Bele sameekshe : ರೈತರು ನನ್ನ ಬೆಳೆ ನನ್ನ ಸಮೀಕ್ಷೆ ಧ್ಯೇಯದೊಂದಿಗೆ ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಬೆಳೆ ಸಮೀಕ್ಷೆ ಮಾಡಬಹುದು.
ಹೌದು, ರೈತ ಮಿತ್ರರೇ ಬೆಳೆ ಸಮೀಕ್ಷೆ ಮಾಡುವುದು ಅತೀ ಮಹತ್ವದ್ದಾಗಿದೆ. ಈಗ ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಪರಿಹಾರ, ಬೆಳೆ ಸಾಲ ಹಾಗೂ ಬೆಂಬಲ ಬೆಲೆ ಯೋಜನೆ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆ ಮಾಡಿಸಲು ಎಲ್ಲಿಯೂ ಹೋಗಬೇಕಿಲ್ಲ. ರೈತರೇ ಇಲ್ಲಿ ನೀಡಲಾದ ಮಾಹಿತಿಗಳ ಪ್ರಕಾರ ಸ್ಟೆಪ್ ಬೈ ಸ್ಟೆಪ್ ನೀವೇ ಸ್ವತಃ ಬೆಳೆ ಸಮೀಕ್ಷೆ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.
2024-25 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಮಾಡಲು ಅನುಕೂಲವಾಗುವಂತೆ ತಮ್ಮ ತಮ್ಮ ಮೊಬೈಲ್ ಗಳಲ್ಲಿ ಬೆಳೆ ಸಮೀಕ್ಷೆ 2024-25 ಆ್ಯಪ್ ನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಂಡು ತಮ್ಮ ಹೊಲದಲ್ಲಿ ತಾವು ಬೆಳೆದ ಬೆಳೆಗಳ ಸಮೀಕ್ಷೆ ಕೈಗೊಳ್ಳಬೇಕು.
Bele sameekshe ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಲು ಈ
https://play.google.com/store/apps/details?id=com.csk.farmer23_24.cropsurvey&hl=en_IN
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಮುಂಗಾರು ರೈತರ ಬೆಳೆ ಸಮೀಕ್ಷೆ 2024 ಆ್ಯಪ್ ಕಾಣಿಸುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.
ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ Agree ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ರೈತರ ಬೆಳೆ ಸಮೀಕ್ಷೆ 2024-25 ಕೆಳಗಡೆ ಋತು ಮುಂಗಾರು ಕಾಣಿಸುತ್ತದೆ. ಅದರ ಕೆಳಗಡ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.
Bele sameekshe ಬೆಳೆ ಸಮೀಕ್ಷೆ ಮಾಡುವಾಗ ಏನೇನು ಮಾಡಬೇಕು?
ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಪಡೆಯಿರಿ / Generate OTP ಮೇಲೆ ಕ್ಲಿಕ್ಮಾಡಬೇಕು.
ಇದನ್ನೂ ಓದಿ : Bara parihara payment ಇಂದಿನಿಂದ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬರ ಪರಿಹಾರ ಜಮೆ 2024
ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಪೇಸ್ಟ್ ಮಾಡಿ ಸೆಂಡ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಮೊಬೈಲಿಗೆ ಓಟಿಪಿ ಬರದಿದ್ದರೆ Face Capture ಮೇಲೆ ಕ್ಲಿಕ್ ಮಾಡಿ ನಿಮ್ಮ ಫೋಟೋದೊಂದಿಗೆ ಬೆಳೆ ಸಮೀಕ್ಷೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.ಇನ್ನೂ ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.
Bele sameekshe ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗೇನು ಪ್ರಯೋಜನ?
ಬೆಳೆ ಸಮೀಕ್ಷೆ ಮಾಡುವುದರಿಂದ ಬರ ಪರಿಹಾರ,ಬೆಳೆ ವಿಮೆ ಪರಿಹಾರ ಸಿಗಲು ಸಾಧ್ಯ. ಬೆಳೆ ಮಿಸ್ ಮ್ಯಾಚ್ ಆಗುವ ತೊಂದರೆಯನ್ನು ತಡೆಯದಂತಾಗುತ್ತದೆ. ಇದಲ್ಲದೇ ರೈತರು ತಮ್ಮ ಹತ್ತಿರವಿರುವ ಪಿ.ಆರ್. (ಖಾಸಗಿ ವ್ಯಕ್ತಿ) ಇವರ ಸಹಾಯ ಮತ್ತು ಸಹಕಾರದಿಂದ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬಹುದು.