2nd PUC Result 2025 ಪಿಯುಸಿ ರಿಸಲ್ಟ್ ಪ್ರಕಟ: ನಿಮ್ಮ ರಿಸಲ್ಟ್ ಇಲ್ಲೇ ಚೆಕ್ ಮಾಡಿ

Written by Admin

Published on:

Spread the love

2nd PUC Result 2025 : ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಿಲ್ಲೆದೆ ಗುಡ್ ನ್ಯೂಸ್, 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ  ಫಲಿತಾಂಶ ಪ್ರಕಟವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ಸ್ನೇಹಿತರ ಫಲಿತಾಂಶವನ್ನು ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ನೋಡಿ ಮಾಹಿತಿ.

ಇಂದು ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ  ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ನಿಮ್ಮ ರಿಸಲ್ಟ್ ಮೊಬೈಲ್ ನಲ್ಲಿ ಚೆಕ್ ಮಾಡಲು ಡಿಸ್ಕ್ರಿಪಶನ್ ನಲ್ಲಿ ಲಿಂಕ್ ನೀಡಲಾಗಿದೆ.ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ಫಲಿತಾಂಶ ಚೆಕ್ ಮಾಡಬಹುದು.

https://karresults.nic.in/

ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.  ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ನೋಂದಣಿಸಂಖ್ಯೆ ನಮೂಸಿದ ನಂತರ ನಿಮ್ಮ ಫಲಿತಾಂಶ ಕಾಣಿಸುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.

ಶೇಕಡಾ 73.45 ರಷ್ಟು ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದಂತಾಗಿದೆ.

2nd PUC Result 2025 : ಕಾಮರ್ಸ್, ಕಲಾ ವಿಭಾಗದಲ್ಲಿ ಯಾರಿಗೆ ರಾಂಕ್?

ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. ಇವರು 600 ಕ್ಕೆ ‌599 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ ‌597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಎರಡನೇ ಸ್ಥಾನ

ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

2nd PUC Result 2025: ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆ ಪ್ರಥಮ

ಉಡುಪಿ ಜಿಲ್ಲೆ ಶೇ 93.90 ಫಲಿತಾಂಶ ಗಳಿಸಿದ್ದು, ಮೊದಲ ಸ್ಥಾನ ಪಡೆದಿದೆ. ಯಾದಗಿರಿ ಶೇ 48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.

ಇದನ್ನೂ ಓದಿ Bele vime ನಿಮಗೇಕೆ ಬೆಳೆ ವಿಮೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ- 2025

ಸ್ಕಾಲರ್ ಶಿಪ್ ಜಮೆಯಾಗಿದ್ದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ತಮಗೆ ಸ್ಕಾಲರ್ ಶಿಪ್ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://ssp.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಎಂಬ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ನೀವು ಕ್ಲಿಕ್ ಮಾಡಬೇಕು. ಅಥವಾ ಈ

https://ssp.karnataka.gov.in/studentstatusreportforstudent.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ನಿಮಗೆ ವಿದ್ಯಾರ್ಥಿಯ SATS ಗುರುತಿನ ಸಂಖ್ಯೆಯನ್ನು ನಮೂದಿಸಿ ಕೆಳಗಡೆ ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ (ಅಂಕಪಟ್ಟಿ)ಯಲ್ಲಿ ಇರುವ SATS  ಸಂಖ್ಯೆ ನಮೂದಿಸಿ ಯಾವ ವರ್ಷದ ಶಿಷ್ಯವೇತನ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು.  ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.  ಅಲ್ಲಿ ನಿಮ್ಮ ಮಗುವಿನ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಶಾಲೆಯ ಹೆಸರು, ತರಗತಿ. ನಿಮಗೆ ಎಷ್ಟು ಹಣ ಜಮೆಯಾಗಿದೆ? ಯಾವ ಬ್ಯಾಂಕ್ ಖಾತೆಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

 

ಇದೇ ರೀತಿ ಹಿಂದಿನ ವರ್ಷ ಅಂದರೆ 2022-23, 2021-22, 2020-21 ಹೀಗೆ ಹಿಂದಿನ ಸಾಲಿನಲ್ಲಿ ನಿಮ್ಮ ಮಗುವಿಗೆ  ಶಿಷ್ಯವೇತನ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನುಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಈ ಲೇಖನ ನಿಮಗೆ ಇಷ್ಟವಾದರೆ ದಯವಿಟ್ಟು ನಿಮ್ಮ ಸಂಬಂಧಿಕರಿಗೆ, ಬಂಧುಬಳಗದವರಿಗೆ, ಮಿತ್ರರಿಗೆ ಶೇರ್ ಮಾಡಬಹುದು. ಏಕೆಂದರೆ ಬಹಳಷ್ಟು ಪಾಲಕರಿಗೆ ಶಿಷ್ಯವೇತನ ಸ್ಟೇಟಸ್ ಚೆಕ್ ಮಾಡುವುದು ಗೊತ್ತಿರುವುದಿಲ್ಲ. ಹಾಗಾಗಿ ಶೇರ್ ಮಾಡಬಹುದು.

Leave a Comment