Bara Parihara ಬರಗಾಲ ಪರಿಹಾರ ಹಣ ಈಗಾಗಲೇ ರೈತರ ಖಾತೆಗೆ ಜಮೆ ಮಾಡಲಾಗಿದೆ. ಯಾವ ಯಾವ ರೈತರಿಗೆ ಬರ ಪರಿಹಾರ ಹಣ ಜಮೆಯಾಗಿದೆ? ಯಾವ ಯಾವ ರೈತರಿಗೆ ಬರ ಪರಿಹಾರ ಹಣ ಏಕೆ ಜಮೆಯಾಗಿಲ್ಲ ಎಂಬುದನ್ನು ಈಗ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಅಪಾರ ಬೆಳೆ ಹಾಳಾಯಿತು.ರೈತರ ಸಂಕಷ್ಟ ಅರಿತ ರಾಜ್ಯ ಸರ್ಕಾರವು 220 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕು ಪ್ರದೇಶಗಳೆಂದು ಘೋಷಣೆ ಮಾಡಿತು.ಇದರಿಂದಾಗಿ ರಾಜ್ಯದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬರ ಪರಿಹಾರ ಹಣ ಜಮೆಯಾಗಬಹುದು ಎಂದು ಭಾವಿಸಲಾಗಿತ್ತು.
ಎನ್.ಡಿ.ಆರ್.ಎಫ್ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಬರಗಾಲ ರಾಜ್ಯದ ರೈತರಿಗೆ ಬರಗಾಲ ಪರಿಹಾರ ಹಣ ನೀಡಲಾಗುವುದು.
Bara Parihara ಎನ್.ಡಿ.ಆರ್.ಎಫ್. ಪ್ರಕಾರ ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?
ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ., ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ. ಅದೇ ರೀತಿ ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ಪರಿಹಾರ ನಿಗದಿ ಮಾಡಿದೆ. ಆದರೆ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ. ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಬರ ಪರಿಹಾರ ಹಣ ಜಮೆ ಮಾಡುತ್ತಿದೆ. ಈಗಾಗಲೇ ರಾಜ್ಯದ ರೈತರಿಗೆ ಬರಗಾಲ ಪರಿಹಾರ ಹಣ ಜಮೆಮಾಡಲಾಗಿದೆ.
Bara Parihara ಬರ ಪರಿಹಾರ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ? ಚೆಕ್ ಮಾಡಿ
ಬರಗಾಲ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆ ಮಾಡಲಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಹಣ ಸಂದಾಯ ವರದಿ ( Parihara payment Report) ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ನಿಮಗೆ ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಹೀಗೆ ಎರಡು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಆಗ Select Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. Select Year Type 2023-24 ಆಯ್ಕೆ ಮಾಡಿಕೊಳ್ಳಬೇಕು.
ನಿಮ್ಮ 12 ಅಂಕಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ಪ್ರಸಕ್ತಸಾಲಿನ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಒಂದು ವೇಳೆ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗದಿದ್ದರೆ Payment No mode ಎಂಬ ಸಂದೇಶ ಕಾಣಿಸುತ್ತದೆ.
ಇದನ್ನೂ ಓದಿ : Land map ನಿಮ್ಮಜಮೀನಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ 2024
ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗದರು ನಿಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಂಪರ್ಕಿಸಬೇಕು. ಏಕೆಂದರೆ ಗ್ರಾಮ ಪಂಚಾಯತ್ ಬರ ಪರಿಹಾರಕ್ಕೆ ರೈತರ ಹೆಸರುಗಳ ಪಟ್ಟಿಯನ್ನು ಕಳಿಸುತ್ತದೆ. ಗ್ರಾಮ ಪಂಚಾಯತ್ ಕಳಿಸಿದ ರೈತರ ಹೆಸರಿಗೆ ಮಾತ್ರ ಬರ ಪರಿಹಾರ ಹಣ ಜಮೆಯಾಗಲಿದೆ.
Bara Parihara ಬರ ಪರಿಹಾರ ಹಣ ಜಮೆಯಾಗಲು ಫ್ರೂಟ್ಸ್ ಐಡಿ ಹೊಂದಿರಬೇಕು.
ಹೌದು, ರೈತರು ಬರ ಪರಿಹಾರ, ಬೆಳೆ ವಿಮೆ ಪರಿಹಾರ ಹಣ ಇನ್ನೂ ಮುಂದೆ ಜಮೆಯಾಗಬೇಕಾದರೆ ಫ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ.