Grahalakshmi Scheme status 2024 ಮೊಬೈಲ್ ನಲ್ಲೇ ಚೆಕ್ ಮಾಡಿ

Written by Admin

Updated on:

Spread the love

Grahalakshmi Scheme status : ಗೃಹಲಕ್ಷ್ಮೀ ಯೋಜನೆ ಎಂದರೇನು? ಯಾವ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ.

ಈ ಯೋಜನೆಗೆ ಯಾವ ಯಾವ ಮಹಿಳೆಯರು ಅರ್ಹರಾಗಿದ್ದಾರೆ? ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಯಾವ ಯಾವ ದಾಖಲೆ ಬೇಕು? ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಯಾರು ಅರ್ಹರು ಮತ್ತು ಅನರ್ಹರು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಪಾವತಿಸಲು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.

Grahalakshmi Scheme status

Grahalakshmi Scheme status check in mobileಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಈಗಾಗಲೇ ಮೊದಲ ಕಂತಿನ ಹಣ ಜಮೆ ಮಾಡಲಾಗಿದೆ. ಇನ್ನೂಲಕ್ಷಾಂತರ ಜನರಿಗೆ ತಾಂತ್ರಿಕ ಕಾರಣಗಳಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಮೊದಲ ಕಂತಿನಲ್ಲಿ ಹಣ ಜಮೆಯಾಗದವರಿಗೆ ಅತೀ ಶೀಘ್ರದಲ್ಲಿ ಮೊದಲ ಕಂತಿನಲ್ಲಿ ವಂಚಿತರಾಗಿದ್ದವರಿಗೆ ಹಣ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಇದನ್ನೂ ಓದಿBaragala parihara hana bidugade 2023-24 ನಿಮಗೆಷ್ಟು ಜಮೆ? ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದೀರಾ? ನಿಮಗೆ ನೋಂದಣಿ ಮಾಡಿಸಿದ ನಂತರ ಹಣ ಜಮೆಯಾಗುತ್ತಿಲ್ಲವೇ? ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದಿಲ್ಲವೇ? ನಿಮಗೆ ಹಣ ಜಮೆಯಾಗುತ್ತೋ ಇಲ್ಲಿವೋ ಎಂಬುದನ್ನು ನೋಡಲು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Grahalakshmi Scheme status ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Grahalakshmi Scheme status ಹಣ ಜಮೆಯಾಗಬೇಕಾದರೆ ಯಾವ  ಅರ್ಹತೆಗಳು ಬೇಕು?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಕೆಳಗಡೆ ನೀಡಲಾದ ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿeKYC is Mandatory ಈ ರೈತರಿಗೆ ಪಿಎಂ ಕಿಸಾನ್ ಹಣ ಜಮೆ 2024

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.  ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ನೀವು ಮೇಲಿನ ಅರ್ಹತೆ ಪಡೆದಿದ್ದರೂ ಹಣ ಜಮೆಯಾಗದಿದ್ದರೆ ಆಶಾ ಕಾರ್ಯಕರ್ತೆಯರಿಗೆ ಭೇಟಿಯಾಗಬಹುದು.

Grahalakshmi Scheme status ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು    

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ.  ಅರ್ಜಿ ಸಲ್ಲಿಸುವಾಗ ರೇಶನ್ ಕಾರ್ಡ್ ನೊಂದಿಗೆ ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿರುತ್ತದೆ. ತಡೆಹಿಡಿಯಲಾದ ಅಥವಾ ರದ್ದು ಗೊಳಿಸಲಾದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುವುದಿಲ್ಲ.

ಗೃಹಲಕ್ಷ್ಮೀ ಯೋಜನೆಯ ಹಣ ಇದೇ ತಿಂಗಳು ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ಒಮ್ಮೆ ನಿಮ್ಮಹೆಸರು ಎಲ್ಲಾ ದಾಖಲೆಗಳಲ್ಲಿ ಒಂದೇ ರೀತಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.

Leave a Comment