Taxi car subsidy ಟ್ಯಾಕ್ಸಿ ಕಾರ್ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Admin

Published on:

Spread the love

Taxi car subsidy : ನಿರುದ್ಯೋಗಿಗಳಿಗೆ ಟ್ಯಾಕ್ಸಿ ಕಾರ್, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ವಾಹನ ಚಾಲನ ಪರವಾನಗಿ ಪಡೆದಿರುವ ಟ್ಸಾಕಿ ಚಾಲನೆ ಮಾಡಿ ಜೀವನ ನಿರ್ವಹಿಸಲು ಆಸಕ್ತಿಯಿರುವ ನಿರುದ್ಯೋಗಿಗಳು ಆಗಸ್ಟ್ 31 ರೊಳಗಗಾಗಿ ಅರ್ಜಿ ಸಲ್ಲಿಸಬಹುದು. ಹೌದು, ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Taxi car subsidy ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ವಾಹನ ಖರೀದಿಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು?

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೋರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ. 50 ರಷ್ಟು  ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಬ್ಸಿಡಿ ಮಂಜೂರು ಮಾಡಲಾಗುವುದು.ಉಳಿದ ಮೊತ್ತವನ್ನು ಬ್ಯಾಂಕ್ ಮೂಲಕ ಅವರು ವಿಧಿಸಿರುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು. ವಯೋಮಿತಿ21 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ Measure your land ನಿಮ್ಮ ಜಮೀನು ಮೊಬೈಲ್ ನಲ್ಲಿ ಹೀಗೆ ಅಳತೆ ಹೀಗೆ ಮಾಡಿ

ಈ ಯೋಜನೆ ಅಡಿಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅಥವಾ ಸರ್ಕಾರಿ ಇಲಾಖೆಗಳಲ್ಲಿ ಈ ಉದ್ದೇಶಕ್ಕೆ ಯಾವುದೇ ಯೋಜನೆಗಳಿಂದ ಸೌಲಭ್ಯ ಪಡೆದಿರಬಾರದು. ಈ ಯೋಜನೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಈ ಯೋಜನೆಯಲ್ಲಿ ಮಂಗಳಮುಖಿಯರಿಗೂ ಸಹ ಆದ್ಯತೆ ನೀಡಲಾಗುವುದು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ  ಚಾಲನೆ (ಯೆಲ್ಲೋ ಬೋರ್ಡ್) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು.

Taxi car subsidy ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?

ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿರಬೇಕು. ಹಾಗೂ ಸಂಬಂಧಿಸಿದ ತಾಲೂಕು .ತಹಶೀಲ್ದಾರ ಅಥವಾ ಕಂದಾಯ ಅಧಿಕಾರಿಗಳಿಂದ ನಿಗದಿತ ನಮೂನೆಯಲ್ಲಿ ಪಡೆದ ಜಾತಿ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಆಧಾರ್ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿ ಸಲ್ಲಿಸಬೇಕು. ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ ಸಲ್ಲಿಸಬೇಕು. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಇರಬೇಕು. ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.

Taxi car subsidy ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ  ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.

Taxi car subsidy ಫಲಾನುಭವಿಗಳ ಆಯ್ಕೆ ಹೇಗಿರುತ್ತದೆ?

ಈ ಯೋಜನೆ ಅಡಿಯಲ್ಲಿ ನಿಗಮದ ಫಲಾನುಭವಿಗಳನ್ನು ಆಯ್ಕೆ ಮಾಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಆಯ್ಕೆ ಸಮಿತಿಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು, ತಾಲೂಕಿನಲ್ಲಿ ಖಾಯಂ ಆಗಿ ವಾಸಿಸುತ್ತಿರುವ ವಿಧಾನ ಪರಿಷತ್ತಿನ ಸದಸ್ಯರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಪ್ರಾದೇಶಿಕ ಸ್ರಿಗೆ ಅಧಿಕಾರಿ, ಸಂಬಂಧಿಸಿದ ತಾಲೂಕು ತಹಶೀಲ್ದಾರ, ನಿಗಮದ ಜಿಲ್ಲಾ ವ್ಯವಸ್ಥಾಪಕರು ಇರುತ್ತಾರೆ.

Taxi car subsidy  ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

Leave a Comment