Anganawadi teacher jobs ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 2025

Written by Admin

Published on:

Spread the love

Anganawadi teacher jobs :  ಬೆಳಗಾವಿ ಜಿಲ್ಲೆಯಾದ್ಯಂತ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಗಾದರೆ ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಎಲ್ಲಿ ಅರ್ಜಿಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿಯನ್ನು ಇಲ್ಲಿನೀಡಲಾಗಿದೆ.

ಬೆಳಗಾವಿ ಜಿಲ್ಲೆಯಾದ್ಯಂತ 558 ಅಂಗನವಾಡಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು.  ಬೆಳಗಾವಿ ಜಿಲ್ಲೆಗೆ ಬರೋಬರಿ 558 ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ.

Anganawadi teacher jobs ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

Anganawadi teacher jobs ಆನ್ಲೈನ್ ಮೂಲಕ ಅರ್ಜಿಸಲ್ಲಿಸಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

https://karnemakaone.kar.nic.in/abcd/home.aspx

ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಬೆಳಗಾವಿ ಜಿಲ್ಲೆಗೆ ಅರ್ಜಿ ಆಹ್ವಾನಿಸಲಾಗಿದ್ದರಿಂದ ಬೆಳಗಾವಿ ಎಂದು ಆಯ್ಕೆ ಮಾಡಿಕೊಳ್ಳಬೇಕು.  ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಬೇಕು.

ಇದನ್ನೂ ಓದಿ These documents required for subsidy ಸರ್ಕಾರದ ಸಬ್ಸಿಡಿ ಪಡೆಯಲು ನಿಮ್ಮ ಬಳಿ ಈ ದಾಖಲೆಗಳಿದ್ದರೆ ಸಾಕು 2025

ಆಸಕ್ತ ತಾಲ್ಲೂಕಿನಲ್ಲಿ ನಿಮ್ಮ ವರ್ಗಕ್ಕೆ ಹುದ್ದೆ ಇದ್ದರೆ, ಅರ್ಜಿ ಮುಂದುವರೆಸಬಹುದು. ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಸ್ಕ್ಯಾನ್‌ ಮಾಡಿ ಅಪ್‌ಲೋಡ್ ಮಾಡಬೇಕು.

Anganawadi teacher job  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
ವೈಯಕ್ತಿಕ ಕೆಲವು ವಿವರಗಳು
ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು.

ರೈತರಿಗೆ ಗುಡ್ ನ್ಯೂಸ್: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ..!

ಈ ಬಾರಿ ಭಾರತದಲ್ಲಿ ಇಡೀ ಋತುವಿನಲ್ಲಿ ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆ ಇಲ್ಲ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಈ ಮಾನ್ಸೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

“ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್‌ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.

Leave a Comment