Baragala : ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣದಲ್ಲಿ ಮೇ 6 ರಂದು ಸೋಮವಾರ 2425 ಕೋಟಿ ರೂಪಾಯಿ ಹಣ ಜಮೆಯಾಗಿದೆ.
ಹೌದು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾವಣೆ ಮಾಡಲಾಗಿದೆ. 2-3 ದಿನಗಳಲ್ಲಿ ಎಲ್ಲಾ ರೈತರ ಖಾತೆಗಳಿಗೆ ಪರಿಹಾರ ಮೊತ್ತ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, 2023ರ ಮುಂಗಾರು ಬೆಳೆ ಹಾನಿ ಬರ ಪರಿಹಾರ ವಿತರಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಸೋಮವಾರವೇ ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ಆರ್.ಬಿ.ಐನಿಂದ ರೈತರ ಖಾತೆಗೆ ವರ್ಗಾಯಿಸಲು 48 ಗಂಟೆ ಸಮಯ ಅಗತ್ಯ. ಹೀಗಾಗಿ ಎರಡು ಮೂರು ದಿನದಲ್ಲಿ ಎಲ್ಲರಿಗೂ ಹಣ ತಲುಪಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿ ಪ್ರಕಾರ ಎನ್.ಡಿ.ಆರ್.ಎಫ್ ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ 33.58 ಲಕ್ಷ ರೈತರಿಗೆ 636.45 ಕೋಟಿ ರೂಪಾಯಿಗಳನ್ನು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲೇ ಪಾವತಿಸಲಾಗಿದೆ. ಇಧರಲ್ಲಿ 3182602 ಮಂದಿಗೆ ಹಣ ಪಾವತಿಯಾಗಿದ್ದು 2ಲಕ್ಷ ಜನರಿಗೆ ಬಾಕಿಯಿದೆ. ಈ ಪೈಕಿಅತೀ ಕಡಿಮೆ ಜಮೀನು ಹೊಂದಿರುವ 4.43 ಲಕ್ಷ ರೈತರಿಗೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಎನ್.ಡಿ.ಆರ್.ಎಫ್ ಅಡಿ ಬರ ಪರಿಹಾರ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮೊರೆ ಹೋದ ಪರಿಣಾಮ ಏಪ್ರೀಲ್ 26 ರಂದು ಕೇಂದ್ರ ಸರ್ಕಾರದ 3454.22 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಏಪ್ರೀಲ್ 2 ರಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ 3454 ಕೋಟಿ ರೂಪಾಯಿ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ತಕ್ಷಣ ಈ ಹಣವನ್ನು ರೈತರಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ.
Baragala ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿಲ್ಲವೇ? ಇಲ್ಲೇ ಚೆಕ್ ಮಾಡಿ
ಬರಗಾಲ ಪರಿಹಾರ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಹಣ ಸಂದಾಯ ವರದಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು Select Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year Type 2023-24 ಆಯ್ಕೆಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ಆಧಾರ್ ನಂಬರ್ ಹಾಕಬೇಕು. ನಂತರ Enter Captcha ನಲ್ಲಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಯಾವ ಬ್ಯಾಂಕಿಗೆ ಎಷ್ಟು ಹಣ ಜಮಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
Baragala : ಕಾನೂನು ಹೋರಾಟ ಮುಂದುವರಿಯಲಿದೆ
ಮೊದಲ ಹಂತದಲ್ಲಿ ರಾಜ್ಯ ಸರ್ಕಾರವೇ ರೈತರಿಗೆ ಬರ ಪರಿಹಾರ ಪಾವತಿಸಿದ್ದು, ಇದೀಗ ಎನ್.ಡಿ.ಆರ್.ಎಪ್ ಪರಿಹಾರ ಹಣ ಲಭ್ಯವಾಗಿದ್ದು, ಈ ಹಣವನ್ನು ನಿಯಮದಂತೆ ರೈತರ ಖಾತೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ : Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024
ಕೇಂದ್ರದಿಂದ ಇನ್ನೂ ಬಾಕಿ ಹಣ ಬರಬೇಕಾಗಿದ್ದು, ಈ ಕುರಿತು ಕೇಂದ್ರದ ಜೊತೆಗಿನ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
Baragala ನಿಮಗೆ ಬರ ಪರಿಹಾರ ಜಮೆಯಾಗಿಲ್ಲವೇ?
ನಿಮಗೆ ಬರ ಪರಿಹಾರ ಹಣ ಜಮೆಯಾಗಿಲ್ಲವೇ? ಕೂಡಲೇ ನಿಮ್ಮ ಗ್ರಾಮ ಪಂಚಾಯತಿಗೆ ಸಂಪರ್ಕಿಸಿ.ಅವರು ಬರ ಪರಿಹಾರ ಲಿಸ್ಟ ಕಳಿಸುವಾಗ ನಿಮ್ಮ ಹೆಸರು ಕಳಿಸಿದ್ದಾರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ.
ಇನ್ನೆರಡು ದಿನದಲ್ಲಿ ಎಲ್ಲಾ ರೈತರ ಖಾತೆಗೆ ಹಣ ಜಮೆಯಾಗಲಿದೆ.ನಿಮ್ಮೂರಿನಲ್ಲಿ ಕೆಲವು ರೈತರಿಗೆ ಬರ ಪರಿಹಾರ ಜಮೆಯಾಗಿದ್ದು ಇನ್ನೂ ಯಾರಿಗೆ ಬರಗಾಲ ಪರಿಹಾರ ಹಣ ಜಮೆಯಾಗಿಲ್ಲವೋ ಅವರು ಗ್ರಾಮ ಪಂಚಾಯತಿಯಲ್ಲಿ ವಿಚಾರಿಸಬಹುದು.