Heavy rain yellow alert ಭಾರಿ ಮಳೆ ಸಾಧ್ಯತೆ- 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Written by Admin

Published on:

Spread the love

Heavy rain yellow alert : ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Heavy rain yellow alert ಕರಾವಳಿಗಳಲ್ಲಿ ಮತ್ತಷ್ಟು ಚುರುಕಾಗಿದ್ದು, ಇವುಗಳ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

Heavy rain yellow alert ಎಲ್ಲೆಲ್ಲಿ ಅಲರ್ಟ್?: ಮುಖ್ಯವಾಗಿ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ Krishimela in GKVK Bangalore ನವೆಂಬರ್ 14 ರಿಂದ 17 ರವರೆಗೆ ಜಿಕೆವಿಕೆಯಲ್ಲಿ ಕೃಷಿ ಮೇಳ

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮಳೆ ಜೋರಾಗುವ ಸಂಭವವಿದೆ ಎಂದಿದೆ.

Heavy rain red alert

ಮಂಗಳವಾರವೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದೇ 26 ರವರೆಗೂ ಮಳ ಮುಂದುವರೆಯುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

Heavy rain yellow alertಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Heavy rain yellow alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?                        

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Leave a Comment