Gruhalakshmi pending amount release soon ಈ ತಿಂಗಳಲ್ಲಿ ಫೆಬ್ರವರಿ ಮಾರ್ಚ್ ತಿಂಗಳ ಪೆಂಡಿಂಗ್ ಗೃಹಲಕ್ಷ್ಮೀ ಹಣ ಮಹಿಳೆಯರಿಗೆ ಜಮೆ 2025

Written by Admin

Published on:

Spread the love

Gruhalakshmi pending amount release soon : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿದ ಫಲಾನಭವಿಗಳ ಖಾತೆಗೆ ಉಳಿದ ಎರಡು ತಿಂಗಳ ಬಾಕಿ ಹಣ ಈ ತಿಂಗಳಲ್ಲೇ ಜಮೆ ಮಾಡಲಾಗುವುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕಳೆದ ವಾರದಲ್ಲಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಹಣ ಫಲಾನಭವಿಗಳ ಖಾತೆಗೆ ಜಮೆಯಾಗಿತ್ತು. ಈಗ ಜನವರಿ ಹಾಗೂ ಫೆಬ್ರವರಿ ತಿಂಗಳ ಹಣ ಇದೇ ತಿಂಗಳಲ್ಲಿ ಒಟ್ಟು 4 ಸಾವಿರ ರೂಪಾಯಿ ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ಗೃಹಲಕ್ಷ್ಮೀ ಗ್ಯಾರೆಂಟಿ ಯೋಜನೆಯಡಿ ಮಹಿಳೆಯರಿಗೆ ಫೆಬ್ರವರಿ ತಿಂಗಳೂ ಸೇರಿದಂತೆ ಒಟ್ಟು 4 ತಿಂಗಳ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು ಬಾಕಿ ಉಳಿದಿತ್ತು. ಕಳೆದ ನವೆಂಬರ್ ನಿಂದ ಪ್ರತಿ ತಿಂಗಳು ಖಾತೆಗೆ ಯೋಜನೆಯ ಹಣ ಪಾವತಿಯಾಗಿರಲಿಲ್ಲ. ಗೃಹಲಕ್ಷ್ಮೀ  ಗ್ಯಾರೆಂಟಿ ಹಣವನ್ನು ಪಾವತಿ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡ ಬಗ್ಗೆ ಹಲವಾರು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ರಾಜ್ಯ ಸರ್ಕಾರ ಈಗ ಹಂತ ಹಂತವಾಗಿ ಗ್ಯಾರೆಂಟಿ ಯೋಜನೆಯ ಹಣ ಬಿಡುಗಡೆ ಮಾಡಲು ಮುಂದಾಗಿದೆ.

ರಾಜ್ಯ ಸರ್ಕಾರವುಗೃಹಲಕ್ಷ್ಮೀಗ್ಯಾರೆಂಟಿ ಯೋಜನೆಯ ಬಾಕಿ ಉಳಿದಿರುವ ನಾಲ್ಕು ತಿಂಗಳ ಪೈಕಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣವನ್ನು ಕಳೆದ ವಾರ ಪಾವತಿ ಮಾಡಿದೆ. ಎರಡು ತಿಂಗಳಿಂದ1.26 ಕೋಟಿ ಮಹಿಳೆಯರಿಗೆ ಅಂದಾಜು 5000ಕೋಟಿ ರೂಪಾಯಿ ಹಣ ಪಾವತಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಗೃಹಲಕ್ಷ್ಮೀ ಗ್ಯಾರೆಂಟಿ ಯೋಜನೆ ಹಣಕಾಸಿನ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿವಿದೆ.

ಇದನ್ನೂ ಓದಿ : Check land mutation status ಜಮೀನಿನ ಮೊಟೇಷನ್ ಮೊಬೈಲ್ ಪಡೆಯಿರಿ 2025

ಪ್ರತಿ ತಿಂಗಳು ಒಂದು ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ಪಾವತಿಸುವ ಗೃಹಲಕ್ಷ್ಮೀ ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರ್ಕಾರ  ಹರಸಾಹರ ಪಡುತ್ತಿದೆ. ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಪಾವತಿಯೊಂದಿಗೆ 2024ರ ಎಲ್ಲಾತಿಂಗಳ ಹಣ ಮಹಿಳೆಯರಿಗೆ ನೀಡಲಾಗಿದೆ. 2025ರ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಾಕಿ ಉಳಿದಿದ್ದು, ಮಾರ್ಚ್ ಅಥವಾ ಏಪ್ರೀಲ್ ನಲ್ಲಿ ಈ ಎರಡು ತಿಂಗಳ ಹಣ ನೀಡುವ ಸಾಧ್ಯತೆಗಳಿವೆ.

ಗೃಹಲಕ್ಷ್ಮೀ ಗ್ಯಾರೆಂಟಿ ಯೋಜನೆಯು ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿಯೇ ಅತ್ಯಂತ ದುಬಾರಿ ವೆಚ್ಚದ ಗ್ಯಾರೆಂಟಿ ಯೋಜನೆಯಾಗಿದೆ. ಈ ಯೋಜನೆಗೆ ಬಜೆಟ್ ನಲ್ಲಿ 28,800 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.

Gruhalakshmi pending amount release soon  ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ

ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ

DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

Gruhalakshmi pending amount release soon ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

Gruhalakshmi pending amount release soon ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ

ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು  ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು.  ಈ ರೇಶನ್ ಕಾರ್ಡ್ ನಲ್ಲಿ  ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.

Leave a Comment