Crop Insurance money: ಬೆಳೆ ವಿಮೆ ಮಾಡಿಸಿದ ರೈತರಿಗೆ ಈ ತಿಂಗಳೊಳಗೆ ಬೆಳೆ ವಿಮೆ ಪರಿಹಾರ ಹಣವನ್ನು ಜಮೆ ಮಾಡಲು ಕ್ರಮಕೈಗೊಳ್ಳಬೇಕೆಂದು ವಿಮಾ ಕಂಪನಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಹೌದು, ಬೆಳೆ ವಿಮೆಗಾಗಿ ನೋಂದಾಯಿಸಿಕಂಡಿರುವ ರೈತರ ಖಾತೆಗೆ ಫೆಬ್ರವರಿ ಅಂತ್ಯದ ವೇಳೆಗೆ ನಿಯಮಾನುಸಾರ ಬೆಳೆ ವಿಮೆ ಪರಿಹಾರ ಹಣ ಜಮೆ ಮಾಡಬೇಕೆಂದು ಚಿತ್ರದುರ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2023-24ನೇ ಫಸಲ್ ಬಿಮಾ ಯೋಜನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವಿಚಾರದಲ್ಲಿ ಯಾವುದೇ ಸಬೂಬಗಳ ಹೇಳುವಂತಿಲ್ಲ. ನಿಯಮಾನುಸಾರ ಕೃಷಿ ಹಾಗೂ ವಿಮಾ ಕಂಪನಿ ಅಧಿಕಾರಿಗಳುಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಈಗಾಗಲೇ ಜಿಲ್ಲಾದ್ಯಂತ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಕೇವಲ ದತ್ತಾಂಶಗಳ ಮರು ಪರಿಶೀಲನೆ ಮಾತ್ರ ಬಾಕಿ ಉಳಿದಿದೆ. ಈ ಕಾರ್ಯವನ್ನು15 ದಿನದ ಒಳಗೆ ಪೂರ್ಣಗೊಳಿಸಿ ಅರ್ಹ ರೈತರ ಖಾತೆಗೆ ನೇರವಾಗಿ ಪರಿಹಾರದ ಹಣ ಜಮೆ ಮಾಡಬೇಕು. ಬೆಳೆ ವಿಮೆ ಪರಿಹಾರದ ಕಾರ್ಯ ಸಂಪೂರ್ಣ ಪಾರದರ್ಶಕ ಇರಬೇಕು.ತಾಂತ್ರಿಕ ಕಾರಣಗಳಿಂದ Crop Insurance money ಬಿಡುಗಡೆ ಆಗದಿದ್ದರೆ ಅಥವಾ ಕೆಲವು ರೈತರ ಖಾತೆಗೆ ಜಮೆ ಆಗದಿದ್ದರೆ ಈ ಕುರಿತು ಪ್ರತಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೂ ಮಾಹಿತಿ ನೀಡಬೇಕು ಎಂದರು.
ಬರ ಆವರಿಸಿರುವುದರಿಂದ ರೈತರು ಬೆಳೆ ವಿಮೆ ಪರಿಹಾರ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ರೈತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಬೇಡ. ರೈತರು ಗೊಂದಲಕ್ಕೆ ಒಳಗಾಗದಂತೆ ತಿಳಿ ಹೇಳಬೇಕು. ಕೃಷಿ ವಿಮಾ ಕಂಪನಿಗಳು ಬೆಳೆ ಪರಿಹಾರದ ಕಾರ್ಯವನ್ನುವ್ಯಾಪಾರೀಕರಣದ ದೃಷ್ಟಿಯಿಂದ ನೋಡಬಾರದು. ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ತಾಲೂಕುಗಳಲ್ಲಿಯೂ ವಿಮಾ ಕಂಪನಿ ಪ್ರತಿನಿಧಿಗಳನ್ನು ನೇಮಕ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಗೇಳಿದರು.
