Baragala parihara hana bidugade ಆಗಿದೆ. ಹೌದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ ರೈತರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತಿನ ಹಣ ಜಮೆ ಮಾಡಲಾಗುತ್ತಿದೆ.
ಏನಿದು ಬೆಳೆ ಹಾನಿ ಪರಿಹಾರ? ಬರಗಲಾ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆ ಮಾಡಲಾಗುವುದು? ಬೆಳೆ ಹಾನಿ ಪರಿಹಾರ ಜಮೆಯಾಗಬೇಕಾದರೆ ರೈತರೇನು ಮಾಡಬೇಕು? ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಏನಿದು ಬರಗಾಲ ಪರಿಹಾರ (What is Baragala Parihara) ?
ಬರಗಾಲ ಪರಿಹಾರ ಎಂದರೆ ಮಳೆಯಿಲ್ಲದೆ ಬೆಳೆ ಕಮರಿ ಹೋಗಿ ರೈತರಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾದರೆ ರಾಜ್ಯ ಸರ್ಕಾರವು ಯಾವ ಯಾವ ಪ್ರದೇಶದಲ್ಲಿ ಮಳೆಯಾಗಿಲ್ಲವೋ ಆ ತಾಲೂಕುಗಳನ್ನು ಬರಗಾಲ ತಾಲೂಕಗಳೆಂದು ಘೋಷಣೆ ಮಾಡುತ್ತದೆ. ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ಸಹಾಯವಾಗಲೆಂದು ಎಕರೆಗೆ ಇಂತಿಷ್ಟು ಹಣ ಪರಿಹಾರ ನೀಡಲು ಸರ್ಕಾರ ಘೋಷಣೆ ಮಾಡುತ್ತದೆ ಇದನ್ನೇ ಬರಗಾಲ ಪರಿಹಾರ ಎನ್ನುವರು.
Baragala Parihara Hana ಹಣ ರಾಜ್ಯದಲ್ಲಿ ಎಷ್ಟು ತಾಲೂಕುಗಳಿಗೆ ಘೋಷಣೆ ಮಾಡಿದೆ?
ಪ್ರಸಕ್ತ ಸಾಲಿನಲ್ಲಿ ಅಂದರೆ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಮಳೆಯಿಲ್ಲದ 216 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪ್ರತಿ ಎಕರೆಗೆ ನೀಡಲಾಗುವುದು ಎಂದು ಘೋಷಣೆ ಮಾಡಿದ ನಂತರ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಯಾವ ಬೆಳೆಗಳಿಗೆ ಎಷ್ಟು ಬರಗಾಲ ಪರಿಹಾರ ಹಣ (Baragala Parihara Hana) ನೀಡಲಾಗುವುದು?
ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ 8500 ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಬೆಳೆಗಳಿಗೆ 17 ಸಾವಿರ ರೂಪಾಯಿ ನೀಡಲಾಗುವುದು. ಬಹುವಾರ್ಷಿಕ ಬೆಳೆಗಳಿಗೆ 22500 ರೂಪಾಯಿ ಪರಿಹಾರ ನಿಗದಿ ಮಾಡಿದೆ. ಸರ್ಕಾರ ಮಾರ್ಗ ಸೂಚಿಯನ್ವಯ ರೈತರಿಗೆ 2 ಹೆಕ್ಟೇರ್ ವರೆಗೆ ಮಾತ್ರ ಬೆಳೆ ಹಾನಿ ಪರಿಹಾರ ವಿತರಿಸಲಾಗುವುದು.
ಬರಗಾಲ ಪರಿಹಾರ (Baragala Parihara List) ಪಟ್ಟಿಯಲ್ಲಿ ನಿಮ್ಮಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಬರಗಾಲ ಪರಿಹಾರ ಹಣ ಸಿಗುವವರ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/FarmerDeclarationReport.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಎಫ್ಎಸ್.ಡಿ ಪಡೆದ ರೈತರ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಮಾಡಿಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಕೊಳ್ಳಬೇಕು. ನಂತರ ವೀಕ್ಷಿಸು ಮೇಲೆಕ್ಲಿಕ್ ಮಾಡಿದರೆ ಸಾಕು ಯಾರು ಯಾರು ಬರಗಾಲ ಪರಿಹಾರ ಹಣ ಪಡೆಯಬಲ್ಲರೋ ಅವರ ಹೆಸರು ಕಾಣಿಸುತ್ತದೆ.
Baragala Parihara hana Bidugade ಗೆ ಇರುವ ಮಾರ್ಗಸೂಚಿಗಳೇನು?
ಸರ್ಕಾರವು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ ನಂತರ ಎಸ್.ಡಿಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಎಕರೆಗೆ ಇಂತಿಷ್ಟು ಹಣ ಘೋಷಣೆ ಮಾಡಲಾಗುವುದು.
