Grahalakshmi scheme money : ಅಂತೂ ಗೃಹಲಕ್ಷ್ಮೀ ಯೋಜನೆಯ ಹಣ ಖಾತೆಗೆ ಜಮೆಯಾಯಿತು. ಹೌದು, ನಿನ್ನೆ ನನ್ನ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಕಂತಿನ ಹಣ ಜಮೆಯಾಯಿತು.
ಜುಲೈ ತಿಂಗಳ ಕಂತಿನ ಹಣ ಇನ್ನೂ ಜಮೆಯಾಗಬೇಕಿದೆ. ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಯಿತೋ ಇಲ್ಲವೋ ಎಂಬುದನ್ನು ಮಹಿಳೆಯರು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ತಾಂತ್ರಿಕ ಕಾರಣಗಳಿಂದ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿರಲಿಲ್ಲ. ದಾಖಲಾತಿಗಳ ಪರಿಶೀಲನೆ ಮಾಡಿದ ನಂತರ ಈಗ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮಹಿಳಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಎರಡು ತಿಂಗಳಿಂದ ಕಾಯುತ್ತಿರುವ ಮಹಿಳೆಯರಿಗೂ ಇದು ಸಂತಸದ ಸಂಗತಿಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಮಹಿಳೆಯರ ಖಾತೆಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮೀ ಯೋಜನೆ ಇದಾಗಿದೆ. ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರದ ಮಹಿಳೆಯರ ಖಾತೆಗೆ ಹಣ ಹಾಕದೆ ಇರೋದು ಮಹಿಳೆಯರಿಗೆ ಕೊಂಚ ಬೇಸಗೊಳಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೂಡ್ ನ್ಯೂಸ್ ನೀಡಲು ಮುಂದಾಗಿದೆ. Grahalakshmi scheme money ಹಾಗಾಗಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಮಾಡಲಾಗುತ್ತಿದೆ.
Grahalakshmi scheme money ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದ್ದನ್ನ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಥವಾ ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯ ಆಧಾರ್ ಕಾರ್ಡ್ ನಮೂದಿಸಬೇಕು.
ಇದನ್ನೂ ಓದಿ : Measure your land ನಿಮ್ಮ ಜಮೀನು ಮೊಬೈಲ್ ನಲ್ಲಿ ಹೀಗೆ ಅಳತೆ ಹೀಗೆ ಮಾಡಿ
ಐ ಅಗ್ರಿ ಬಾಕ್ಸ್ಆಯ್ಕೆ ಮಾಡಿಕೊಂಡು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮಆಧಾರ್ ಕಾರ್ಡಿಗೆ ಓಟಿಪಿ ಸಂಖ್ಯೆ ಬರುವುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸದ ನಂತರ ನೀವು ಪಿನ್ ನಂಬರ್ ಕ್ರಿಯೇಟ್ ಮಾಡಿಕೊಳ್ಳಬೇಕು. ಅಂದರೆ ನಿಮ್ಮ ಎಟಿಎಂ ಕಾರ್ಡ್ ನಂಬರ್ ನಂತೆ ನೀವು ಯಾವುದಾದರೂ ನಂಬರ್ ಗಳನ್ನು ನಮೂದಿಸಿ ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಭಾವಚಿತ್ರ ಕಾಣಿಸುತ್ತದೆ.
Grahalakshmi scheme money 10 ನೇ ಕಂತಿನ ಹಣ ಜಮೆ
ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಜನ್ಮ ದಿನಾಂಕ ಕಾಣಿಸುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಕಾಣುವ ಮೂರು ಆಯ್ಕೆಗಳಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಯಾವ ಯಾವ ಯೋಜನೆಗಳಿಂದ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.