10 days Goat farming training ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Written by Admin

Published on:

Spread the love

10 days Goat farming training : ಕುರಿ ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. 10 ದಿನಗಳ ಉಚಿತ ತರಬೇತಿ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು,ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಮಾರ್ಚ್ 11 ರಿಂದ 20 ರವರೆಗೆ 10 ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಹೌದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಎಸ್.ಬಿ.ಐ ಆರ್.ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್, ಅಂತ್ಯೋದಯ ರೇಶನ್, ಎಮ್.ಜಿ.ಎನ್.ಆರ್.ಇ.ಜಿ.ವಿ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2024 ರ ಮಾರ್ಚ್ 9 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿಇದೇ ಮಾರ್ಚ್ 9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

 

10 days goat farming training
10 days goat farming training

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

10 days Goat farming training  ಕುರಿ ಸಾಕಾಣಿಕೆಗೆ ಯಾವ ಯಾವ ದಾಖಲೆ ಬೇಕು?         

ಕುರಿ ಸಾಕಾಣಿಕೆ ಮಾಡಲು ಬಯಸುವವರಿಗೆ ಆಸಕ್ತಿ ಇರಬೇಕು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ರೇಶನ್ ಕಾರ್ಡ್ ಇರಬೇಕು. ರೈತರ ಬಳಿ ಮೊಬೈಲ್ ನಂಬರ್ ಇರಬೇಕು. ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿಮಾಡಿ ಮಾರ್ಚ್ 9 ರೊಳಗೆ ಅರ್ಜಿ ಸಲ್ಲಿಸಬೇಕು.

10 days Goat farming training  ಕುರಿ ಸಾಕಾಣಿಕೆಯಲ್ಲಿ ಆಸಕ್ತಿ ಇದೆಯೇ?

ಪಶು ಸಾಕಾಣಿಕೆಯಲ್ಲಿ ಆಸಕ್ತಿಇರುವವರು ನಿಮ್ಮ ಜಿಲ್ಲೆಯಲ್ಲಿ ಯಾವಾಗ ಕುರಿ ಮೇಕೆ ಸಾಕಾಣಿಕೆ ತರಬೇತಿ ನೀಡಲಾಗುವುದು ಎಂಬುದರ ಕುರಿತು ಮಾಹಿತಿ ನೀಲು ಉಚಿತ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಹೌದು, ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.  ಪ್ರಾಣಿ ಕಲ್ಯಾಣ ಸಹಾಯವಾಣಿ ನಂಬರ್ ಗೆ ಕರೆ ಮಾಡಿದ ಸಾಕು, ನಿಮಗೆ ಎಲ್ಲಾ ಮಾಹಿತಿ ಸಿಗಲಿದೆ. ಪ್ರಾಣಿ ಕಲ್ಯಾಣ ಸಹಾಯವಾಣಿ ನಂಬರ್ 8277 100 200 ಗೆ ಕರೆ ಮಾಡಿ ನೀವು ಮಾಹಿತಿ ಪಡೆಯಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದು ಯಾವ ಯಾವ ಸೌಲಭ್ಯ ಪಡೆಯಬಹುದು?

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದು ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಕಸಬುಗಳಲ್ಲಿ ತೊಡಗಿಸಿಕೊಂಡ ರೈತರಿಗೆ ಅಲ್ಪಾವಧಿಯ ದುಡಿಯುವ ಬಂಡವಾಳಕ್ಕೆ ಆರ್ಥಿಕ ನೆರವು ನೀಡುವ ಸುದ್ದೇಶ ಹೊಂದಿದೆ.

Goat training
Goat training 10 days

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು 3 ಲಕ್ಷ ರೂಪಾಯಿಯವರೆಗೆ ದೊರೆಯುತ್ತದೆ. ಪ್ರತಿ ರೈತರಿಗೆ 1.60 ಲಕ್ಷಸಾಲ ಸೌಲಭ್ಯವನ್ನು ಯಾವುದೇ ಭದ್ರತೆಯಿಲ್ಲದೆ ಪಡೆಯುವ ಅವಕಾಶವಿರುತ್ತದೆ.

ಇದನ್ನೂ ಓದಿ : Crop Insurance money released-2024 ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ

ಕಿಸಾನ್ ಕ್ರೆಡಿಟ್ ಕಾರ್ಡ್ ನಿಂದ ಪಡೆಯುವ ಸಾಲಕ್ಕೆ ಶೇ. 2 ರಷ್ಟು ಸಹಾಯಧನ ನೀಡಲಾಗುವುದು. ಈ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಹೆಚ್ಚುವರಿಯಾಗಿ ವಾರ್ಷಿಕ ಶೇ. 3 ರ ಷ್ಟು ಬಡ್ಡಿ ಸಹಾಯಧನ ಸೌಲಭ್ಯ ಸಹ ಪಡೆಯಬಹುದು.

ಉದ್ಯಮ ಶೀಲ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆಯಾಗಿದೆ.

Leave a Comment