ಇದನ್ನೂ ಓದಿ : PM kisan fund released ಸ್ಟೇಟಸ್ -2024 ಚೆಕ್ ಮಾಡಿ
2023-24ನೇ ಸಾಲಿನಲ್ಲಿ ಜಿಲ್ಲೆಯ2, 59, 486 ಎಕರೆ ಕೃಷಿ ಭೂಮಿಯ ಪೈಕಿ 1, 05, 000 ಎಕರೆ ಪ್ರದೇಶಕ್ಕೆ 80, 633 ರೈತರು ಬೆಳೆ ವಿಮೆ ನೋಂದಾವಣಿ ಮಾಡಿಸಿದ್ದಾರೆ. ಇದರಲ್ಲಿ ಶೇಂಗಾ 38496, ಮುಸುಕಿನ ಜೋಳ 27396, ತೊಗರಿ 4109, ರಾಗಿ 2719, ಸಾಮೆ 3790, ಹೆಸರು 2427, ಹತ್ತಿ 1960, ಸೂರ್ಯಕಾಂತಿ 675, ಟೊಮ್ಯಾಟೋ97, ಎಳ್ಳು 17, ಹುರುಳಿ 70, ನವಣೆ 376, ಸಜ್ಜೆ 51, ಕೆಂಪು ಮೆಣಸಿನ ಕಾಯಿ 61 ರೈತರು ಬೆಳೆ ವಿಮೆಗೆ ನೋಂದಾಯಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಖಾಸಗಿ ಬೆಳೆ ವಿಮೆ ಕಂಪನಿಗಳು ರೈತರನ್ನು ಶೋಷಣೆ ಮಾಡುತ್ತಿವೆ. ಬೆಳೆ ವಿಮೆ ಕಟ್ಟಿಸಿಕೊಳ್ಳಲು ದಿನಾಂಕ ನಿಗದಿ ಮಾಡುವ ಕಂಪನಿಗಳು, ಸಕಾಲದಲ್ಲಿ ಬೆಳೆ ವಿಮೆಯ ಪರಿಹಾರದ ಮೊತ್ತವನ್ನು ಪಾವತಿಸಲು ದಿನಾಂಕ ನಿಗದಿ ಮಾಡುವುದಿಲ್ಲ.
ರಾಜ್ಯದಲ್ಲಿ ಬರ ಘೋಷಣೆ ಆದ ತಕ್ಷಣ ಮಧ್ಯಂತರ ಪರಿಹಾರವನ್ನು ಬೆಳೆ ವಿಮೆ ಕಂಪನಿ ನೀಡಬೇಕಿತ್ತು. ವಿವಿಧ ಜಿಲ್ಲೆಗಳಲ್ಲಿ ಮಧ್ಯಂತರ ಪರಿಹಾರ ನೀಡಲಾಗಿದೆ. ಜಿಲ್ಲೆಯ ರೈತರಿಗೆ ಮಾತ್ರ ನೀಡಿಲ್ಲ. ಬೆಳೆ ವಿಮೆ ಕಂಪನಿಗಳು ನೋಂದಣಿ ಮಾಡಿರುವ ರೈತರಿಗೆ ಯಾವುದೇ ರೀತಿಯ ಬಾಂಡ್ ಗಳನ್ನು ನೀಡುತ್ತಿಲ್ಲ. ಇತರೆ ಜೀವ ವಿಮೆ ಕಂಪನಿಗಳ ಮಾದರಿಯಲ್ಲಿ ಬೆಳೆ ವಿಮೆ ಬಾಂಡ್ ಗಳನ್ನು ನೀಡಬೇಕು. ನೆರೆಯ ಆಂಧ್ರಹಾಗೂ ತೆಲಂಗಾಣಿ ರಾಜ್ಯದಲ್ಲಿ ಮಾದರಿಯಂತೆ ನಮ್ಮಲ್ಲಿಯೂ ಸರ್ಕಾರಿ ವಿಮಾ ಕಂಪನಿಗಳೇ ಬೆಳೆ ವಿಮೆ ನೋಂದಾಯಿಸಿಕೊಳ್ಳುವಂತಾಗಬೇಕು ಎಂದು ರೈತ ಮುಖಂಡ ಕೆ.ಪಿ. ಭೂತಯ್ಯ ಸಭೆಯಲ್ಲಿ ಮನವಿ ಮಾಡಿದರು.
ರಾಜ್ಯದ ಬೆಳೆ ವಿಮೆ ಪರಿಹಾರದ ಪದ್ಧತಿ ವಿಶ್ವದಲ್ಲೇ ಉತ್ತಮವಾದ ಪದ್ಧತಿ ಎಂದು ಮನ್ನಣೆ ಪಡೆದಿದೆ. ವಿದೇಶಗಳು ಕೂಡ ಈ ಪದ್ಧತಿ ಅಳವಡಿಸಿಕೊಳ್ಳಲು ಚಿಂತನೆ ನಡೆಸಿವೆ. ಫಸಲ್ ಬಿಮಾ ಯೋಜನೆ ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಕಳೆದ ಬಾರಿ 8 ತಿಂಗಳ ಒಳಗೆ ರೈತರ ಖಾತೆಗೆ Crop Insurance money ಮಾಡಲಾಗಿದೆ. ಪೂರ್ಣ ಪ್ರಮಾಣದ ಪರಿಹಾರ ಧನವನ್ನು ಜಮೆ ಮಾಡಲು ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಂಟಿ ನಿರ್ದೇಶಕಮಂಜುನಾಥ ಸ್ಪಷ್ಟನೆ ನೀಡಿದರು.
