Bele Darshak : ರೈತರು ತಮ್ಮಲ್ಲಿರುವ ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.
ಹೌದು, ರೈತ ಮಿತ್ರರೆ, ನೀವು ನಿಮ್ಮ ಜಮೀನಿನಲ್ಲಿ ಯಾವ ಬೆಳೆ ಹಾಕಿದ್ದೀರಿ ಎಂಬುದನ್ನು ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆ ಮಾಡದಿದ್ದರೆ ನೀವು ಸರ್ಕಾರದ ಸೌಲಭ್ಯ ಹಾಗೂ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ, ಬರ ಪರಿಹಾರ ಸೇರಿದಂತೆ ಇತರ ಪರಿಹಾರ ಪಡೆಯಲು ವಂಚಿತರಾಗುತ್ತೀರಿ. ಹಾಗಾಗಿ ಒಮ್ಮೆನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಅಂದು ಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದು ರೈತರಿಗೆ ಮಾಹಿತಿ ನೀಡಲಾಗಿತ್ತು. ಆದರೂ ಸಹ ಬಹುತೇಕ ರೈತರು ಬೆಳೆ ಸಮೀಕ್ಷೆ ಮಾಡಿಸಿರುವುದಿಲ್ಲ.ಕೆಲವು ರೈತರು ತಪ್ಪಾಗಿ ಬೆಳೆ ಸಮೀಕ್ಷೆ ಮಾಡಿಸಿದ್ದಾರೆ ಅಂದರೆ ಜಮೀನಿನನಲ್ಲಿರುವ ಬೆಳೆಯೇ ಬೇರೆ? ಸಮೀಕ್ಷೆ ಆಗಿರುವ ಬೆಳೆಯೇ ಬೇರೆ? ಹೀಗಾಗಿ ಕೆಲವು ರೈತರು ಬರ ಪರಿಹಾರದಿಂದ ವಂಚಿತರಾಗಿರುತ್ತದೆ. ಹಾಗಾಗಿ ರೈತರು ಬೆಳೆ ಸಮೀಕ್ಷೆ ಆಗಿರುವುದನ್ನು ಮೊಬೈಲ್ ನಲ್ಲೇ Bele Darshak app ಮೂಲಕ ಚೆಕ್ ಮಾಡಿಕೊಳ್ಳಬಹುದು.
Bele Darshak ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?
ಬೆಳೆ ಸಮೀಕ್ಷೆ ಮಾಡಿದ ರೈತರು ತಮ್ಮ ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.crop.offcskharif_2021
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಥವಾ ಗೂಗಲ್ ಪ್ಲೇ ಸ್ಟೋರ್ ನಲ್ಲಿ Bele darshak 2024-25 ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಬೆಳೆ ದರ್ಶಕ್ ಆ್ಯಪ್ ಕಾಣಿಸುತ್ತದೆ. ಅಲ್ಲಿ install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ದರ್ಶಕ್ 24-25 ಕೆಳಗಡೆ ಬೆಳೆ ಸಮೀಕ್ಷೆ ಮಾಹಿತಿ ವೀಕ್ಷಣೆ ಕಾಣಿಸುತ್ತದೆ. ಅದರ ಕೆಳಗಡೆ ಸರ್ಕಾರಿ ಸಿಬ್ಬಂದಿ ಪ್ರೈವೆಟ್ ರೆಸಡೆಂಟ್ಸ್ ಹಾಗೂ ರೈತ ಎಂಬ ಆಯ್ಕೆಗಳು ಕಾಣಿಸುತ್ತವೆ. ರೈತ ಮೇಲೆ ಕ್ಲಿಕ್ ಮಾಡಬೇಕು. ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ. . ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು.
Bele Darshak ಬೆಳೆ ಸಮೀಕ್ಷೆಯಲ್ಲಿ ಏನೇನು ಮಾಹಿತಿ ಇರುತ್ತದೆ?
ಆಗ ನಿಮಗೆ ಸರ್ವೆ ನಂಬರ್ ಆಯ್ಕೆ ಕೆಳಗಡೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ವರ್ಷ 2024, ಋತು ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ನಂತರ ನಿಮ್ಮ ಸರ್ವೆನಂಬರ್ ನಮೂದಿಸಬೇಕು. ನಂತರ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೆಳಗಡೆ ನಿಮ್ಮ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಮಾಲೀಕರ ವಿವರಕ್ಕಾಗಿ ಮೇಲೆ ಕ್ಲಿಕ್ ಮಾಡಿದರೆನೀವು ಆಯ್ಕೆ ಮಾಡಿಕೊಂಡ ಸರ್ವೆ ನಂಬರ್ ನಲ್ಲಿ ಯಾವ ಯಾವ ರೈತರ ಹೆಸರಿದೆ ಎಂಬುದು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ಸುತ್ತವೆ. ಅಲ್ಲಿ ನೀವು ಒಂದೊಂದಾಗಿ ಸರಿಯಾಗಿ ಮಾಹಿತಿಗಳನ್ನು ಭರ್ತಿ ಮಾಡಬೇಕು.
ಇದನ್ನೂ ಓದಿ Check pahani adhar link ಪಹಣಿಗೆ ಆಧಾರ್ ಲಿಂಕ್ ಆಗಿದೆಯೇ ಮೊಬೈಲ್ ನಲ್ಲಿ ಚೆಕ್ ಮಾಡಿ 2024
ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನೀವು ಅಪ್ಲೋಡ್ ಮಾಡಿದ ಮಾಹಿತಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು. .
ಒಂದು ವೇಳೆ ನೀವು Crop Survey check ಮಾಡಿರದಿದ್ದರೆ ಈ ಸರ್ವೆ ನಂಬರ್ ಬೆಳೆ ಸಮೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ ಎಂಬ ಮೆಸೆಜ್ ಕಾಣಿಸುತ್ತದೆ. ಹಾಗಾಗಿ ಯಾವ ಯಾವ ರೈತರು ಬೆಳೆ ಸಮೀಕ್ಷೆ ಇನ್ನೂ ಮಾಡಿಸಿಲ್ಲವೋ ಕೂಡಲೇ ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಮಾಡಬಹುದು.
Bele Darshak ಸಮಸ್ಯೆಯಾಗುತ್ತಿದ್ದರೆ ರೈತರೇನು ಮಾಡಬೇಕು?
ನಿಮಗೆ ಬೆಳೆ ಸಮೀಕ್ಷೆ ಮಾಡಲು ಸಮಸ್ಯೆಯಾಗುತ್ತಿದ್ದರೆ ಗ್ರಾಮದ ಬೆಳೆ ಸಮೀಕ್ಷೆಗಾರರ ವಿವರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಊರಿಗೆ ಯಾರ ಸಹಾಯ ಪಡೆದು ನೀವು ಬೆಳೆ ಸಮೀಕ್ಷೆಮಾಡಬಹುದು ಅವರ ಹೆಸರು ಹಾಗೂ ಮೊಬೈಲ್ ನಂಬರ್ ಕಾಣಿಸುತ್ತದೆ. ಅವರ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಿಕೊಳ್ಳಲು ವಿನಂತಿಸಲಾಗಿದೆ.