Fengal cyclone rain alert ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ

Written by Admin

Published on:

Spread the love

Fengal cyclone rain alert : ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಭಾನುವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಮೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಿದೆ.

ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Fengal cyclone rain alert ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ

Fengal cyclone rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಲೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ತುಮಕೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾವರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Fengal cyclone rain alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಈ ಕೆಳಗಿನ ನಂಬರಿಕೆ ಕರೆ ಮಾಡಿ

ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಪಡೆಯಲು ನೀವು ಇಲ್ಲಿ ನೀಡಲಾಗಿರುವ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಕುಳಿತಲ್ಲೇಮಾಹಿತಿ ಸಿಗಲಿದೆ.

ಹೌದು, 92433 45433 ನಂಬರಿಗೆ ಕರೆ ಮಾಡಿದರೆ ಸಾಕು ನಿಮಗೆ ಅಂದಿನ ಹವಾಮಾನ ಮಳೆ ಮಾಹಿತಿ ಸಿಗಲಿದೆ. ಇದಕ್ಕಾಗಿ ನೀವು ಯಾವ ಶುಲ್ಕ ಪಾವತಿಸಬೇಕಿಲ್ಲ. ಉಚಿತವಾಗಿ ರೈತರು ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು.

ಇದನ್ನೂ ಓದಿ Last date for crop insurance ಈ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಿ? ಇಲ್ಲಿದೆ ಮಾಹಿತಿ 2024

ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

Heavy rain alert today ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment