FID check : ರೈತರು ತಮ್ಮ ಹೆಸರಿಗೆ ಫ್ರೂಟ್ಸ್ ಐಡಿ (ಎಫ್ಐಡಿ)ಇದೆಯೋಇಲ್ಲವೋ ಎಂಬುದನ್ನುಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈಗ ಕೇವಲ ಒಂದೇ ನಿಮಿಷದಲ್ಲಿ ಎಫ್ಐಡಿ ಚೆಕ್ ಮಾಡಬಹುದು.
FID check ಎಫ್ಐಡಿ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಪಿಎಂ ಕಿಸಾನ್ ಎಂಬ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕಾಗುತ್ತದೆ. ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ನಿಮ್ಮ ಹೆಸರು. ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ. ಫ್ರೂಟ್ಸ್ ಇದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳಿಂದ ಸೌಲಭ್ಯ ಸಿಗಲಿದೆ.
FID check ಫ್ರೂಟ್ಸ್ ಐಡಿ ಇಲ್ಲದಿದ್ದರೆ ಎಲ್ಲಿ ಮಾಡಿಸಬೇಕು?
ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿಲ್ಲವಾದರೆ ನೀವು ರೈತ ಸಂಪರ್ಕ ಕೇಂದ್ರ, ಅಥವಾ ತಾಲೂಕಿನ ಕೃಷಿ, ತೋಟಗಾರಿಕೆ, ರೇಷ್ಮೆ ಕಚೇರಿಯಲ್ಲಿ ಮಾಡಿಸಬಹುದು. ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರುಒನ್, ಕರ್ನಾಟಕ ಒನ್ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ಮಾಡಿಸಬಹುದು.
FID check ಫ್ರೂಟ್ಸ್ ಐಡಿ ಮಾಡಿಸಲು ಯಾವ ಯಾವ ದಾಖಲೆ ಬೇಕು?
ನಿಮ್ಮ ಹೆಸರಿಗೆ ಪ್ರೂಟ್ಸ್ ಐಡಿ ಮಾಡಿಸಲು ನಿಮ್ಮ ಹೆಸರಿಗೆ ಆಧಾರ್ ಕಾರ್ಡ್ ಇರಬೇಕು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಜಮೀನಿಗೆ ಸಂಬಂಧಿಸಿದ ಎಲ್ಲಾ ಆರ್.ಟಿ.ಸಿ ಅಥವಾ ಪಹಣಿ ಸಲ್ಲಿಸಬೇಕು. ಮೊಬೈಲ್ ನಂಬರ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ನೀಡಿ ರೈತರು ಫ್ರೂಟ್ಸ್ ಐಡಿಯನ್ನು ಮಾಡಿಸಿಕೊಳ್ಳಬಹುದು..
ಇದನ್ನೂ ಓದಿ : Mobile Number ಹಾಕಿ ಬರ ಪರಿಹಾರ ಜಮೆಯಾಗುತ್ತೋ ಇಲ್ಲವೋ ಚೆಕ್ ಮಾಡಿ 2024
ನಂತರ ತಮ್ಮ ಜಮೀನಿನ ಎಲ್ಲಾ ದಾಖಲೆಗಳು ಜೋಡಣೆಯಾಗಿವೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.
FID check ಎಫ್ಐಡಿ ಏಕೆ ಅತೀ ಮುಖ್ಯವಾಗಿದೆ?
ರೈತರ ಫ್ರೂಟ್ಸ್ ಐಡಿ ಈಗ ರೈತರಿಗೆ ಅತೀ ಮುಖ್ಯವಾಗಿದೆ. ಈ ಫ್ರೂಟ್ಸ್ ಐಡಿ ಅಂದರೆ ಎಫ್ಐಡಿ ಇದ್ದರೆ ಮಾತ್ರ ಬರಗಾಲ ಪರಿಹಾರ ಹಾಗೂ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆಯಾಗುತ್ತದೆ. ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರಿನೊಂದಿಗೆ ಜಮೀನಿನ ಸರ್ವೆ ನಂಬರ್ ಗಳನ್ನು ಸೇರಿಸಿದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು.
FID check ಫ್ರೂಟ್ಸ್ ತಂತ್ರಾಂಶದಲ್ಲಿ ಮೊಬೈಲ್ ನಲ್ಲಿ ನೋಂದಣಿ ಮಾಡಿಕೊಳ್ಳುವುದು ಹೇಗೆ?
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ಈ
https://fruits.karnataka.gov.in/OnlineUserLogin.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು citizen Registration ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ಆಧಾರ್ ಕಾರ್ಡ್ ಹಾಕಬೇಕು. ನಂತರ I Agree to share my Aadhaar details ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.
ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು.ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ, ಜಾತಿ ದೃಡೀಕರಣ ಪತ್ರ, ಫೋಟೋ ಹಾಗೂ ನಿಮ್ಮ ಜಮೀನಿಗೆ ಸಂಬಂಧಿಸಿದ ಎಲ್ಲಾ ಸರ್ವೆ ನಂಬರ್ ಪಹಣಿ ದಾಖಲೆಗಳೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.