Bele vime ನಿಮಗೇಕೆ ಬೆಳೆ ವಿಮೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ- 2024

Written by Admin

Updated on:

Spread the love

Bele vime ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರಲ್ಲಿ ಯಾವ ರೈತರಿಗೆ ವಿಮೆ ಹಣ ಜಮೆಯಾಗುತ್ತದೆ? ಯಾವ ರೈತರಿಗೆ ಜಮೆಯಾಗುವುದಿಲ್ಲ ಇಲ್ಲಿದೆ ನೋಡಿ ಮಾಹಿತಿ.

ಬೆಳೆ ವಿಮೆ ಮಾಡಿಸಿದ ಮಾತ್ರಕ್ಕೆ ಎಲ್ಲಾ ರೈತರಿಗೆ ಬೆಳೆ ವಿಮೆಯ ಹಣ ಎಲ್ಲಾ ರೈತರಿಗೆ ಜಮೆಯಾಗುವುದಿಲ್ಲಹೌದು. ಬೆಳೆ ವಿಮೆ ಮಾಡಿಸಿದ ಎಲ್ಲಾ ವಿಮೆ ಹಣ ಜಮೆಯಾಗುವುದೇ ಇಲ್ಲ. ಏಕೆಂದರೆ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು?

Bele vime jame

ಯಾವ ರೈತರಿಗೆ ವಿಮೆ ಹಣ ಜಮೆಯಾಗುತ್ತದೆ ಎಂಬುದರಲ್ಲಿಯೂ ಕೆಲವು ಷರತ್ತುಗಳಿರುತ್ತವೆ.  ಆದರೆ ಬಹುತೇಕ ರೈತರುಈ ಷರತ್ತುಗಳನ್ನು ಪಾಲಿಸುವುದೇ ಇಲ್ಲ. ಹಾಗಾಗಿ ಬೆಳೆ ಹಾಳಾದರೂ ಕೆಲವುರೈತರಿಗೆ ವಿಮೆ ಹಣ ಜಮೆಯಾಗುವುದಿಲ್ಲ.  ಹಾಗಾದರೆ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ ಎಂಬುದರ  ಮಾಹಿತಿ ಇಲ್ಲಿದೆ.

Bele vime ಯಾವ ರೈತರಿಗೆ  ಬೆಳೆ ವಿಮೆ ಹಣ ಜಮೆಯಾಗುತ್ತದೆ?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಪ್ರಕೃತಿ ವಿಕೋಪ, ಮಳೆ ಅಭಾವ, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಶೇ. 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ, ಮೊಳಕೆಯೊಡೆಯುವುದು ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಪರಿಹಾರ ಹಣ ನೀಡಲಾಗುವುದು.

ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲದಿಂದ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು  ಶೇ. 50ಕ್ಕಿಂತ ಕಡಿಮೆ ಇದ್ದರೆ ವಿಮೆ ಮಾಡಿಸಿದ ರೈತರಿಗೆ  ವಿಮಾ ನಷ್ಟಪರಿಹಾರದಲ್ಲಿ ಶೇ. 25 ರಷ್ಟು ಹಣ ನೀಡಲಾಗುವುದು.

Bele vime ಬೆಳೆ ಹಾನಿಯಾದ ನಂತರ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕು?ನಿ

ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಸೂಚನೆ ನೀಡಬೇಕು. ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.  ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ನಂತರ ವಿಮೆ ಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸಿ  ನಷ್ಟಆದ ಸ್ಥಳಕ್ಕೆ 48 ಗಂಟೆಗಳೊಳಗಾಗಿ ಸಿಬ್ಬಂದಿ ಬಂದು ಬೆಳೆ ಹಾನಿ ಪರಿಶೀಲಿಸುತ್ತಾರೆ.

Belevime jameyagillave

ನಿಮ್ಮ ಜಿಲ್ಲೆಯ ವಿಮಾ ಕಂಪನಿ ಗೊತ್ತಿಲ್ಲವೇ?

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಈ

https://samrakshane.karnataka.gov.in/HomePages/frmKnowYourInsCompany.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಜಿಲ್ಲೆಯ ಎದುರುಗಡೆ ವಿಮಾ ಕಂಪನಿಗಳ ಹೆಸರು ಕಾಣಿಸುತ್ತದೆ.ನ

ಇದನ್ನೂ ಓದಿ land transfer ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ 2024

ಒಂದು ವೇಳೆ ಶೇ. 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೂ ಬೆಳೆ ವಿಮೆ ಪರಿಹಾರ ನೀಡಲಾಗುವುದು. ವಿಮೆ ಸಂಸ್ಥೆಯಿಂ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರು ಮತ್ತು ಸ್ಥಳೀಯ ತಾಲೂಕು, ಹೋಬಳಿ ಮಟ್ಟದ ಕಂದಾಯ, ಕೃಷಿ, ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟ ನಿರ್ಧರಿಸುತ್ತಾರೆ. ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾ ಮುಖ್ಯಸ್ಥರು ಅನುಷ್ಠಾನ ವಿಮಾ ಸಂಸ್ಥೆಗಳಿಗೆ ನೇರವಾಗಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು.

Bele vime ಬೆಳೆ ವಿಮೆ ಯಾವ ರೈತರಿಗೆ ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದರೆ ಸಾಲದು, ಬೆಳೆ ವಿಮೆ ಮಾಡಿಸಿದ ರೈತರು ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾಳಾದರೆ ವಿಮಾ ಕಂಪನಿಯವರಿಗೆ 72 ಗಂಟೆಯೊಳಗೆ ಯಾವ ರೈತರು ತಿಳಿಸುತ್ತಾರೋ ಅಂತಹ ರೈತರಿಗೆ ಮಾತ್ರ ವಿಮಾ ಹಣ ಜಮೆಯಾಗುತ್ತದೆ.

Leave a Comment