Free bore well subsidy : ಜೀವಜಲ ಯೋಜನೆ ಅಡಿಯಲ್ಲಿ ಉಚಿತ ಬೋರ್ವೆಲ್ ಕೊರೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ – III ಬಿ) ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಠಾನ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 31- 08- 2024 ಕೊನೆಯ ದಿನಾಂಕವಾಗಿದೆ.
ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿ ಹಾಗೂ ಪಟ್ಟಣ ಪ್ರದೇಶದವರಿಗೆ 1,20000 ರೂಪಾಯಿಗಳ ಸಣ್ಣ ಮತ್ತುಅತೀ ಸಣ್ಣ ರೈತರ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತೇರ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಾರ್ಮರ್ಸ್ ಫ್ರೂಟ್ಸ್ ಐಡಿ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
Free bore well subsidy ಯಾವ ಜಿಲ್ಲೆಯ ರೈತರಿಗೆ ಎಷ್ಟು ಸಬ್ಸಿಡಿ ಸಿಗಲಿದೆ?
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜ ಜಿಲ್ಲೆಗಳ ರೈತರಿಗೆ ಬೋರ್ವೆಲ್ ಕೊರೆಯಲು ಒಟ್ಟು ಘಟಕ ವೆಚ್ಚ 4,75,000 ಇರುತ್ತದೆ. ಇದರಲ್ಲಿ ಬೋರ್ವೆಲ್ ಡ್ರಿಲಿಂಗ್ ಹಾಗೂ ಪಂಪ್ಸೆಟ್ ವೆಚ್ಚ 3,50,000 ರೂಪಾಯಿ ಸಬ್ಸಿಡಿ ದೊರೆಯಲಿದೆ. ಉಳಿದ 50 ಸಾವಿರ ರೂಪಾಯಿ ಸಾಲದ ರೂಪದಲ್ಲಿ ನೀಡಲಾಗುವುದು. 75 ಸಾವಿರ ರೂಪಾಯಿ ವಿದ್ಯುತ್ ಸರಬರಾಜು ಬಾಬ್ತು ಇರಲಿದೆ. ಬ್ಯಾಂಕಿನಲ್ಲಿ ಪಡೆದ ಸಾಲಕ್ಕೆ ಶೇ. 4 ರಷ್ಟು ಬಡ್ಡಿ ದರ ಇರಲಿದೆ.
ಇದನ್ನೂ ಓದಿ : Measure your land ನಿಮ್ಮ ಜಮೀನು ಮೊಬೈಲ್ ನಲ್ಲಿ ಹೀಗೆ ಅಳತೆ ಹೀಗೆ ಮಾಡಿ
ಮೇಲೆ ತಿಳಿಸಿದ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ರೈತರಿಗಾಗಿ ಬೋರ್ವೆಲ್ ಘಟಕದ ವೆಚ್ಚ್ 3 ,75,000 ರೂಪಾಯಿ ಇರಲಿದೆ. ಇದರಲ್ಲಿ 2 ಲಕ್ಷ 50 ಸಾವಿರ ರೂಪಾಯಿ ಸಬ್ಸಿಡಿ ಇರಲಿದೆ. 75 ಸಾವಿರ ವಿದ್ಯುತ್ ಸರಬರಾಜು ಬಾಬ್ತು ಇರಲಿದೆ. 50ಸಾವಿರ ರೂಪಾಯಿ ಬ್ಯಾಂಕಿನಿಂದ ಶೇ.4 ರೂಪಾಯಿಯಂತೆ ಸಾಲ ನೀಡಲಾಗುವುದು.
Free bore well subsidy ರೈತರು ಸೌಲಭ್ಯ ಪಡೆಯಲು ಇರಬೇಕಾದ ಸೌಲಭ್ಯಗಳು
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು
ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಡಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
2023-24ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
Free bore well subsidy ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.
ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ಇರಬೇಕು.
ಸಣ್ಣ ಅಥವಾ ಅತೀ ಸಣ್ಣ ರೈತರ ದೃಢೀಕರಣ ಪತ್ರ ಇರಬೇಕು.
ರೈತರ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಸಲ್ಲಿಸಬೇಕು.
ಜಮೀನಿನ ಪಹಣಿ (ಆರ್.ಟಿ.ಸಿ) ಮೂಲ ಪತ್ರ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.