Anganawadi job ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ 300 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Written by Admin

Published on:

Spread the love

Anganawadi job : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ವಿವಿಧ ತಾಲೂಕುಗಳಿಂದ ಅರ್ಜಿ ಆಹ್ವಾನಿ,ಸಲಾಗಿದೆ. ಹೌದು, 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ಜಿಲ್ಲೆಯ ಒಂಬತ್ತು ಶಿಶು ಅಭಿವೃದ್ಧಿಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅಫಜಲ್ಪೂರ ತಾಲೂಕಿನಲ್ಲಿ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 25 ಸಹಾಯಕಿಯರ ಹುದ್ದೆಗಳು, ಆಳಂದ ತಾಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆಯರ ಮತ್ತು 26 ಸಹಾಯಕಿಯರ ಹುದ್ದೆಗಳು, ಚಿಂಚೋಳಿ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರ ಹಾಗೂ15 ಸಹಾಯಕಿಯರ ಹುದ್ದೆಗಳು, ಚಿತ್ತಾಪುರ ತಾಲೂಕಿನಲ್ಲಿ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಕಲಬುರಗಿ (ಗ್ರಾಮೀಣ) ಯೋಜನೆ ವ್ಯಾಪ್ತಿಯಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳು, ಕಲಬುರಗಿ (ನಗರ) ಯೋಜನೆ ವ್ಯಾಪ್ತಿಯಲ್ಲಿ 92 ಅಂಗನವಾಡಿ ಸಹಾಯಕಿಯರ ಹುದ್ದೆಗಳು, ಜೇವರ್ಗಿ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ  ಮತ್ತು 20 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ  ಆಹ್ವಾನಿಸಲಾಗಿದೆ.

Anganawadi job notifcation

ಸೇಡಂ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಮತ್ತು 19 ಸಹಾಯಕಿಯರ ಹುದ್ದೆಗಳು ಹಾಗೂ ಶಹಾಬಾದ್ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 11 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದು.

ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು

https://karnemakaone.kar.nic.in/abcd/

ವೆಬ್ಸೈಟ್ ನಲ್ಲಿ ಆನ್ಲೈನ್ಮೂಲಕ ಆಗಸ್ಟ್ 7 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Anganawadi job ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಜನ್ಮದಿನಾಂಕದ ದಾಖಲೆ ಇರಬೇಕು. ಇತ್ತೀಚಿನ ಭಾವಚಿತ್ರ ಇರಬೇಕು.

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಇಲ್ಲಿ ಸ್ಲಲಿಸಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://karnemakaone.kar.nic.in/abcd/ApplicationForm_JA_org.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.  ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು.  ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

Anganawadi job ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.ವಿಕಲಚೇತನರಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಸ್ಥಳೀಯತೆ

ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು.

ಇದನ್ನೂ ಓದಿ Pm kisan 18th installment list ಪಿಎಂ ಕಿಸಾನ್ 18 ನೇ ಕಂತಿನ ರೈತರ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ ನಲ್ಲಿ ವಾಸ್ತವ್ಯ ಹೊಂದಿರಬೇಕು.

Anganawadi job ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ವಿದ್ಯಾರ್ಹತೆ

ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.  ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು.

Anganawadi job ಆಸೀಡ್ ದಾಳಿಗೆ ತುತ್ತಾದ ಮಹಿಳೆಯರ ಆಯ್ಕೆ

ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಅರ್ಹ ಅಭ್ಯರ್ಥಿಗೆ 5 ಬೋನಸ್ ಅಂಕಗಳನ್ನು ನೀಡುವುದು.

ವಿಧವೆಯರ ಆಯ್ಕೆ

ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ 5 ಬೋನಸ್  ಅಂಕಗಳನ್ನು ನೀಡಲಾಗುವುದು.

Leave a Comment