Farmer ID Card ರೈತರ ಬಳಿ ಈ ಗುರುತಿನ ಚೀಟಿ ಇದ್ದರೆ ಮಾತ್ರ ಸರ್ಕಾರದ ಎಲ್ಲಾ ಸೌಲಭ್ಯ ಸಿಗಲಿದೆ 2024

Written by Admin

Updated on:

Spread the love

Farmer ID Card ಇನ್ನೂ ಮುಂದೆ ರೈತರ ಬಳಿ ಎಫ್ಐಡಿ ಕಾರ್ಡ್ ಇದ್ದರೆ ಮಾತ್ರ ಅವರಿಗೆ ಬರಗಾಲ, ಬೆಳೆ ಹಾನಿ, ಬೆಳೆ ವಿಮೆ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯಗಳು  ಸಿಗಲಿದೆ.

ಹೌದು, ಈಗ ಸರ್ಕಾರದ ಸೌಲಭ್ಯ ಪಡೆಯಲು Farmer ID Card ಎಫ್ಐಡಿ ಇರುವುದು ಕಡ್ಡಾಯವಾಗಿದೆ. ಹಾಗಾಗಿ ರೈತರು ತಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಮೊದಲು ಚೆಕ್ ಮಾಡಿಕೊಳ್ಳಬಹುದು. ಒಂದು ವೇಳೆ ಎಫ್ಐಡಿ ಇಲ್ಲದಿದ್ದರೆ ರೈತರು ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ (ಎಫ್ಐಡಿ)ಗೆ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

ಎಫ್ಐಡಿಯಲ್ಲಿ ರೈತರು ಎಲ್ಲಾ ಜಮೀನುಗಳ ಸರ್ವೆ ನಂಬರ್ ಗಳು ಜೋಡಣೆಯಾಗಿದೆಯೋ ಇಲ್ಲವೋ ಎಂಬುದನ್ನು ಸಹ ಕೂಡಲೇ ಪರಿಶೀಲಿಸಿಕೊಳ್ಳಬಹುದು. ಜಂಟಿ ಖಾತೆದಾರರು ಇದ್ದಲ್ಲಿ ಪ್ರತಿ ಒಬ್ಬ ಜಂಟಿ ಖಾತೆದಾರರು ಪ್ರತ್ಯೇಕವಾಗಿ ಎಫ್ಐಡಿ ಮಾಡಿಕೊಳ್ಳಬೇಕು.  ಎಫ್ಐಡಿ ಮಾಡಿಸದೆ ಇದ್ದಲ್ಲಿ ರೈತರಿಗೆ ಬರುವ ಬೆಳೆವಿಮೆ, ಬೆಳೆ ನಷ್ಟ  ಪರಿಹಾರದ ಹಣ ರೈತರ ಖಾತೆಗೆ ಜಮೆ ಆಗುವುದಿಲ್ಲ.

Farmer ID Card ರೈತರು ತಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ರೈತರು ತಮ್ಮ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಅಲ್ಲಿ ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಕಾಣಿಸುತ್ತದೆ.

Farmer ID Card ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಫ್ರೂಟ್ಸ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ?      

ಪ್ರೂಟ್ಸ್ ಐಡಿಯನ್ನು ರೈತರು ಮೊಬೈಲ್ ನಲ್ಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೌದು, ಆನ್ಲೈನ್ ನಲ್ಲಿ ಅಂದರೆ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು Citizen Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಗುರುತಿನ ದೃಢೀಕರಣ ಸೇವೆ Identity Valiadation Service ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ನಲ್ಲಿರುವಂತೆ ಹೆಸರು ಬರೆಯಬೇಕು. ಅದರ ಕೆಳಗಡೆ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ I Agree ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೆಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

Farmer ID card

Farmer ID Card ಫ್ರೂಟ್ಸ್ ಐಡಿಗೆ ನೋಂದಣಿ ಮಾಡಲು ಯಾವ ಯಾವ ದಾಖಲೆ ಬೇಕು?

ಸರ್ಕಾರವು ರೈತರ ಅನುಕೂಲಕ್ಕಾಗಿ ಕೃಷಿ ಮತ್ತು ಕೃಷಿ ಸಂಬಂಧಿಸಿದಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಈ ಯೋಜನೆಯ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಜಾತಿ ದೃಢೀಕರಣ ಪತ್ರ, ರೇಶನ್ ಕಾರ್ಡ್, ಫೋಟ ಹಾಗೂ ಜಮೀನಿನ ಪಹಣಿ ಇತ್ಯಾದಿ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಂಡು ಫ್ರೂಟ್ಸ್ ಐಡಿ ಪಡೆದುಕೊಳ್ಳಬೇಕು.

ಇದನ್ನೂ ಓದಿ :   Pm kisan new list ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 2024  

ಫ್ರೂಟ್ಸ್ ಐಡಿಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್ ಗಳ ಸಾಗುವಳಿ ವಿಸ್ತೀರ್ಣವನ್ನು ಸೇರ್ಪಡೆಗೆ ಆಧಾರ್, ಬ್ಯಾಂಕ್ ಪಾಸ್ ಬುಕ್, ಪಹಣಿ ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ಕೃಷಿ, ಕಂದಾಯ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ಸಹಕಾರ ಇಲಾಖೆಯ ಕಚೇರಿಗಳನ್ನುಸಂಪರ್ಕಿಸುವಂತೆ ಕೋರಲಾಗಿದೆ.

Leave a Comment