Pm kisan money ಪಿಎಂ ಕಿಸಾನ್ 17ನೇ ಕಂತು ಈ ಲಿಸ್ಟ್ ನಲ್ಲಿದ್ದವರಿಗೆ ಜಮೆ ನಿಮ್ಮ ಹೆಸರು ಚೆಕ್ ಮಾಡಿ

Written by Admin

Published on:

Spread the love

Pm kisan money : ಪಿಎಂ ಕಿಸಾನ್ ಯೋಜನೆಗೆ ಈಗಾಗಲೇ ನೋಂದಣಿ ಮಾಡಿಸಿ 2 ಸಾವಿರ ರೂಪಾಯಿ ಹಣ ಜಮೆಗಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಾಗಿಯೇ  ಯಾವ ದಿನ ಪಿಎಂ ಕಿಸಾನ್ ಯೋಜನೆ ಹಣ ಜಮೆಯಾಗಲಿದೆ? ಪಿಎಂಕಿಸಾನ್ ಯೋಜನೆಯ ಹಣ ಹೆಚ್ಚಾಗಬಹುದೇ? ಅಥವಾ ಹಿಂದೆ ನೀಡುತ್ತಾ ಬರುತ್ತಿರುವ ಹಣವನ್ನು ಮುಂದುವರೆಸಬಹುದೇ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Pm kisan money

ತಮಗೆಲ್ಲಾ ಗೊತ್ತಿದ್ದ ಹಾಗೆ ಭಾರತದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರಲ್ಲಿ ಮನೆಮಾತಾಗಿದೆ.  ಈ ಯೋಜನೆಯಲಾಭ ಪಡೆಯುತ್ತಿರುವ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ 16 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ಅತೀ ಶೀಘ್ರದಲ್ಲಿ 17ನೇ ಕಂತು ಜಮೆಯಾಗುವ ಸಾಧ್ಯತೆಯಿದೆ. ಹೌದು, 17ನೇ ಕಂತಿನ ಕುರಿತಂತೆ ಇಲ್ಲಿಯವರೆಗೆ ಕೃಷಿ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗದಿದ್ದರೂ ಸಹ ಮಾಧ್ಯಮಗಳಿಗೆ ಲಭಿಸಿದ ಮೂಲಗಳ ಪ್ರಕಾರ ಮುಂದಿನ ತಿಂಗಳ ಎರಡನೇ ವಾರದಲ್ಲಿ ರೈತರ ಖಾತೆಗೆ 17ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ.

Pm kisan money ಪಿಎಂ ಕಿಸಾನ್ 17ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ?

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಲಿಸ್ಟ್ ನಲ್ಲಿ ರೈತರ ಹೆಸರಿದೆಯೋ ಇಲ್ಲವೋ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ….. ಇಲ್ಲಿದೆ ನೋಡಿ ಮಾಹಿತಿ.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ  ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾವ ಯಾವ ರೈತರು ಫಲಾನುಭವಿಗಳಾಗಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.

Pm kisan money ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸಲಾಗುವುದೇ?

ಪಿಎಂ ಕಿಸಾನ್ ಯೋಜನೆಯ17ನೇ ಕಂತಿನಿಂದ ಆರು ಸಾವಿರ ರೂಪಾಯಿ ಬದಲಾಗಿ ಎಂಟು ಸಾವಿರ ರೂಪಾಯಿ ಹೆಚ್ಚಿಸಲಾಗುತ್ತದೆ ಎಂಬ ಮಾಹಿತಿಗಳು ಕೇಳಿ ಬರುತ್ತಿವೆ. ಲೋಕಸಭಾ ಚುನಾವಣೆ ಮುಗಿದ ನಂತರ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಆ ಆಧಾರದ ಮೇಲೆ ಯೋಜನೆ ಮಾಹಿತಿ ಗೊತ್ತಾಗಲಿದೆ.

ಇದನ್ನೂ ಓದಿ Village map ಈ ಮ್ಯಾಪ್ ನಲ್ಲಿ ಜಮೀನಿಗೆ ಹೋಗುವ, ಬಂಡಿದಾರಿ, ಕಾಲುದಾರಿ ಚೆಕ್ ಮಾಡಿ 2024

ಪಿಎಂ ಕಿಸಾನ್ ಯೋಜನೆಯ 6 ಸಾವಿರ ರೂಪಾಯಿ ಬದಲಾಗಿ 8 ಸಾವಿರ ಅಥವಾ 10 ಸಾವಿರ ರೂಪಾಯಿ ಮಾಡಿದರೂ ರೈತರಿಗೆ ಉಪಯೋಗವಾಗಲಿದೆ.

pm kisan farmer

Pm kisan money ಯಾವ ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ ಹಣವನ್ನುಪ್ರತಿ ವರ್ಷ ಮೂರು ಕಂತುಗಳಲ್ಲಿ ಜಮೆ ಮಾಡಲಾಗುವುದು.  ಏಪ್ರೀಲ್ ರಿಂದ ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆಯಾದರೆ ಆಗಸ್ಟ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಎರಡನೇ ಕಂತು ಹಾಗೂ ಡಿಸೆಂಬರ್ ದಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಮೂರನೇ ಕಂತು ಜಮೆ ಮಾಡಲಾಗುವುದು.ಪ್ರತಿ ಕಂತಿನಲ್ಲಿ 2 ಸಾವಿರ ರೂಪಾಯಿ ಹಣ ರೈತರ ಖಾತೆಗೆ ಜಮೆ ಮಾಡಲಾಗುವುದು. ಇಲ್ಲಿಯವರೆಗೆ ರೈತರ ಖಾತೆಗೆ ಒಟ್ಟು 32 ಸಾವಿರ ರೂಪಾಯಿ ಪಿಎಂ ಕಿಸಾನ್ ಯೋಜನೆಯಿಂದ ಹಣ  ಜಮೆಯಾಗಿದೆ.

Leave a Comment