Baragala money ಇಂದಿನಿಂದ 34 ಲಕ್ಷ ರೈತರಿಗೆ ಬರ ಪರಿಹಾರ ಜಮೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Admin

Published on:

Spread the love

Baragala money : ರಾಜ್ಯದ 34 ಲಕ್ಷ ರೈತರ ಖಾತೆಗೆ ಇನ್ನೆರಡು ದಿನಗಳಲ್ಲಿ ಬರ ಪರಿಹಾರ ಹಣ ರೈತರ ಖಾತೆಗೆ ಜಮೆಯಾಗಲಿದೆ.

ಹೌದು, ಕಳೆದ ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರದ ಹಣ ರೈತರ ಖಾತೆಗೆ ಜಮೆಯಾಗಲಿದೆ. ಕೇಂದ್ರದಿಂದ ಬಂದಿರುವ 3454 ಕೋಟಿ ರೂಪಾಯಿ ಅನ್ನು ಇನ್ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Baragala money

ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಖುಷ್ಕಿ, ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ನಿಗಿದಿಯಾಗಿರುವ ಮೊತ್ತವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಮೊದಲಿಗೆ 15 ಲಕ್ಷ ರೈತರಿಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದೆ.  ಈ ಹಣ ರೈತರ ಖಾತೆಗೆ ಜಮೆಯಾಗಲಿದೆ.ಉಳಿದ ಮೂರ್ನಾಲ್ಕು ದಿನಗಳಲ್ಲಿ ಪರಿಹಾರದ ಹಣ ತಲುಪಲಿದೆ ಎಂದು ಕಂದಾಯ ಇಲಾಖೆ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದ ಎರಡನೇ ಹಂತದ ಚುನಾವಣೆ ವೇಳೆಗೆ ಬಹುತೇಕ ಬೆಳೆ ನಷ್ಟು ಪರಿಹಾರ ರೈತರಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರದಿಂದ ಬಂದಿರುವ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲು ಚುನಾವಣಾ ಆಯೋಗದ ಸಹಮತಿ ಪಡೆಯಲಾಗಿದ್ದು, ಫ್ರೂಟ್ಸ್ ಸಾಫ್ಟ್ ವೇರ್ ನಲ್ಲಿ ಯಾವ ರೈತರಿಗೆ ಎಷ್ಟು ಪರಿಹಾರ  ಎಂಬುದನ್ನು ಲೆಕ್ಕ ಹಾಕಲಾಗಿದೆ.

ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಹರಾಗಿದ್ದ 33.60 ಲಕ್ಷ ರೈತರ ಪೈಕಿ ಅರ್ಧ ಎಕರೆ ಮತ್ತು ಅರ್ಧಕ್ಕಿಂತ ಕಡಿಮೆ ವಿಸ್ತೀರ್ಣದ ರೈತರಿಗೆ ಮಧ್ಯಂತರ ಪರಿಹಾರದಲ್ಲೇ ಪೂರ್ಣ ಮೊತ್ತ ತಲುಪಿದ್ದು, ಉಳಿದ ರೈತರಿಗೆ ಈಗ ಬಾಕಿ ಪರಿಹಾರ ಮೊತ್ತ ತಲುಪಲಿದೆ.

Baragala money ಇನ್ನೆರಡು ದಿನಗಳಲ್ಲಿ ಈ ರೈತರ ಖಾತೆಗೆ ಬರ ಪರಿಹಾರ ಜಮೆ

ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು,  ಬರ ಪರಿಹಾರ  ಹಣ ಜಮೆಯಾಗುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಕಬೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಐಡಿ ಕಾಣಿಸುತ್ತದೆ. ನಂತರ ಪಿಎಂಕೆಐಡಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಹೆಸರು ಕಾಣಿಸುತ್ತದೆ. ಇಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗುತ್ತದೆ.

Baragala money ಬರಗಾಲ ಪರಿಹಾರ ಜಮೆಗೆ ಒತ್ತಾಯ 

bara parihara money

ಬರಗಾಲ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರವು ಕಾನೂನು ಹೋರಾಟ ಮಾಡಿತ್ತು. ಅಂದರೆ ಸುಪ್ರಿಂಕೋರ್ಟ್ ಮೆಟ್ಟಲೇರಿತು. ಆಗ ಕೇಂದ್ರ ಸರ್ಕಾರಕ್ಕೆ ಸುಪ್ರಿಂಕೋರ್ಟ್ ಸೂಚಿಸಿದ್ದರಿಂದ ಕೇಂದ್ರ ಸರ್ಕಾರವು 3454 ಹಣವನ್ನು ಬಿಡುಗಡೆ ಮಾಡಿತು. ಈ ಹಣವನ್ನೇ ರೈತರ ಖಾತೆಗೆ ಜಮೆ ಮಾಡಲಾಗುವುದು. ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಆಗಲಿದೆ. ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ Orignial land tippani ನಿಮ್ಮ ಜಮೀನಿನ ಟಿಪ್ಪಣಿ, ಪೋಡಿ ಮೊಬೈಲ್ ನಲ್ಲೇ ಚೆಕ್ ಮಾಡಿ 2024

ಈ ಚುನಾವಣೆ ಪೂರ್ವದಲ್ಲಿಯೇ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ. ಹಾಗಾಗಿ ನಿಮ್ಮ ಹೆಸರು ಬರಗಾಲ ಪರಿಹಾರ ಜಮೆಯಾಗುವವರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ಕೂಡಲೇ ಫ್ರೂಟ್ಸ್ ಐಡಿಗೆ ನಿಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಪರಿಶಿಷ್ಟ  ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು.

1 thought on “Baragala money ಇಂದಿನಿಂದ 34 ಲಕ್ಷ ರೈತರಿಗೆ ಬರ ಪರಿಹಾರ ಜಮೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ”

Leave a Comment