eKYC is Mandatory ಇಕೆವೈಸಿ ಮಾಡಿದರೆ ಮಾತ್ರ ರೈತರಿಗೆ ಪಿಎಂ ಕಿಸಾನ್ ಹಣ ಜಮೆ 2024

Written by Admin

Published on:

Spread the love

eKYC is Mandatory: ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಇಕೆವೈಸಿ ಆದರೆ ಮಾತ್ರ ರೈತರಿಗೆ ಮುಂದಿನ ಕಂತಿನ ಹಣ ಜಮೆಯಾಗಲಿದೆ. ಇಲ್ಲದಿದ್ದರೆ ನೋಂದಣಿ ಮಾಡಿಸಿದ ಎಲ್ಲಾರೈತರು ಪಿಎಂ ಕಿಸಾನ್ ಯೋಜನೆಯಿಂದ ವಂಚಿತಗೊಳ್ಳಲಿದ್ದಾರೆ. ನೋಂದಣಿ ಮಾಡಿಸಿದರೂ ಯೋಜನೆಯಿಂದ ವಂಚಿತರಾಗುವ ಸಾಧ್ಯತೆಯಿದೆಯೇ? ಇದು ನಿಜವೇ? ಹೌದು, ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಏನಿದು ಇಕೆವೈಸಿ (eKYC is Mandatory)

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಪಾರದರ್ಶಕವಾಗಿ ಯೋಜನೆಯ ಸೌಲಭ್ಯ ಒದಗಿಸಲು ಇಕೆವೈಸಿ ಕಡ್ಡಾಯಗೊಳಿಸಲಾಗಿದೆ. ರೈತರು ಒಮ್ಮೆ ಇಕೆವೈಸಿ ಮಾಡಿಸಿದರೆ ಸಾಕು, ಮುಂದಿನ ಅಂದರೆ 16ನೇ ಕಂತಿನ ಹಣ ಜಮೆಯಾಗಲಿದೆ. ಏಕೆಂದರೆ ಅರ್ಹತೆ ಇಲ್ಲದವರು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದರು. ಹಾಗಾಗಿ ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ಇಕೆವೈಸಿ ಕಡ್ಡಾಯಗೊಳಿಸಲಾಗಿದೆ.

eKYC is Mandatory
PM kisan eKYC is Mandatory for Pm kisan beneficiary

ಏನಿದು ಪಿಎಂ ಕಿಸಾನ್ ಯೋಜನೆ?

ಪಿಎಂ ಕಿಸಾನ್ ಯೋಜನೆಯನ್ನು 2018-19ನೇ ಸಾಲಿನಲ್ಲಿ ಆರಂಭಿಸಲಾಯಿತು. ಆರಂಭದಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಸಂಖ್ಯೆ ತುಂಬಾ ಕಡಿಮೆ ಇತ್ತು. ನಂತರದ ದಿನಗಳಲ್ಲಿ ರೈತರಲ್ಲಿ ಪಿಎಂ ಕಿಸಾನ್  ಯೋಜನೆಯ ಕುರಿತು ಜಾಗೃತಿ ಮೂಡತೊಡಗಿತು. ಹಾಗಾಗಿ 2019-20 ರಿಂದ 2020-21 ನೇ ಸಾಲಿನಲ್ಲಿ ಅತೀ ಹೆಚ್ಚು ರೈತರು ಪಿಎಂ ಕಿಸಾನ್ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರು. ಆರಂಭದಲ್ಲಿ ಯಾವುದೇ ಷರತ್ತಿರಲಿಲ್ಲ. ಹಾಗಾಗಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರಿಗೂ ಹಣ ಜಮೆ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಅರ್ಹತೆ ಇಲ್ಲದವರೂ ಸಹ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದರು.

eKYC is Mandatory ಇಕೆವೈಸಿ ಏಕೆ ಕಡ್ಡಾಯ ಮಾಡಲಾಯಿತು?

ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇಲ್ಲದ ರೈತರು ಸಹ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಹೌದು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಹಾಗೂ ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನ ಸದಸ್ಯರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಹಾಗಾಗಿ ಪಾರದರ್ಶಕವಾಗಿ ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯನ್ನು ತಲುಪಿಸುವುದಕ್ಕಾಗಿ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಯಿತು.

ಇಕೆವೈಸಿ ಮಾಡಿಸಿದ್ದರೂ ಕೆಲವು ರೈತರಿಗೇಕೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತಿಲ್ಲ?

