Bara paihara ಏಪ್ರೀಲ್ 29 ರೊಳಗೆ ಈ ರೈತರ ಖಾತೆಗೆ ಬರ ಪರಿಹಾರ ಬಿಡುಗಡೆ

Written by Admin

Published on:

Spread the love

Bara paihara : ಏಪ್ರೀಲ್ 29 ರೊಳಗೆ ಕರ್ನಾಟಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ. ಹೌದು, ಏಪ್ರೀಲ್ 29 ರೊಳಗೆ ಬರ ಪರಿಹಾರ ಹಣ ಬಿಡುಗಡೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ತನ್ನ ಪಾಲಿನ ಬರ ಪರಿಹಾರ ಕೊಡಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಕೋರ್ಟ್, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಕೇಂದ್ರ ಸರ್ಕಾರಗಳು ಸೌಹಾರ್ಧತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದೆ.

Bara parihara

ಬರ ಪರಿಹಾರ ಬಿಡುಗಡೆ ವಿಚಾರಣೆಗೆ ಸಂಬಂಧಿಸಿದಂತೆ ಈವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರಿಂಕೋರ್ಟ್ ಗೆ ಹೇಳಿದ್ದಾರೆ.

ಕರ್ನಾಟಕ ಭೀಕರ ಬರಗಾಲ ಪರಿಸ್ಥಿತಿಯನ್ನು ಎದುರಿಸುತ್ತಿದೆ. 2023  ರ ಖಾರೀಫ್ ಋತುವಿನಲ್ಲಿ 236 ತಾಲೂಕುಗಳ ಪೈಕಿ 223 ತಾಲೂಕುಗಳ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.  196 ತಾಲೂಕುಗಳ್ನು ತೀವ್ರ ಬರ ಪೀಡಿತ ಎಂದು ಹಾಗೂ ಉಳಿದ 27 ತಾಲೂಕುಗಳನ್ನು ಮಧ್ಯಮ ಪೀಡಿತ ಎಂದು ಗುರುತಿಸಲಾಗಿದೆ.

Bara paihara  ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ

ಬರ ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರಿಂ ಕೋರ್ಟ್ ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರಿಂಕೋರ್ಟ್  ಮಧ್ಯಸ್ಥಿಕೆಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂಓದಿ  land transfer ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ 2024

2023 ರ ಸೆಪ್ಟೆಂಬರ್ ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧರ ಕೈಗೊಳ್ಳದ ಕಾರಣ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆಗೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ಸುದೀರ್ಘ ಯಶಸ್ಸು ಸಿಕ್ಕಿದೆ ಎಂದು ಪೋಸ್ಟ್ ಮಾಡಿದ್ದಾರೆ.

Bara paihara   ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು.  ಬರಗಾಲ ಪರಿಹಾರ ಪಡೆಯುವವರ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು.

Bara paihara ನಿಮಗೆ ಪರಿಹಾರ ಹಣ ಜಮೆಯಾಗಬಹುದೇ? ಮೊಬೈಲ್ ನಲ್ಲೇ ಚೆಕ್ ಮಾಡಿ

crop damage compensation

ಬರ ಪರಿಹಾರ ಪಡೆಯುವವರ ಲಿಸ್ಟ್ ಬಿಡುಗಡೆಯಾಗಿದೆ.  ಬರ ಪರಿಹಾರ ಹಣ ಜಮೆಯಾಗಬಹುದೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ನಂತರ Find the details ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನ್ನು ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಕಾಣಿಸುತ್ತದೆ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು. ಒಂದು ವೇಳೆ ನಿಮ್ಮ ಹೆಸರಿಗೆ ಫ್ರೂಟ್ಸಐಡಿ ಇಲ್ಲದಿದ್ದರೆ ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬೇಕು.

ಫ್ರೂಟ್ಸ್ ತಂತ್ರಾಂಶ ದಲ್ಲಿ ಕೂಡಲೇ ಭೂ ವಿವರ ನೋಂದಾಯಿಸಿ                                   

ರೈತರು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ಹೌದು, ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳನ್ನು ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಾಡುವಂತೆ ಕೋರಲಾಗಿದೆ.

Leave a Comment