Crop insurance money credit ಯಾಗಿಲ್ಲವೇ? ಕೂಡಲೇ ನೀವು ನಿಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗದಿದ್ದರೆ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ? ನಿಮ್ಮ ಅರ್ಜಿ ತಿರಸ್ಕೃತವಾಗಿದ್ದರೆ ಯಾವ ಕಾರಣಕ್ಕಾಗಿ ಅರ್ಜಿ ತಿರಸ್ಕೃತವಾಗಿದೆ ಎಂಬುದರ ಕುರಿತು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹಾಗೂ ಇತರ ತಾಲೂಕಿನ ರೈತರು ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದು. ನಂಜನಗೂಡು ತಾಲೂಕಿನ ರೈತರು ಮುಂಗಾರು ಹಂಗಾಮಿನ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ನೋಂದಣಿಯಾದ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಹೋಲಿಕೆ ಮಾಡಿ ತಾಳೆಯಾಗದ 230 ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಕೆ. ರವಿ ಹೇಳಿದ್ದಾರೆ.
ತಿರಸ್ಕೃತಗೊಂಡಿರುವ ಅರ್ಜಿಯ ಮಾಹಿತಿಗಳನ್ನು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ತಿರಸ್ಕೃತಗೊಂಡಿರುವ ಪಟ್ಟಿಯ ಮಾಹಿತಿಯನ್ನು ಪ್ರದರ್ಶಿಸಲಾಗಿದೆಇ. ಈ ಕುರಿತು ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕಾಲಾವಾಕಶನೀಡಲಾಗಿದೆ.
ಇದನ್ನೂ ಓದಿ : Crop Insurance Status 2023-24 ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು 2022-23ನೇ ಸಾಲಿನ ಪಹಣಿ (ಆರ್.ಟಿ.ಸಿ) ಯಲ್ಲಿ ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರುವ ದಾಖಲೆ, ವಿಮೆಗೆ ನೋಂದಣಿಯಾದ ಬೆಳೆಯ ಉತ್ಪನ್ನವನ್ನು ಮಾರುಕಟ್ಟೆಯಲ್ಲಿಮಾರಾಟ ಮಾಡಿದ ರಸೀದಿಯೊಂದಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃ ಷಿ ನಿರ್ದೇಶಕರಕಚೇರಿಗೆ 15 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Crop insurance money credit ಆಗಿಲ್ಲವೇ? ಬೆಳೆ ಸಮೀಕ್ಷೆ ಆಕ್ಷೇಪಣೆಗೆ ಅವಕಾಶ
ಹಾವೇರಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ್ ಮೊಬೈಲ್ ಆ್ಯಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ದತ್ತಾಂಶವನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಮಿಸ್ಮ್ಯಾಚ್ ಪ್ರಕರಣಗಳ ಇತ್ಯರ್ಥ, ಬೆಂಬಲ ಬೆಲೆಯಡಿ ರೈತರು ಮಾರಾಟ ಮಾಡಲು ನೇರ ನಗದು ವರ್ಗಾವಣೆ ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ಬಳಕೆ ಮಾಡುವುದರಿಂದ ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೆ ಇದರಲ್ಲಿ ಪಾಲ್ಗೊಂಡು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ್ ಮೊಬೈಲ್ ಮೂಲಕ ಖಾತ್ರಿ ಪಡೆಸಿಕೊಳ್ಳಬೇಕು.
ಒಂದು ವೇಳೆ ವಿಭಿನ್ನವಾಗಿದ್ದರೆ ಕೂಡಲೇ ಆಕ್ಷೇಪಣೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.
Crop insurance money credit ಆಗಿಲ್ಲವೇ? ಬೆಳೆ ಸಮೀಕ್ಷೆ ಮಾಡಿ ಚೆಕ್ ಮಾಡಿ
ನೀವು ನಿಮ್ಮ ಜಮೀನಿಲ್ಲಿ ಹಾಕಿದ ಬೆಳೆಗಳನ್ನು ಸಮೀಕ್ಷೆ ಮಾಡಿದ್ದೀರೋ ಇಲ್ಲವೋ ಎಂಬುದನ್ನು ಒಮ್ಮೆ ಪರಿಶೀಲಿಸಿಕೊಳ್ಳಬಹುದು. ಹೌದು, ಈ
https://play.google.com/store/apps/details?id=com.crop.offcskharif_2021
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಬೆ ಸಮೀಕ್ಷೆ ಮಾಡುವ ಲಿಂಕ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮ ಬೆಳೆಯ ಮಾಹಿತಿ ಎಲ್ಲಾ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನುಪರಿಶೀಲಿಸಿಕೊಳ್ಳಬಹುದು.
ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಬೆಳೆ ದರ್ಶಕ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನೀವು ಓಪನ್ ಮೇಲೆ ಕ್ಲಿಕ್ ಮಾಬೇಕಾಗುತ್ತದೆ. ನಂತರ ಬೆಳೆ ದರ್ಶಕ್ 2023-24 ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಬೆಳೆ ಸಮೀಕ್ಷೆ ಮಾಹಿತಿ ವೀಕ್ಷಣೆ ಕಾಣಿಸುತ್ತದೆ. ಅಲ್ಲಿ ನೀವು ರೈತ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
Crop insurance survey ಯಲ್ಲಿ ಯಾವ ಯಾವ ಮಾಹಿತಿ ಕಾಣಿಸುತ್ತದೆ?
ಸರ್ವೆ ನಂಬರ್ ಕೆಳಗಡೆ ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ಋತು ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಸರ್ವೆ ನಂಬರ್ ಹಾಕಬೇಕು. ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಅದರ ಕೆಳಗಡೆ ಸರ್ವೆ ನಂಬರ್ ಹಿಸ್ಸಾ ಆಯ್ಕೆ ಮಾಡಿಕೊಳ್ಳಬೇಕು. ಹಿಸ್ಸಾ ನಂಬರ್ ಕಾಣಿಸದಿದ್ದರೆ ಅಲ್ಲಿ ಕಾಣುವ ಸರ್ವೆನಂಬರ್ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ಮಾಲಿಕರ ವಿವರಕ್ಕಾಗಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು.ಆಗ ನೀವು ನಮೂದಿಸಿ ಸರ್ವೆ ನಂಬರ್ ನಲ್ಲಿರುವ ಮಾಲಿಕರ ಹೆಸರು ಕಾಣಿಸುತ್ತದೆ. ನಿಮ್ಮ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಕೆಳಗಡೆ ಸೂಚನೆ ಕಾಣಿಸುತ್ತದೆ.
ಸೂಚನೆ ನಿಮ್ಮಸರ್ವೆ ನಂಬರ್ ಬೆಳೆ ಸಮೀಕ್ಷೆಯನ್ನು ಬಳಕೆದಾರರು ಕೆಳಗೆ ನಮೂದಿಸಿದ್ದಾರೆ. ಅಂದರೆ ಯಾವ ದಿನಾಂಕದಂದು ಬೆಳೆ ಸಮೀಕ್ಷೆ ಆಗಿದೆ ಆ ದಿನ, ನಿಮ್ಮ ಹೆಸರು ಹಾಗೂ ನಿಮ್ಮ ಮೊಬೈಲ್ ನಂಬರ್ ಕಾಣಿಸುತ್ತದೆ. ನಿಮ್ಮ ಹೆಸರು ಮೇಲೆ ಕ್ಲಿಕ್ ಮಾಡಿದರೆ ಬೆಳೆ ವಿವರ ದಾಖಲಿಸಿರುವುದುರ ಸರಿಯಿಲ್ಲವಾದರೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದು. ಅಲ್ಲಿ ಕಾಣುವ ಆಕ್ಷೇಪಣೆ ಮೇಲೆ ಕ್ಲಿಕ್ ಮಾಡಿ ನೀವು ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ಹೇಗೆ ಮಾಡಿಸಬೇಕು?
ಈಗಾಗಲೇ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಬೆಳೆ ಸಮೀಕ್ಷೆ ನಡೆಸುತ್ತಿದ್ದು, ಗ್ರಾಮ ಲೆಕ್ಕಿಗರು ಬೆಳೆ ಸಮೀಕ್ಷೆಗೆ ಬಂದಾಗ ಅವರಿಗೆ ಸಹಕರಿಸಬೇಕು. ಗ್ರಾಮ ಲೆಕ್ಕಿಗರು ಬರದಿದ್ದರೆ ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬಹುದು. ಹೌದು, ರೈತರು ಸ್ವತಃ ಬೆಳೆ ಸಮೀಕ್ಷೆ ಮಾಡಲುಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರೈತರು ಬೆಳೆ ಸಮೀಕ್ಷೆಗೆ ಗೂಗಲ್ ಪ್ಲೇಸ್ಟೋರ್ ನಲ್ಲಿ ಬೆಳೆ ಸಮೀಕ್ಷೆ 2023 ಆ್ಯಪ್ ಟೈಪ್ ಮಾಡಿ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಆ್ಯಪ್ ಇನಸ್ಟಾಲ್ ಮಾಡಿಕೊಂಡ ನಂತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬೇಕು. ಈ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ, ಕೃಷಿ ಸಾಲ ಸೌಲಭ್ಯ ಮತ್ತುಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ.
ಬೆಳೆ ಸಮೀಕ್ಷೆ ಹಾಗೂ ಬೆಳೆ ದರ್ಶಕ್ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
ಈ ಲೇಖನ ನಿಮಗೆ ಉಪಯುಕ್ತ ಎನಿಸಿದರೆ ನೀವು ಕಾಮೆಂಟ್ ಮಾಡಿ ತಿಳಿಸಬಹುದು. ನಿಮ್ಮ ಕಾಮೆಂಟ್ ನಮಗೆ ಸ್ಪೂರ್ತಿ ನೀಡುತ್ತದೆ.