Gruhalakshmi scheme amount credit ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್. ಹೌದು, ಇದೇ ತಿಂಗಳು ಅಕ್ಟೋಬರ್ 7 ಮತ್ತು 9 ರಂದು ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರು.
ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಮುಂದೆ ಜಮೆಯಾಗಲ್ಲ ಎಂದು ಮಹಿಳೆಯರು ಮುನಿಸಿಕೊಂಡಿದ್ದರು. ಅಂತಹ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಎರಡು ಹಂತದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ.
Gruhalakshmi scheme amount credit ಜುಲೈ ಹಾಗೂ ಆಗಸ್ಟ್ ಎರಡು ತಿಂಗಳ ಒಟ್ಟು 4 ಸಾವಿರ ರೂಪಾಯಿ ಹಣವನ್ನು ಮಹಿಳೆಯರ ಖಾತೆಗೆ ಜಮೆಯಾಗಲಿದೆ. ಯಾವ ಯಾವ ದಿನ ಮಹಿಳೆಯರ ಖಾತೆಗೆ ಹಣ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಇದೇ ಅಕ್ಟೋಬರ್ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಮಹಿಳಾ ಯಜಮಾನಿಯರ ಖಾತೆಗೆ ಎರಡು ಕಂತಿನ ಹಣ ಅಂದರೆ ಜೂನ್ ಹಾಗೂ ಜುಲೈ ತಿಂಗಳ ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಜಮೆ ಮಾಡುವ ಪ್ರಕ್ರಿಯೆ ತಡವಾಗಿತ್ತು ಎಂದು ಹೇಳಿದ್ದಾರೆ.
ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಲ್ಲ ಬರುತ್ತಿದ್ದು, ಹಣ ಸಿಕ್ಕ ಬಳಿಕೆ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ ಅದೇ ನನಗೆ ಸಂತೋಷ ಎಂಬ ಹೇಳಿಕೆ ನೀಡಿದ್ದಾರೆ.
ಕಳೆದ ಎರಡು ತಿಂಗಳಿನಿಂದ ನೀರಾಶೆಗೊಂಡಿರುವ ಮಹಿಳೆಯರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ದಸರಾ ಹಬ್ಬವನ್ನು ಮಹಿಳೆಯರು ಈಗ ಖುಷಿ ಖುಷಿಯಾಗಿ ಆಚರಿಸಬಹುದು.
Gruhalakshmi scheme amount credit ಏನಿದು ಗೃಹಲಕ್ಷ್ಮೀ ಯೋಜನೆ?
ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳಾ ಒಡತಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು.
ಇದನ್ನೂ ಓದಿ : Pm kisan18th installment date ರೈತರಿಗೆ ಗುಡ್ ನ್ಯೂಸ್ – ಪಿಎ ಕಿಸಾನ್ ಹಣ ಈ ರೈತರ ಖಾತೆಗೆ ಅಕ್ಟೋಬರ್ 5 ರಂದು ಜಮೆ
ಹೌದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು.
Gruhalakshmi scheme amount credit ಯಾವ ಉದ್ದೇಶಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ?
ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಹಾಗಾಗಿ ಕುಟುಂಬದ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.
Gruhalakshmi scheme amount credit ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯ ಹಣ ಇಲ್ಲಿಯವರೆಗೆನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/home
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ತೆರೆದುಕೊಳ್ಳುವ ಪೇಜ್ ನಲ್ಲಿ Guaranteed schemes ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.