ಇದನ್ನೂ ಓದಿ : PM kisan fund released ಸ್ಟೇಟಸ್ -2024 ಚೆಕ್ ಮಾಡಿ
ಹೌದು ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂಪಾಯಿಯವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿ ನೀಡಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
Baragala Parihara Hana jame ಯಾಗಿದೆಯೇ? ಚೆಕ್ ಮಾಡಿ
ಬರಗಾಲ ಪರಿಹಾರ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ನಂತರ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಅಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year Type ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಅಲ್ಲಿ ಕಾಣುವ Captch code ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಬೆಳೆ ಹಾನಿ ಪರಿಹಾರ ಜಮೆಯಾಗಬೇಕಾದರೆ ರೈತರೇನು ಮಾಡಬೇಕು?
ಬೆಳೆ ಹಾನಿ ಪರಿಹಾರ ಹಣ ಜಮೆಯಾಗಬೇಕಾದರೆ ರೈತರು ಮೊದಲು ತಮ್ಮ ಹೆಸರಿಗೆ ಎಫ್ಐಡಿ ಮಾಡಿಕೊಳ್ಳಬೇಕು. ಹೌದು, ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನಿಮ್ಮ ಆಧಾರ್ ಕಾರ್ಡ್, ಜಮೀನಿನ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತ್ತೀಚಿನ ಫೋಟೊ ಸಲ್ಲಿಸಿ ನಿಮ್ಮ ಹೆಸರಿಗೆ ಎಫ್ಐಡಿ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಹೆಸರಿಗೆಎಫ್ಐಡಿ ಇದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು. ಇಲ್ಲದಿದ್ದರೆ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.
ಬರಗಾಲ ಪರಿಹಾರ ಹಣ ಯಾವ ಯಾವ ಜಿಲ್ಲೆಯಲ್ಲಿ ಬಿಡುಗಡೆಯಾಗಿದೆ?
ಬರಗಾಲ ಪರಿಹಾರ ಹಣ ದಾವಣಗೆರೆ, ಹಾಸನ ಜಿಲ್ಲೆ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೂ ಬಿಡುಗಡೆಯಾಗಿದೆ. ಹೌದು,
ದಾವಣಗೆರೆ ಜಿಲ್ಲೆಯಿಂದ ತೀವ್ರ ಬರಗಾಲದಿಂದ 1,50,621 ಹೆಕ್ಟೇರ್ ನಷ್ಟು ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಯಾಗಿರುವ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿತ್ತು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿರುವ ರೈತರಿಗೆ 5 ಹಂತಗಳಲ್ಲಿ 16 ಕೋಟಿ ರೂಪಾಯಿ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕೇಟೇಶ ತಿಳಿಸಿದ್ದಾರೆ.
ಹಾಸನ ಜಿಲ್ಲೆಗೆ 34.36 ಕೋಟಿ ರೂಪಾಯಿ ಬಿಡುಗಡೆ
ಹಾಸನ ಜಿಲ್ಲೆಯ 8 ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲೂಕುಗಳಿಗೆ ರಾಜ್ಯ ಸರ್ಕಾರದಿಂದ ಎಸ್.ಡಿ.ಆರ್.ಎಫ್ ನಡಿಯಲ್ಲಿ ಮೊದಲ ಕಂತಿನಲ್ಲಿ ಜಿಲ್ಲೆಗೆ 34.36 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.1,89,379 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ಇತರ ಜಿಲ್ಲೆಯ ರೈತರು ತಮಗೆಷ್ಟು ಬರಗಾಲ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು
ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದೆಯೇ? ಚೆಕ್ ಮಾಡುವು ಹೇಗೆ?
ರೈತರು ತಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ಓಪನ್ ಆಗುತ್ತದೆ. ನಂತರ ರೈತರು ಆಧಾರ್ ಕಾರ್ಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.
ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಫಾರ್ಮರ್ಸ್ ಡಿಟೇಲ್ಸ್ ಕೆಳಗಡೆ FruitID ಇರುತ್ತದೆ. ನಿಮ್ಮ ಎಫ್ಐಡಿ ಸಂಖ್ಯೆಯು FID ಇದ್ದು, ಅದರ ಮುಂದುಗಡೆ ಕೆಲವು ಅಂಕಿಗಳು ಇರುತ್ತದೆ. ಉದಾಹರಣೆಗೆ FID……… ಇಲ್ಲಿ ಎಫ್ಐಡಿ ಅಂಕಿಗಳು ಕಾಣಿಸುತ್ತವೆ. ರೈತರು ತಮ್ಮ ಎಫ್ಐಡಿ ಸಹಾಯದಿಂದ ಯಾವ ಯಾವ ಸರ್ವೆ ನಂಬರ್ ಗಳನ್ನು ಎಫ್ಐಡಿಯಲ್ಲಿ ಸೇರಿಸಲಾಗಿದೆ ಎಂಬುದನ್ನ ಚೆಕ್ ಮಾಡಬಹುದು.