Crop Insurance money ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಬಹುದು. ಹೌದು, ಈ
https://samrakshane.karnataka.gov.in/publichome.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
ಆಗ ತೆರೆದುಕೊಳ್ಳುವ ಪೇಜ್ ನಲ್ಲಿ Farmers ಕೆಳಗಡೆ ನಿಮಗೆ check status ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Proposal , Mobile No. Aadhaar ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Mobile No ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ಅದರ ಕೆಳಗಡೆ ಅಲ್ಲಿ ಕಾಣಿಸುವ ಕ್ಯಾಪ್ಚ್ಯಾಕೋಡ್ ಹಾಕಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ನೀವು ಕ್ಯಾಪ್ಚ್ಯಾ ಕೋಡ್ ಸರಿಯಾಗಿ ನಮೂದಿಸಿದರೆ ಮಾತ್ರ ನಿಮಗೆ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ಪ್ರೊಪೋಸಲ್ ಸಂಖ್ಯೆ, ಮೊಬೈಲ್ ನಂಬರ್ ಕೊನೆಯ ಮೂರು ಅಂಕಿಗಳು, ನಿಮ್ಮ ಹೆಸರು ಕಾಣಿಸುತ್ತದೆ. ಅದರ ಮುಂದೆ ಸ್ಟೇಟಸ್ ಅಂದರೆ ನಿಮ್ಮ ಅರ್ಜಿಯ ಸ್ಟೇಟಸ್ ಕಾಣಿಸುತ್ತದೆ ಅರ್ಜಿ ಬೆಳೆ ನೋಂದಣಿಯು ಪ್ರಗತಿಯಲ್ಲಿದೆಯೇ? ಅರ್ಜಿಯನ್ನುತೆಗೆದುಹಾಕಲಾಗಿದೆಯೇ ಅಥವಾ ಅಥವಾ ಸ್ವೀಕೃತವಾಗಿದೆಯೋ ಎಬುದು ಕಾಣಿಸುತ್ತದೆ. ನೀವು ಎಲ್ಲಿ ಬೆಳೆ ವಿಮೆ ಹಣ ಪಾವತಿಸಿದ್ದೀರಿ ಅದು ಪೇಮೆಂಟ್ ಸಕ್ಸೆಸ್ ಫುಲ್ ಆಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅದರ ಮುಂದುಗಡೆ ಕಾಣಿಸುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ View Details ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಬೆಳೆ ವಿಮೆ ಜಮೆಯಾಗಿಲ್ಲವೇ? ಈ ಸಹಾಯವಾಣಿ ನಂಬರಿಗೆ ಕರೆ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ತಮಗೆ ಬೆಳೆ ವಿಮೆ ಹಣ ಜಮೆ ಕುರಿತಂತೆ ಮಾಹಿತಿ ಕೇಳಲು 1800 180 1551 ಗೆ ಕರೆ ಮಾಡಿ ವಿಚಾರಿಸಬಹುದು.
ಬೆಳೆ ವಿಮೆ ಪಾವತಿಸಿದ ನಂತರ ರೈತರೇನು ಮಾಡಬೇಕು?
ಬೆಳೆ ವಿಮೆ ಪಾವತಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೂ72 ಗಂಟೆಯೊಳಗೆ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ದೂರು ನೀಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ದೂರು ನೀಡಿದ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ. ಯಾವ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ ಎಂಬುದನ್ನು ಪರಿಶೀಲಿಸಿ ವಿಮಾ ಕಂಪನಿಗೆ ವಿಮೆ ಹಣ ಪಾವತಿಸಲು ವರದಿ ಸಲ್ಲಿಸುತ್ತಾರೆ. ಆಗ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗಲಿದೆ. ಇಲ್ಲದಿದ್ದರೆ ಬೆಳೆ ಹಾಳಾದರೂ ಸಹ ವಿಮೆ ಹಣ ಜಮೆಯಾಗುವುದಿಲ್ಲ.