Land RTC information ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ಪಹಣಿ, ಆಕಾರ್ ಬಂದ್, ಮುಟೇಶನ್, ಪಹಣಿ ಖಾತಾ, ಮೋಜಿನಿ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ರೈತರು ತಮ್ಮ ಜಮೀನಿನ ದಾಖಲೆಗಳನ್ನು ಪಡೆಯಲು ಈಗ ತಹಶೀಲ್ದಾರ್ ಕಚೇರಿ, ನಾಡ ಕಚೇರಿಗಳ ಮುಂದೆ ತಾಸುಗಟ್ಟಲೇ ಸರತಿಯಲ್ಲಿ ನಿಲ್ಲಬೇಕಿಲ್ಲ. ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ನಿಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.. ಹೌದು, ಮನೆಯಲ್ಲಿಯ ಕುಳಿತು ಯಾರ ಸಹಾಯವೂ ಇಲ್ಲದೆ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಜಮೀನಿನ ಪಹಣಿ, ಆಕಾರಬಂದ್, ಖಾತಾ ಹಾಗೂ ಮುಟೇಶನ್ ಪ್ರತಿಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಜಮೀನಿನ ಇಷ್ಟೆಲ್ಲಾ ದಾಖಲೆಗಳನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕು ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
Land RTC information ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಯಾವುದು ಜಮೀನನ ಪಹಣಿಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ರೈತರು ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಹಾಗೂ ಯಾವ ಜಮೀನಿನ ಸರ್ವೆ ನಂಬರ್ ಪಹಣಿ ಪಡೆದುಕೊಳ್ಳಬೇಕೆಂದುಕೊಂಡಿದ್ದಾರೋ ಆ ಸರ್ವೆ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಬೇಕು. ನಂತರ Sunoc ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Hissa Number ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Period ನಲ್ಲಿ2021 2022-2023 ಆಯ್ಕೆ ಮಾಡಿಕೊಳ್ಳಬೇಕು. Year ನಲ್ಲಿ 2022-2023 ಆಯ್ಕೆ ಮಾಡಿಕೊಂಡು Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿ ಸರ್ವೆ ನಂಬರಿನಲ್ಲಿ ಬರುವ ಜಮೀನಿನ ಮಾಲಿಕರ ಹೆಸರು ಕಾಣುತ್ತದೆ. ಅವರ ಹೆಸರಿನಲ್ಲಿ ಎಷ್ಟು ಎಕರೆ ಜಮೀನಿದೆ ಎಂಬುದು ಕಾಣುತ್ತದೆ. ಅಲ್ಲಿ ಕಾಣುವ View ಮೇಲೆ ಕ್ಲಿಕ್ ಮಾಡಿದಾಗ ಪಹಣಿ ಓಪನ್ ಆಗುತ್ತದೆ.
Land RTC information ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಈ
https://bhoomojini.karnataka.gov.in/service39/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ನಮೂದಿಸಬೇಕು . ನಂತರ Sunoc ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Hissa Number ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. ನಂತರ View Akarband ಮೇಲೆ ಕ್ಲಿಕ್ ಮಾಡಿದರೆ ಸಾಕು, ಆಕಾರಬಂದ್ ಪ್ರತಿ ಓಪನ್ ಆಗುತ್ತದೆ.
Land RTC information ಜಮೀನಿನ ಮುಟೇಶನ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಮುಟೇಶನ್ ಚೆಕ್ ಮಾಡಲು ಈ
https://landrecords.karnataka.gov.in/Service11/MR_MutationExtract.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ನಮೂದಿಸಿ Fetch Details ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿದ ಜಮೀನಿನ ಸರ್ವೆ ನಂಬರ್ ಹಾಗೂ ಹಿಸ್ಸಾ ನಂಬರ್ ನಲ್ಲಿ ಜಮೀನಿನ ವರ್ಗಾವಣೆ ಹೇಗಾಗಿದೆ ಎಂಬ ಮಾಹಿತಿ ಇರುತ್ತದೆ.
ಇದನ್ನೂ ಓದಿ : Crop loan waive money: ಸಾಲ ಮನ್ನಾ ಹಣ ಬಿಡುಗಡೆ 2024
ಅಲ್ಲಿ ನಿಮ್ಮ ಹಿಸ್ಸಾ ನಂಬರ್ ಹಿಂದೆ ಕಾಣುವ Select ಮೇಲೆ ಕ್ಲಿಕ್ ಮಾಡಿ ನಂತರ Preview ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಜಮೀನಿನ ಮುಟೇಶನ್ ಪ್ರತಿ ಓಪನ್ ಆಗುತ್ತದೆ.
