Bele vime money 35 ಕೋಟಿ ಬೆಳೆ ವಿಮೆ ಬಿಡುಗಡೆ-ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ

Written by Admin

Published on:

Spread the love

Bele vime : ಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಹೌದು, ಯಾವ ರೈತರು ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ್ದಾರೋ ಅಂತಹ ರೈತರಿಗೆ ಸಂತಸದ ಸುದ್ದಿ ಸಿಕ್ಕಿದೆ.

Bele vime money

ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ ಈಗ ಬೆಳೆ ವಿಮೆ ಹಣ ಜಮೆಯಾಗಿದೆ. ಯಾವ ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗಿದೆ? ಯಾವ ಬೆಳೆಗಳಿಗೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Bele vime money ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮೆ

ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕಿಗೆ (ಕೆ.ಡಿ.ಸಿ.ಸಿ ಬ್ಯಾಂಕ್) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ 41 ಕೋಟಿರೂಪಾಯಿಜಮೆ ಆಗಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳ ಬೆಳೆಗೆ ಹಾನಿಯಾಗಿ ರೈತರ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈ ಬೆಳೆ ವಿಮೆ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಲ್ಲಾಪುರ ತಾಲೂಕಿಗೆ 84,85,610, ಮುಂಡಗೋಡ ತಾಲೂಕಿಗೆ 18,41,53,186 ಹಾಗೂ ಬನವಾಸಿ  ಹೋಬಳಿ ವ್ಯಾಪ್ತಿಯಲ್ಲಿ 15,90,59,753 (ಒಟ್ಟು 35 ಕೋಟಿ ರೂಪಾಯಿ) ರೈತರಿಗೆ ಲಭಿಸಿದೆ.

ಇದನ್ನೂ ಓದಿ Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024

ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರ ಒದಗಿಸಲಾಗಿದೆ. ವಿಮೆ ಕಂಪನಿಯ ಮಾನದಂಡದ  ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಮೂಲಕ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ  ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Bele vime money ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

Bele vime money jame

ರೈತರು ತಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/        

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು Summer ಬದಲಾಗಿ Khariff ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು Check Status ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಇದಾದ ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿರುವ ಮಾಹಿತಿ ಕಾಣಿಸಲಿದೆ.

Bele vime money ಹಣ ಜಮೆಯಾಗಿಲ್ಲವಾದರೆ ನಿಮಗೆ ಪ್ರೊಪೋಸಲ್ ಸಂಖ್ಯೆ, ಮೊಬೈಲ್ ನಂಬರ್ ಕೊನೆಯ ಮೂರು ಅಂಕಿಗಳು, ನಿಮ್ಮ ಹೆಸರು ಕಾಣಿಸುತ್ತದೆ. ಅದರ ಮುಂದುಗಡೆ ವಿಮಾ ಕಂಪನಿಯಿಂದ ಅರ್ಜಿ ಸ್ವೀಕೃತವಾಗಿದೆಯ ಎಂಬ ಮಾಹಿತಿ ಕಾಣಿಸುತ್ತದೆ.ಅದರ ಮುಂದುಗಡೆ ಇರುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಅರ್ಜಿ ಯಾವಾಗ ಸ್ವೀಕೃತವಾಗಿದೆ. ಪೇಮೆಂಟ್ ಸಕ್ಸೆಸಫುಲ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ.

View Details ಮೇಲೆ ಕ್ಲಿಕ್ ಮಾಡಿದಾಗ ಹೋಬಳಿ, ಊರು, ಸರ್ವೆ ನಂಬರ್ ನಿಮ್ಮ ಹೆಸರು, ಯಾವ ಬೆಳೆ ಹಾಕಲಾಗಿದೆ ಹಾಗೂ ನಿಮಗೆ ಎಷ್ಟು ಹಣ ಜಮೆಯಾಗಬಹುದು ಎಂಬ ಮಾಹಿತಿ ಸಹ ಕಾಣಿಸುತ್ತದೆ.

Leave a Comment