Gruhalakshmi hana: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮಯಾಗಿದೆ ಎಂಬುದನ್ನು ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ತಮಗೆಲ್ಲಾ ಗೊತ್ತಿದ್ದ ಹಾಗೆ ನಿಜವಾದ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಮಾಡಬೇಕೆಂಬ ಉದ್ದೇಶದಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಆರಂಭದಲ್ಲಿ ಅರ್ಹತೆಯಿಲ್ಲದವರೂ ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದರು. ಹಾಗಾಗಿಯಾರು ಯಾರುನಿಜವಾದ ಫಲಾನುಭವಿಗಳಾಗಿದ್ದಾರೋ ಅವರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡಲಾಗುತ್ತಿದೆ. ನೀವು ಅರ್ಹತೆ ಪಡೆದಿದ್ದರೆ ನೀವು ಇಲ್ಲೇ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳುಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
Gruhalakshmi hana ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಇಲ್ಲಿಯವರೆಗೆನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/home
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ತೆರೆದುಕೊಳ್ಳುವ ಪೇಜ್ ನಲ್ಲಿ Guaranteed schemes ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಹಣ ಜಮೆಯಾಗದೆ ಇರುವವರಿಗೆ ಒಟ್ಟು 3 ಕಂತುಗಳ ಹಣ ಜಮೆಯಾಗಲಿದೆ. ಹೌದು, ಮೂರು ತಿಂಗಳ 6ಸಾವಿರ ರೂಪಾಯಿ ಒಟ್ಟಿಗೆ ಜಮೆಯಾಗಲಿದೆ.
Gruhalakshmi hana ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದೀರಾ? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದಿರಾ? ನಿಮಗೇಕೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ನೋಂದಣಿ ಮಾಡಿಸಿದರೂ ನಿಮಗೇಕೆ ಹಣ ಜಮೆಯಾಗಿಲ್ಲ ಎಂಬುದರ ಮಾಹಿತಿ ಇಲ್ಲಿದೆ.
ಇದನ್ನೂ ಓದಿ : Pm kisan eligibility ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ 18ನೇ ಕಂತಿನ ಹಣ ಜಮೆ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.
ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.
Gruhalakshmi hana ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಈ ಸಹಾಯವಾಣಿ ನಂಬರಿಗೆ ಕರೆ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮಖಾತೆಗೆ ಜಮೆಯಾಗಿಲ್ಲವೇ ಹಾಗಾದರೆ ಇಲ್ಲಿ ನೀಡಲಾಗಿರುವ ಸಹಾಯವಾಣಿ ನಂಬರಿಗೆ ಕರೆ ಮಾಡಬಹುದು.
ನೀವು ಮೇಲಿನ ಅರ್ಹತೆ ಪಡೆದಿದ್ದರೂ ಹಣ ಜಮೆಯಾಗದಿದ್ದರೆ ಆಶಾ ಕಾರ್ಯಕರ್ತೆಯರಿಗೆ ಭೇಟಿಯಾಗಬಹುದು.