Bele vime Application status : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮಗೆ ವಿಮೆ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಯಾರು ಬೆಳೆ ವಿಮೆ ಹಣ ಪಾವಸಿದ್ದಾರೋ ಅವರ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಮೊದಲು ಚೆಕ್ ಮಾಡಿಕೊಳ್ಳಬೇಕು. ಅರ್ಜಿ ಸ್ವೀಕೃತವಾಗಿದ್ದರೆ ಮಾತ್ರ ನಿಮಗೆ ವಿಮೆ ಹಣ ಜಮೆಯಾಗಲಿದೆ.
Bele vime Application status ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಬೆಳೆ ವಿಮೆ ಪಾವತಿಸಿದ ರೈತರು ತಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಮೊದಲು ಚೆಕ್ ಮಾಡಬೇಕು. ಹೌದು, ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಮುಂಗಾರು ಹಂಗಾಮಿನ ಬೆಳೆ ವಿಮೆ ಅರ್ಜಿ ಸ್ಟೇಟಸ್ ಚೆಕ್ ಮಾಡಬೇಕಾದರೆ ಋತುಆ ಆಯ್ಕೆಯಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ಹಿಂಗಾರು ಹಂಗಾಮಿನಿ ಬೆಳೆ ವಿಮೆಯ ಅರ್ಜಿ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದರೆ ಋತು ಆಯ್ಕೆಯಲ್ಲಿ Rabi ಆಯ್ಕೆ ಮಾಡಿಕೊಳ್ಳಬೇಕು ನಂತರ ಮುಂದೆ /Go ಮೇಲೆ ಕ್ಲಿಕ್ ಮಾಡಬೇಕು. ನಂತರ Check Status ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಆಯ್ಕೆಮಾಡಿಕೊಳ್ಳಬೇಕು. ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡ ನಂತರ ಅಲ್ಲಿಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.
Bele vime Application status ಬೆಳೆ ವಿಮೆ ಹಣ ಜಮೆಯಾಗಬೇಕಾದರೆ ರೈತರೇನು ಮಾಡಬೇಕು?
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬಹುತೇಕ ರೈತರು ಬೆಳೆ ವಿಮೆ ಮಾಡಿಸಿರುತ್ತಾರೆ.ಆದರೆ ಬೆಳೆ ವಿಮೆ ಹಣ ಜಮೆಯಾಗಲು ಏನು ಮಾಡಬೇಕೋ ಅದೇ ಕೆಲಸವನ್ನು ಮಾಡುವುದಿಲ್ಲ. ಹಾಗಾಗಿ ಬೆಳೆ ವಿಮೆ ಮಾಡಿಸಿದ ನಂತರ ಕೆಲವು ರೈತರಿಗೆ ವಿಮೆ ಹಣ ಜಮೆಯಾಗಲ್ಲ
ಬೆಳೆ ವಿಮೆ ಹಣ ಪಾವತಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾಳಾಗಿದ್ದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ಕರೆ ಮಾಡಿದ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ. ಬೆಳೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರಬಗ್ಗ ವರದಿ ತಯಾರಿಸುತ್ತಾರೆ. ನಂತರ ಅದನ್ನು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ವಿಮೆ ಹಣ ಜಮೆ ಮಾಡಲು ಮನವಿ ಸಲ್ಲಿಸುತ್ತಾರೆ. ಆಗ ಮೇಲಧಿಕಾರಿಗಳು ಬೆಳೆ ಹಾಳಾದ ವರದಿಯನುಸಾರವಾಗಿ ಹಣ ಜಮೆ ಮಾಡಲಾಗುವುದು.
ಇದನ್ನೂ ಓದಿ : Check FID Number ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ಇಲ್ಲೇ ಚೆಕ್ ಮಾಡಿ 2024
ಪ್ರಕೃತಿ ವಿಕೋಪದಿಂದಾಗಿ ಒಂದು ವೇಳೆ ಅಧಿಸೂಚಿತ ಘಟಕದಲ್ಲಿ ಶೇಕಡಾ 25ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುತ್ತದೆ.
Bele vime Application status ಬಿತ್ತನೆ ವಿಫಲಗೊಂಡಲ್ಲಿ ಬೆಳೆ ವಿಮೆ ಹೇಗೆ ನಿರ್ಧರಿಸಲಾಗುವುದು?
ಮುಂಗಾರು ಹಿಂಗಾರು ಹಂಗಾಮನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡಾ 75ಕ್ಕಿಂ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ (Prevented Sowing/ Planting Risk) ವಿಮಾ ಮೊತ್ತದ ಗರಿಷ್ಠ 25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಬಹುದು.
ಪ್ರವಾಹದಿಂದ ಬೆಳೆ ಮುಳುಗಡೆಯಾದರೆ ವಿಮೆ ಹೇಗೆ ನಿರ್ಧರಿಸಲಾಗುವುದು?
ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ ತೀವ್ರ ಬರಗಾಲ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು ಪ್ರಾರಂಭಿಕ ಇಳುವರಿಯ ಶೇಕಡಾ 50ಕ್ಕಿಂತ ಕಡಿಮೆ ಇದ್ದರೆ ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡಲಾದ ಬೆಲೆ ವಿಮಾ ನಷ್ಟ ಪರಿಹಾರದಲ್ಲಿಶೇಕಡಾ 25 ರಷ್ಟು ಹಣವನ್ನು ಮುಂಚಿತವಾಗಿ ವಿಮೆ ಸಂಸ್ಥೆಗಳು ನೀಡುವುದು.