Gruhalakshmi status ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಇಂದು ಜಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

Written by Admin

Updated on:

Spread the love

Gruhalakshmi status : ಗೃಹಲಕ್ಷ್ಮೀ ಯೋಜನೆಯ ಹಣ ಯಾವ ಯಾವ ಮಹಿಳೆಯರಿಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿವೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಗೃಹಲಕ್ಷ್ಮೀ ಯೋಜನೆಯ ಹಣ ಈಗ ಬಹುತೇಕ ಮಹಿಳೆಯರ ಖಾತೆಗೆ ಜಮೆಯಾಗುತ್ತಿಲ್ಲ. ಕೆಲವೇ ಕೆಲವು ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ. ಹಾಗಾಗಿ ಯಾವ ಯಾವ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಚೆಕ್ ಮಾಡಬೇಕು? ಅಂದುಕೊಂಡಿದ್ದೀರಾ? ಇಲ್ಲಿದೆ  ಮಾಹಿತಿ.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಇಲ್ಲಿಯವರೆಗೆ 8 ಕಂತುಗಳ ಹಣ ಜಮೆಯಾಗಿದೆ. ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರಿಗೂ ಹಣ ಜಮೆಯಾಗುತ್ತಿದೆ. ನಮಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ಹೀಗೆ ಚೆಕ್ ಮಾಡಿ.

ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಯಾವ ದಾಖಲೆ ಬೇಕು? ಮೊಬೈಲ್ ನಂಬರ್ ಒಂದೇ ಇದ್ದರೆ ಸಾಕೇ? ಅಥವಾ ಇನ್ನಾವುದಾದರೂ ದಾಖಲೆ ಬೇಕಾ? ಇಲ್ಲ ನಿಮ್ಮ ಬಳಿಯಿರುವ ರೇಶನ್ ಕಾರ್ಡ್ ನಂಬರ್ ಗೊತ್ತಿದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ಚೆಕ್ ಮಾಡಿಕೊಳ್ಳಬಹುದು.

Gruhalakshmi status ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Gruhalakshmi status check

Gruhalakshmi status  ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಬೇಕಾದರೆ ಯಾವ  ಅರ್ಹತೆಗಳು ಬೇಕು?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಕೆಳಗಡೆ ನೀಡಲಾದ ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ Pm kisan scheme ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಈ ರೈತರಿಗಷ್ಟೆ ಜಮೆ- ನಿಮ್ಮ ಹೆಸರು ಚೆಕ್ ಮಾಡಿ 2024

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.  ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ನೀವು  ಅರ್ಹತೆ ಪಡೆದಿದ್ದರೂ ಹಣ ಜಮೆಯಾಗದಿದ್ದರೆ ಆಶಾ ಕಾರ್ಯಕರ್ತೆಯರಿಗೆ ಭೇಟಿಯಾಗಬಹುದು.

Leave a Comment