Grahalakshmi money ಒಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಜಮೆ

Written by Admin

Published on:

Spread the love

Grahalakshmi money : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳಾ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ಕಳದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಿರಲಿಲ್ಲ. ಇದಕ್ಕಾಗಿ ಮಹಿಳೆಯರು ಬ್ಯಾಂಕಿಗೆ ಹೋಗಿ ತಮ್ಮಬ್ಯಾಲೆನ್ಸ್ ಚೆಕ್ ಮಾಡಲು ಪರದಾಡುತ್ತಿದ್ದರು. ಇನ್ನೊಂದು ವಾರದೊಳಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣವನ್ನು ಇನ್ನೂ 10 ದಿನಗಳ ಒಳಗಾಗಿ ಖಾತೆಗೆ ವರ್ಗಾಯಿಸಲಾಗುವುದು ಎಂದು ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿದ್ದೇವೆ. ತಾಂತ್ರಿಕ ದೋಷದಿಂದ ಜೂನ್ ಮತ್ತು ಜುಲೈ 2 ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ ಡಿಬಿಟಿ ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಇನ್ನೂ 8 ರಿಂದ 10 ದಿನಗಳಲ್ಲಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.

Grahalakshmi money ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ

ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಸ್ಥಗತಿಗೊಳಿಸಿದೆ ಎಂಬ ಊಹಾಪೋಹಗಳಿಗೂ ತೆರೆ ಎಳೆದಿರುವ ಸಚಿವರು, ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

Grahalakshmi money ಗೃಹಲಕ್ಷ್ಮೀ ಹಣ ಯಾರಿಗೆ ಜಮೆಯಾಗಲಿದೆ? ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Grahalakshmi money check

Grahalakshmi money ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಹೊಂದಿದ್ದೀರಾ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರು ಅರ್ಹತೆ ಪಡೆದಿಲ್ಲ. ಈಗ ನಿಜವಾದ ಫಲಾನುಭವಿಗಳಿಗೆ ಮಾತ್ರ ಹಣ ಜಮೆ ಮಾಡಲಾಗುತ್ತಿದೆ.

Grahalakshmi money ಇಲ್ಲಿದೆ ನೋಡಿ ಕೆಲವು ಅರ್ಹತೆಗಳು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಇದನ್ನೂ ಓದಿ Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲೇ ಚೆಕ್ ಮಾಡಿ 2024

ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.  ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮುಂದಿನ ವಾರದಲ್ಲಿ ಎಲ್ಲಾ ಅರ್ಹ ಮಹಿಳೆಯರ ಖಾತೆಗೆ ಜಮೆಮಾಡಲಾಗುವುದು. ಹಾಗಾಗಿ ಅರ್ಹತೆ ಪಡೆದಿರುವ ಮಹಿಳೆಯರು ಚಿಂತೆಮಾಡಬೇಕಿಲ್ಲ.

Leave a Comment