ಹೌದು, ಪಿಎಂ ಕಿಸಾನ್ ಯೋಜನೆಗೆ ಎಲ್ಲಾ ಅರ್ಹತೆ ಹೊಂದಿದ್ದರೂ ಸಹ ಕೆಲವು ರೈತರಿಗೆ ಯೋಜನೆಯ ಲಾಭ ತಲುಪುತ್ತಿಲ್ಲ. ಏಕೆಂದರೆ ದಾಖಲೆಗಳ ಸಮಸ್ಯೆ. ಅಂದರೆ ಆಧಾರ್ ಕಾರ್ಡ್ ನಲ್ಲಿರುವಂತೆ ಜಮೀನಿನ ದಾಖಲೆಗಳಲ್ಲಿ ಹೆಸರು ಇಲ್ಲ. ಇನ್ನೂ ಕೆಲವರದ್ದು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಜಮೀನಿನ ಪಹಣಿಯ ದಾಖಲೆಗಳ ಹೆಸರು ತಾಳೆಯಾಗುತ್ತಿರಲಿಲ್ಲ. ಹಾಗಾಗಿ ಕೆಲವು ರೈತರಿಗೆ ಅರ್ಹತೆ ಇದ್ದರೂ ಯೋಜನೆಯ ಲಾಭ ಸಿಗುತ್ತಿರಲಿಲ್ಲ.

ಪಿಎಂ ಕಿಸಾನ್ ಯೋಜನೆಗೆ ನಿಮ್ಮ ಇಕೆವೈಸಿ ಆಗಿದೆಯೇ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಹೆಸರಿಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ e KYC ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಆಗ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.

ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ekYC successfully done ಎಂಬ ಮೆಸೆಜ್ ಕಾಣಿಸುತ್ತದೆ. ಒಂದು ವೇಳೆ ನಿಮ್ಮ ಹೆಸರಿಗೆ ಇಕೆವೈಸಿ ಆಗದೆ ಇದ್ದರೆ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಟಿಪಿ ಬರುತ್ತದೆ. ಓಟಿಪಿ ಹಾಕಿ ನೀವು ಇಕೆವೈಸಿ ಮಾಡಿಕೊಳ್ಳಬಹುದು.

ಮೊಬೈಲ್ ನಲ್ಲಿ ಇಕೆವೈಸಿ ಆಗದಿದ್ದರೆ ರೈತರೇನು ಮಾಡಬೇಕು?

ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ಸಮಸ್ಯೆಯಾಗುತ್ತಿದ್ದರೆ ಕೂಡಲೇ ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಗಳಿಗೆ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಕೊಳ್ಳಬಹುದು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ದಾಖಲೆ ಸಲ್ಲಿಸಿ ರೈತರು ಇಕೆವೈಸಿ ಮಾಡಿಕೊಳ್ಳಲು ಕೋರಲಾಗಿದೆ.

ಪಿಎಂ ಕಿಸಾನ್ ಯೋಜನೆಯ 16ನೇ ಕಂತು ಯಾವಾಗ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಮಾರ್ಚ್ ತಿಂಗಳ ಅಂತ್ಯದಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಏಪ್ರೀಲ್  ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಹಾಗಾಗಿ ಮಾರ್ಚ್ ತಿಂಗಳಲ್ಲೇ ಜಮೆಯಾಗುವ ಸಾಧ್ಯತೆಯಿದೆ. ಇಕೆವೈಸಿ ಮಾಡದ ರೈತರಿಗೆ ಮುಂದಿನ ಕಂತು ಅಂದರೆ 16ನೇ ಕಂತಿನ ಹಣ ಜಮೆಯಾಗುವುದಿಲ್ಲ. ಹಾಗಾಗಿ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು.

ಪಿಎಂ ಕಿಸಾನ್ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Enter Registration No ನಲ್ಲಿರೈತರು  ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ . Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

eKYC is Mandatory ಇಕೆವೈಸಿ ಮಾಡಿದರೆ ಮಾತ್ರ ರೈತರಿಗೆ ಪಿಎಂ ಕಿಸಾನ್ ಹಣ ಜಮೆ 2024

ಒಂದು ವೇಳೆ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನೆನಪಿಲ್ಲವಾದರೆ  Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್  ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.

ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ  ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಿಲ್ಲೆಗೆ ಸಂಬಂಧಿಸಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡ ನಂತರ ಬ್ಲಾಕ್ ನಲ್ಲಿಯೂ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ ನಿಮ್ಮ ಗ್ರಾಮ ಆಯ್ಕೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ.

ಈ ಪಟ್ಟಿಯಲ್ಲಿರುವ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆಯೇ?

ಪಿಎಂ ಕಿಸಾನ್ ಯೋಜನೆಯ ಗ್ರಾಮವಾರು ಪಟ್ಟಿಯಲ್ಲಿರುವ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಏಕೆಂದರೆ ಈಗ ಯೋಜನೆಯ ಲಾಭ ಪಡೆಯಲು ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದಿಲ್ಲ. ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೆಂದು ನಿರ್ಲಕ್ಷ ಮಾಡಮಾಡಬಾರದು.

Leave a Comment