Grahalakshmi hana jame ಇಂದಿನಿಂದ ಗೃಹಲಕ್ಷ್ಮೀ ಯೋಜನೆಯ ಜೂನ್ ಜುಲೈ ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆ 2024

Written by Admin

Updated on:

Spread the love

Grahalakshmi hana jame: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಅತ್ಯಂತ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಸಚಿವೆ ಲಕ್ಷ್ಮೀ ಹೊಬ್ಬಾಳಕರ್.

ಹೌದು, ತಾಂತ್ರಿಕ ಕಾರಣಗಳಿಂದ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿರಲಿಲ್ಲ.  ದಾಖಲಾತಿಗಳ ಪರಿಶೀಲನೆ ಮಾಡಿದ ನಂತರ ಈಗ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮಹಿಳಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.

ಹೌದು, ಇಂದಿನಿಂದ ಯಾರು ಯಾರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದಾರೋ ಹಾಗೂ ಅರ್ಹತೆ ಪಡೆದಿದ್ದಾರೋ ಅಂತಹ ಮಹಿಳೆಯರೆಲ್ಲರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಮಾಡಲಾಗುತ್ತಿದೆ. ಯಾವ ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ Grahalakshmi hana jame ಜಮೆ ಮಾಡಲಾಗಿದೆ ಎಂಬುದನ್ನು ಮಹಿಳಾ ಫಲಾನುಭವಿಗಳು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಮಹಿಳೆಯರ ಖಾತೆಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮೀ ಯೋಜನೆ ಇದಾಗಿದೆ. ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರದ ಮಹಿಳೆಯರ ಖಾತೆಗೆ ಹಣ ಹಾಕದೆ ಇರೋದು ಮಹಿಳೆಯರಿಗೆ ಕೊಂಚ ಬೇಸಗೊಳಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೂಡ್ ನ್ಯೂಸ್ ನೀಡಲು ಮುಂದಾಗಿದೆ.

Grahalakshmi hana jame

ಆಗಸ್ಟ್ ತಿಂಗಳಲ್ಲಿ ವರಮಹಾಲಕ್ಷ್ಮೀ, ನಾಗರ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತವೆ. ಅಗತ್ಯ ವಸ್ತುಗಳ ಖರೀದಿಗೆ ಹಣದ ಅವಶ್ಯಕತೆ ಇರುತ್ತದೆ. ಹಾಗಾಗಿ ಮಹಿಳೆಯರಿಗೆ  Grahalakshmi hana jame ಮಾಡಲಾಗುತ್ತಿದೆ.

Grahalakshmi hana jame ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಥವಾ ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯ ಆಧಾರ್ ಕಾರ್ಡ್ ನಮೂದಿಸಬೇಕು.

Grahalakshmi hana jame

Grahalakshmi hana jame ಐ ಅಗ್ರಿ ಬಾಕ್ಸ್ ಆಯ್ಕೆ ಮಾಡಿ

ಐ ಅಗ್ರಿ ಬಾಕ್ಸ್ಆಯ್ಕೆ ಮಾಡಿಕೊಂಡು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮಆಧಾರ್ ಕಾರ್ಡಿಗೆ ಓಟಿಪಿ ಸಂಖ್ಯೆ ಬರುವುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸದ ನಂತರ ನೀವು ಪಿನ್ ನಂಬರ್ ಕ್ರಿಯೇಟ್ ಮಾಡಿಕೊಳ್ಳಬೇಕು. ಅಂದರೆ ನಿಮ್ಮ ಎಟಿಎಂ ಕಾರ್ಡ್ ನಂಬರ್ ನಂತೆ ನೀವು ಯಾವುದಾದರೂ ನಂಬರ್ ಗಳನ್ನು ನಮೂದಿಸಿ ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಭಾವಚಿತ್ರ ಕಾಣಿಸುತ್ತದೆ.

ಇದನ್ನೂ ಓದಿ Aadhaar seeding ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ ಇಲ್ಲಿ ಆಧಾರ್ ಸೀಡಿ ಮಾಡಿಸಿ 2024

ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಜನ್ಮ ದಿನಾಂಕ ಕಾಣಿಸುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಕಾಣುವ ಮೂರು ಆಯ್ಕೆಗಳಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ಯಾವ ಯಾವ ಯೋಜನೆಗಳಿಂದ ಹಣ Grahalakshmi hana jame ಜಮೆಯಾಗಿದೆ. ಅಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಿಂದ ಎಷ್ಟು ಹಣ ಜಮೆಯಾಗಿದೆ? ಯಾವಾಗ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

Leave a Comment