Baragala Parihara beneficiary list 2024 ಈ ಲಿಸ್ಟ್ ನಲ್ಲಿದ್ದವರಿಗೆ ಪರಿಹಾರ

Written by Admin

Published on:

Spread the love

Baragala Parihara beneficiary list 2024 : ಬರಗಾಲ ಪರಿಹಾರ ಹಣಕ್ಕಾಗಿ ಕಾಯುತ್ತಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ.

ಇದೇನಪಾ ಅದ್ಯಾವುದು ಸಂತಸದ ಸುದ್ದಿ ಅಂದುಕೊಂಡಿದ್ದೀರಾ? ಬರಗಾಲ ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಲಿಸ್ಟ್ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ನೀವು ಅಂದುಕೊಂಡಿದ್ದು ನಿಜ. ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ಚೆಕ್ ಮಾಡಬಹುದು.

Baragala Parihara beneficiary list

Baragala Parihara beneficiary list 2024 ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು.  ಬರಗಾಲ ಪರಿಹಾರ ಪಡೆಯುವವರ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು.

Baragala Parihara beneficiary list 2024 ನಿಮಗೆ ಪರಿಹಾರ ಹಣ ಜಮೆಯಾಗಬಹುದೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬರ ಪರಿಹಾರ ಪಡೆಯುವವರ ಲಿಸ್ಟ್ ಬಿಡುಗಡೆಯಾಗಿದೆ.  ಬರ ಪರಿಹಾರ ಹಣ ಜಮೆಯಾಗಬಹುದೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ನಂತರ Find the details ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನ್ನು ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಕಾಣಿಸುತ್ತದೆ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು. ಒಂದು ವೇಳೆ ನಿಮ್ಮ ಹೆಸರಿಗೆ ಫ್ರೂಟ್ಸಐಡಿ ಇಲ್ಲದಿದ್ದರೆ ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬೇಕು.

ಫ್ರೂಟ್ಸ್ ತಂತ್ರಾಂಶದಲ್ಲಿ ಕೂಡಲೇ ಭೂ ವಿವರ ನೋಂದಾಯಿಸಿ                                   

ರೈತರು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ಹೌದು, ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳನ್ನು ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಾಡುವಂತೆ ಕೋರಲಾಗಿದೆ.

Baragala Parihara beneficiary list 2024 ಬರಗಾಲ ಪರಿಹಾರ ಯಾವ ರೈತರಿಗೆ ಎಷ್ಟು ಸಿಗಲಿದೆ?

Baragala parihara report

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದ 200 ಕ್ಕೂ ಹೆಚ್ಚು ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು.

ಇದನ್ನೂ ಓದಿ Annabhagya yojaneya status – 2024 ಮೊಬೈಲ್ ನಲ್ಲೇ ಚೆಕ್ ಮಾಡಿ

ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಬರ ಪರಿಹಾರ ನೀಡಲು ರಾಜ್ಯ ಸರ್ಕಾರವು ಈಗಗಲೇ ಮನವಿ ಮಾಡಿದೆ. ಅದಕ್ಕಿಂತ ಮುಂಚಿತವಾಗಿ ರಾಜ್ಯ ಸರ್ಕಾರವು ರೈತರಿಗೆ ನೆರವಾಗಲೆಂದು ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪರಿಹಾರ ಜಮೆ ಮಾಡಬೇಕೆಂದು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಹಾರ ತಂತ್ರಾಂಶದಲ್ಲಿರೈತರ ಹೆಸರುಗಳನ್ನು ಸೇರ್ಪಡೆ ಕಾರ್ಯವು ನಡೆಯುತ್ತಿದೆ. ಈಗಾಗಲೇ  ಪರಿಹಾರ ತಂತ್ರಾಂಶದಲ್ಲಿ ಹೆಸರು ಸೇರ್ಪಡೆಯಾದ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಅನುಮೋದನೆ ನೀಡಿದ್ದಾರೆ.

Leave a Comment