಮಾಡಿಸಿಲ್ಲವಾದಲ್ಲಿ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಇಕೆವೈಸಿ ಮಾಡಿಕೊಳ್ಳಬಹುದು.
ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ? (Pm kisa village wise list)
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರು ಗ್ರಾಮವಾರು ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಆಸಕ್ತ ರೈತರು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕದ ರೈತರು ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಿಲ್ಲೆಗೆ ಸಂಬಂಧಿಸಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿಯೂ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಹೆಸರು ಆರ್ಡರ್ ವೈಸ್ ಇರುತ್ತದೆ. ಅಂದರೆ ಎ ದಿಂದ ಆರಂಭವಾಗುತ್ತದೆ. ಹಾಗಾಗಿ ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನುನೋಡಿಕೊಂಡು ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಬಹುದು.
PM kisan
16 ನೇ ಕಂತಿನ ಹಣ ಯಾವಾಗ ಜಮೆಯಾಗಬಹುದು?
ಪಿಎಂ ಕಿಸಾನ್ ಯೋಜನೆಯ 16 ನೇ ಕಂತಿನ ಹಣ ಏಪ್ರೀಲ್ ತಿಂಗಳ ಮೊದಲ ಜಮೆಯಾಗುವ ಸಾಧ್ಯತೆಯಿದೆ. ಹೌದು, ಏಪ್ರೀಲ್ ಮೇ ತಿಂಗಳಲ್ಲಿಲೋಕಸಭಾ ಚುನಾವಣೆ ಇರುವುದರಿಂದ ಮಾರ್ಚ್ ತಿಂಗಳಿನಲ್ಲಿಯೇ 16 ನೇ ಕಂತಿನ ಹಣ ಜಮೆಯಾಗುವಸಾಧ್ಯತೆಯಿದೆ. ತಿಂಗಳ ಅವಧಿಯಲ್ಲಿ ಯಾವುದೇ ತಿಂಗಳಲ್ಲಿ ಜಮೆಯಾಗಬಹುದು.ಇದರೊಂದಿಗೆ ಮೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗ ಆರಂಭದಲ್ಲಿ ರೈತರು ಬಿತ್ತಣಿಕೆಯಲ್ಲಿ ತೊಡಗುವ ಸಾಧ್ಯತೆಯಿರುವುದರಿಂದ ರೈತರಿಗೆ ನೆರವಾಗಲೆಂಬ ಉದ್ದೇಶದಿಂದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
PM kisan fund released ಸ್ಟೇಟಸ್ -2024 ಮೊಬೈಲ್ ನಲ್ಲಿ ಚೆಕ್ ಮಾಡಿ?
Pm kisan fund released ಆಗಿದ್ದರಲ್ಲಿ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಜೆಕ್ ಮಾಡಲು ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಮಾಡಬೇಕು. ಅಲ್ಲಿ Know Your Status ಮೇಲೆ ಕ್ಲಿಕ್ ಮಾಡಬೇಕು. ನಂತರ
ಅಲ್ಲಿ Enter Registration No ನಲ್ಲಿರೈತರು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ . Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.
ಒಂದು ವೇಳೆ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನೆನಪಿಲ್ಲವಾದರೆ Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.