Today is heavy rain ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ 2024

Written by Admin

Published on:

Spread the love

Today is heavy rain: ರಾಜ್ಯದ ವಿವಿಧೆಡೆ ಇಂದು ಅಂದರೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ? ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಉತ್ತರ ಕನ್ನಡ, ಉಡುಪಿ, ಕಲಬುರಗಿ, ಯಾದಗಿರಿ, ವಿಜಯಪುರ, ಕೊಪ್ಪಳ ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Today is heavy rain ತುಮಕೂರಿನಲ್ಲಿಯೂ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ  ಪ್ರಾಧಿಕಾರದ ಅಧ್ಯಕ್ಷ ಶಉಭಾ ಕಲ್ಯಾಣ ತಿಳಿಸಿದ್ದಾರೆ.

ಇದನ್ನೂ ಓದಿ Pm krishi sihchayi subsidy ರೈತರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೂಗಲ್ ಮಿಟ್ ಮೂಲಕ ಮಾತನಾಡಿ, ಮಳೆಯಿಂದ ಯಾವುದೇ ಜನ ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ, ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು ದನ ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮಕೈಗೊಳ್ಳಬೇಕು ಎಂದರು.

Today is heavy rain ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Today is heavy rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?                        

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Today is heavy rain ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್

ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.

Leave a Comment