ನಿಮ್ಮ ಜಮೀನಿನ ಖಾತಾ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಖಾತಾ ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://landrecords.karnataka.gov.in/service64/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ Search by Survey Number ಮೇಲೆ ಕ್ಲಿಕ್ ಮಾಡಿ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ಹಾಕಿದ ನಂತರ Go ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಿದ ನಂತರ ಖಾತಾ ನಂಬರ್ ಕಾಣುತ್ತದೆ. ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದ ಮೇಲೆ Preview ಮೇಲೆ ಕ್ಲಿಕ್ ಮಾಡಿ ಖಾತಾ ಪ್ರತಿ ಪಡೆದುಕೊಳ್ಳಬಹುದು.
ಮೋಜಿನಿ ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಬಳಿಯಿರುವ ಸ್ಮಾರ್ಟ್ ಫೋನಿನಲ್ಲಿ ಮೋಜಿನಿಗೆ ಅರ್ಜಿ ಸಲ್ಲಿಸಿದವರು ಈ
https://bhoomojini.karnataka.gov.in/service19/report/Applicationdetails
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೋಜಿನಿಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಅಪ್ಲಿಕೇಶನ್ ನಂಬರ್, ಮೊಬೈಲ್ ನಂಬರ್ ಹಾಗೂ ಸರ್ವೆ ನಂಬರ್ ಹೀಗೆ ಮೂರು ಆಯ್ಕೆಗಳಿರುತ್ತವೆ.
ಅಲ್ಲಿ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ ನಿಮ್ಮ ಜಿಲ್ಲೆ, ನಿಮ್ಮ ತಾಲೂಕು, ನಿಮ್ಮ ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಯಾವ ಸರ್ವೆ ನಂಬರ್ ಮೋಜಿನಿಗೆ ಅರ್ಜಿ ಸಲ್ಲಿಸಿದ್ದೀರೋ ಆ ಸರ್ವೆ ನಂಬರ್ ನಮೂದಿಸಿ ಗೋ ಮೇಲೆ ಕ್ಲಿಕ್ ಮಾಡಬೇಕು.
ಆಗ ಸರ್ನೋಕ್ ಮತ್ತು ಹಿಸ್ಸಾ ನಂಬರ್ ಆ್ಯಕ್ಟಿವ್ ಆಗುತ್ತದೆ. ಸೆಲೆಕ್ಟ್ ಸರ್ನೋಕ್ ನಲ್ಲಿ * ಹಿಸ್ಸಾ ನಂಬರ್ ಗೊತ್ತಿದ್ದರೆ ಹಿಸ್ಸಾ ನಂಬರ್ ಹಾಕಬೇಕು. ಇಲ್ಲದಿದ್ದರೆ * ನಮೂದಿಸಬೇಕು. ಇದಾದ ಮೇಲೆ ಗೆಟ್ ಸ್ಟೇಟಸ್ ಮೇಲೆ ಚೆಕ್ ಮಾಡಬೇಕು.
ಆಗ ಕೆಳಗಡೆ ಅಪ್ಲಿಕೇಶನ್ ನಂಬರ್, ಟ್ರ್ಯಾಕ್ ಸ್ಟೇಟಸ್, ತಾಲೂಕು, ಗ್ರಾಮ, ಅರ್ಜಿಯ ವಿಧ, ಸರ್ವೆ ನಂಬರ್, ಅರ್ಜಿ ಕೊಟ್ಟ ದಿನ, ಅರ್ಜಿ ಸಲ್ಲಿಸಿದವರ ಹೆಸರು, ನಿಮ್ಮ ಮೊಬೈಲ್ ನಂಬರಿನ ಕೊನೆಯ ನಾಲ್ಕು ಅಂಕೆಗಳು ಕಾಣುತ್ತವೆ. ಟ್ರಾಕ್ ಸ್ಟೇಟಸ್ ಕೆಳಗಡೆ ಕಾಣುವ ಬಾಕ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ಅರ್ಜಿ ಸ್ವೀಕರಿಸಿದ ದಿನ, ಸರ್ವೆಯರ್ ಅರ್ಜಿ ನೋಡಿದ ದಿನ, ಸೂಪರ್ ವೈಸರ್ ಅರ್ಜಿ ಸ್ವೀಕರಿಸಿದ ದಿನ, ಒಂದು ವೇಳೆ ಅರ್ಜಿ ತಿರಸ್ಕೃತಗೊಂಡಿದ್ದರೆ ಆ ದಿನಾಂಕ ಹಾಗೂ ಅರ್ಜಿಯನ್ನು ತಹಶೀಲ್ದಾರರು ನೋಡಿದ್ದಾರೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಮೋಜಿನಿಗೆ ಸಲ್ಲಿಸಿದ ಅರ್ಜಿಯ ಪ್ರಕಾರ ಯಾವ ದಿನಾಂಕದಂದು ಮೋಜಿನಿ ಮಾಡಲು ಬರುತ್ತಾರೆ? ಯಾರು ಬರುತ್ತಾರೆ ಎಂಬಿತ್ಯಾದಿ ಮಾಹಿತಿ ಕಾಣುತ್ತದೆ.