Anganawadi job apply here : ಮಹಿಳೆಯರಿಗೆ ಗುಡ್ ನ್ಯೂಸ್. ಅಂಗನವಾಡಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗ ಈ ಕೆಳಗಡೆ ನೀಡಿದ ಮಾಹಿತಿಗಳ ಪ್ರಕಾರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೌದು, ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.
ಯಾವ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳು ಖಾಲಿ ಇವೆ?
ಕೋಲಾರ ಜಿಲ್ಲೆಯಲ್ಲಿ ಒಟ್ಟು 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Anganawadi job apply here ಅಂಗನವಾಡಿ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆಧಾರ್ ಕಾರ್ಡ್ ಹೊಂದಿರಬೇಕು. ಎಸ್ಎಸ್ಎಲ್ಸಿಯಲ್ಲಿ ಪಾಸಾದ ಅಂಕಪಟ್ಟಿ ಇರಬೇಕು. ಹುಟ್ಟಿದ ದಿನಾಂಕ ದಾಖಲೆ ಇರಬೇಕು. ವಾಸಸ್ಥಳ ಪ್ರಮಾಣ ಪತ್ರ ಇರಬೇಕು. ಯಾವ ತಾಲೂಕಿನಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುತ್ತಾರೋ ಆ ಮಹಿಳೆಯರು ಆ ತಾಲೂಕಿನ ನಿವಾಸಿಯಾಗಿರಬೇಕು.
Anganawadi job apply here ಈ ಕೆಳಗಡೆ ನೀಡಲಾದ ಮಾಹಿತಿ ಪ್ರಕಾರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/home.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರ ನೇಮಕಾತಿಗೆ ಸರ್ಕಾರದ ಮಾರ್ಗಸೂಚನೆಗಳು,
Submit Application for the post of Anganawadi worker/Mini Anganawadi workers/ Anaganawadi helper ಅಂಗನವಾಡಿ ಕಾರ್ಯಕರ್ತೆ / ಮಿನಿ ಅಂಗನವಾಡಿ ಕಾರ್ಯಕರ್ತೆಯರು / ಅಂಗನವಾಡಿ ಸಹಾಯಕರ ಹುದ್ದೆಗೆ ಹುದ್ದೆಗೆ ಅರ್ಜಿ ಸಲ್ಲಿಸಿ
Upload your Photo signature / ನಿಮ್ಮ ಭಾವಚಿತ್ರ ಸಹಿ ಅಪ್ಲೋಡ್ ಮಾಡಲು
Upload Documents / ಡಾಕ್ಯುಮೆಂಟ್ ಗಳನ್ನು ಅಪ್ಲೋಡ್ ಮಾಡಿ
Print Application ಅರ್ಜಿ ಮುದ್ರಿಸಲು ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಅಂಗನವಾಡಿ ಕಾರ್ಯಕರ್ತೆ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಅಧಿಸೂಚನೆ ಸಂಖ್ಯೆ 03H ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಾತಿ ಆಯ್ಕೆ ಮಾಡಿಕೊಳ್ಳಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Mutation check here ಜಮೀನನ ಮುಟೇಶನ್ ಮೊಬೈಲ್ ನಲ್ಲೇ ನೋಡಿ 2024
ಆಗ ನೀವು ಆಯ್ಕೆ ಮಾಡಿಕೊಂಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳು ಹಾಗೂ ಯಾವ ಜಾತಿಗೆ ಹುದ್ದೆ ಮೀಸಲಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ ಅಲ್ಲಿ ನೀವು vacancy ಕೆಳಗಡೆ ಕಾಣು ಸರ್ಕಲ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ನಮೂದಿಸಬೇಕು. ಜನ್ಮ ದಿನಾಂಕ ನಮೂದಿಸಬೇಕು. ವಯಸ್ಸು ಆಯ್ಕೆ ಮಾಡಿಕೊಳ್ಳಬೇಕು. ಎಸ್ಎಸ್ಎಲ್ಸಿ ಅಂಕಪಟ್ಟಿಯಂತೆ ಪ್ರಥಮ ಭಾಷೆ , ದ್ವಿತೀಯ ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಯಿ ತಂದೆಯ ಹೆಸರು ನಮೂದಿಸಬೇಕು. ನೀವು ವಿವಾಹಿತರೇ ಆಯ್ಕೆ ಮಾಡಿಕೊಳ್ಳಬೇಕು. ದ್ವಿತೀಯ ಪಿಯುಸಿ ಅಂಕಗಳು ನಮೂದಿಸಬೇಕು. ವಿಳಾಸ ನಮೂದಿಸಬೇಕು. ನಂತರ ಅಲ್ಲಿ ಕೇಳದಲಾದ ಅಂಗವಿಕಲ, ವಿಧವೆ, ವಿಚ್ಛೇದಿತ ಮಹಿಳೆ ಯೋಜನಾ ನಿರಾಶ್ರಿತರು ಹೀಗೆ ಅಲ್ಲಿ ಕೇಳಲಾದ ಮಾಹಿತಿಗಳನ್ನು ನೀವು ಯಾವುದಕ್ಕೆ ಸಂಬಂಧಿಸಿದ್ದೀರೋ ಅದನ್ನು ಆಯ್ಕೆ ಮಾಡಿಕೊಂಡು ಐ ಸರ್ಟಿಫೈ ಬಾಕ್ಸ್ಆಯ್ಕೆ ಮಾಡಿಕೊಳ್ಳಬೇಕು. ನಂತರ ಪ್ರಿವೀವ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.