Bara parihara announced : ಕರ್ನಾಟಕಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯಸರ್ಕಾರದ ಹೋರಟಕ್ಕೆ ಜಯ ಸಿಕ್ಕಿದೆ.
ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮೆಟ್ಟಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ ನಲ್ಲಿ ವಾಗ್ದಾನ ನೀಡಿತ್ತು.
ಕೋರ್ಟ್ ನಲ್ಲಿ ವಿಚಾರಣೆ ಕಾಲಕ್ಕೆ, ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಲು ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.
ಇದು ರಾಜ್ಯಕ್ಕೆ ಸಿಕ್ಕಿರುವ ಜಯ ಎಂದು ಪ್ರತಿಪಾದಿಸಿದ್ದ ರಾಜ್ಯ ಸರ್ಕಾರ, ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು,ಸುಪ್ರಿಂ ಕೋರ್ಟ್ ನ ಮಧ್ಯಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟಿತ್ತು., ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದ್ದು,ರಾಜ್ಯಕ್ಕೆ ದ್ರೋಹ ಎಸಗಿದೆ ಎಂದು ರಾಜ್ಯ ಸರ್ಕಾರದ ವಾದ.
ಇದನ್ನೂ ಓದಿ land transfer ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ 2024
ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದನ ಸಿಗದೆ ಇದ್ದುದ್ದರಿಂದ ಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಬರ ಪರಿಹಾರ, ತೆರಿಗೆ ನ್ಯಾಯಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆಯನ್ನೂಸರ್ಕಾರ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದಕ್ಕೆ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿತ್ತು. ಬಳಿಕವೂ ಸಂಘರ್ಷ ಮುಂದುವರಿದಿತ್ತು.
Bara parihara announced ಈ ಲಿಸ್ಟ್ ನಲ್ಲಿದ್ದವರಿಗೆ ಪರಿಹಾರ ಜಮೆ
ಬರಗಾಲ ಪರಿಹಾರ ಹಣಕ್ಕಾಗಿ ಕಾಯುತ್ತಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಇದೇನಪಾ ಅದ್ಯಾವುದು ಸಂತಸದ ಸುದ್ದಿ ಅಂದುಕೊಂಡಿದ್ದೀರಾ? ಬರಗಾಲ ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಲಿಸ್ಟ್ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ನೀವು ಅಂದುಕೊಂಡಿದ್ದು ನಿಜ. ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ಚೆಕ್ ಮಾಡಬಹುದು.
Bara parihara announced ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಬರಗಾಲ ಪರಿಹಾರ ಪಡೆಯುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ
https://fruitspmk.karnataka.gov.in/MISReport/FarmerDeclarationReport.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು. ಬರಗಾಲ ಪರಿಹಾರ ಪಡೆಯುವವರ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು.
Bara parihara announced ಬರಗಾಲ ಪರಿಹಾರ ಯಾವ ರೈತರಿಗೆ ಎಷ್ಟು ಸಿಗಲಿದೆ?
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದ 200 ಕ್ಕೂ ಹೆಚ್ಚು ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು.
ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಬರ ಪರಿಹಾರ ನೀಡಲು ರಾಜ್ಯ ಸರ್ಕಾರವು ಈಗಗಲೇ ಮನವಿ ಮಾಡಿದೆ. ಅದಕ್ಕಿಂತ ಮುಂಚಿತವಾಗಿ ರಾಜ್ಯ ಸರ್ಕಾರವು ರೈತರಿಗೆ ನೆರವಾಗಲೆಂದು ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪರಿಹಾರ ಜಮೆ ಮಾಡಬೇಕೆಂದು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಹಾರ ತಂತ್ರಾಂಶದಲ್ಲಿರೈತರ ಹೆಸರುಗಳನ್ನು ಸೇರ್ಪಡೆ ಕಾರ್ಯವು ನಡೆಯುತ್ತಿದೆ. ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ ಹೆಸರು ಸೇರ್ಪಡೆಯಾದ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಅನುಮೋದನೆ ನೀಡಿದ್ದಾರೆ.