crop survey : ಇನ್ನೂ ಮುಂದೆ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ಮುಂದೆ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮೆಯಾಗಲಿದೆ.
ಬೆಳೆ ಸಮೀಕ್ಷೆ ಮಾಡದೆ ಇದ್ದರೆ ಬೆಳೆ ಹಾನಿಯಾದರೂ ಸಹ ನಿಮಗೆ ಬೆಳೆ ಹಾನಿ ಪರಿಹಾರ ಬರುವುದಿಲ್ಲ. ಹಾಗಾಗಿ ರೈತರು ತಮ್ಮ ಬಳಿಯಿರುವ ಮನೊಬೈಲ್ ನಲ್ಲೇ ಬೆಳೆ ಸಮೀಕ್ಷೆಯನ್ನು ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ಬೆಳೆ ಸಮೀಕ್ಷೆಯನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬಹುದು.
crop survey ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಮಾಡುವುದು ಹೇಗೆ?
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಬೇಕಾದರೆ ಈ
https://play.google.com/store/apps/details?id=com.csk.farmer23_24.cropsurvey&hl=en_US
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಮುಂಗಾರು ರೈತರ ಬೆಳೆ ಸಮೀಕ್ಷೆ 2024 ಕಾಣಿಸುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ Agree ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ರೈತರ ಬೆಳೆ ಸಮೀಕ್ಷೆ 2024-25 ಕೆಳಗಡೆ ಋತು ಮುಂಗಾರು ಕಾಣಿಸುತ್ತದೆ. ಅದರ ಕೆಳಗಡ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.
crop survey ಬೆಳೆ ಸಮೀಕ್ಷೆ ಮಾಡುವಾಗ ಏನೇನು ಮಾಡಬೇಕು?
ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಪಡೆಯಿರಿ / Generate OTP ಮೇಲೆ ಕ್ಲಿಕ್ಮಾಡಬೇಕು.
ಇದನ್ನೂ ಓದಿ : Nabour land details ನಿಮ್ಮ ಜಮೀನಿನ ಅಕ್ಕಪಕ್ಕದಲ್ಲಿ ಯಾರಿಗೆಷ್ಟು ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ 2024
ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಪೇಸ್ಟ್ ಮಾಡಿ ಸೆಂಡ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಮೊಬೈಲಿಗೆ ಓಟಿಪಿ ಬರದಿದ್ದರೆ Face Capture ಮೇಲೆ ಕ್ಲಿಕ್ ಮಾಡಿ ನಿಮ್ಮ ಫೋಟೋದೊಂದಿಗೆ ಬೆಳೆ ಸಮೀಕ್ಷೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.ಇನ್ನೂ ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.
crop survey ಬೆಳೆ ಸಮೀಕ್ಷೆ ಏಕೆ ಕಡ್ಡಾಯವಾಗಿದೆ?
ಬರಗಾಲ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಜಮೆಯಾಗಲು ರೈತರು ಬೆಳೆದ ಬೆಳಗಳ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ.
ಹೀಗೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಹಾಗೂ ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆ ಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವುದರಿಂದ ಎಲ್ಲಾ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ರೈತರು ಬೆಳೆ ವಿವರಗಳನ್ನು ಅಪ್ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು.
ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.