heavy rain alert again : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ರಾಜ್ಯದಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಗುಡುಗು ಸಿಡಿಲುನೊಂದಿಗೆ ಆಲಿಕಲ್ಲು ಮಳೆಯಾಗಲಿದೆ. ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಕೆಲ ದಿನಗಳಿಂದ ವಿರಾಮ ನೀಡಿದ ಮಳೆ ಮತ್ತೆ ಇದೇ ತಿಂಗಳು ಏಪ್ರೀಲ್ 27 ರಂದು ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗುತ್ತಿರುವ ಮಳೆಯಿಂದಾಗಿ ಸಿಡಿಲು ಬಿದ್ದು ರೈತರ ಜಾನುವಾರುಗಳು ಮೃತಪಟ್ಟಿವೆ. ಈ ಸಲ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಲಕ್ಷಣ ಕಂಡು ಬರುತ್ತಿದೆ. ಹೌದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿಮಳೆಯಾಗುತ್ತಿರುವುದರಿಂದ ಬಿಸಿಲಿನಲ್ಲಿ ಬೆಂಡಾಗಿದ್ದ ಸಾರ್ವಜನಿಕರಿಗೆ ತಂಪಾದ ವಾತಾವರಣ ಬೀಸುತ್ತಿದೆ. ಬೆಳಗ್ಗೆ 8 ಗಂಟೆಯಿಂದಲೇ ಸೂರ್ಯನ ಪ್ರಖರತೆಯಿಂದಾಗಿ ಮನೆಬಿಟ್ಟು ಹೊರ ಬರದಂತಾಗಿತ್ತು. ಬಿಸಿಲು ಹೆಚ್ಚಾಗಿ ಇದರೊಂದಿಗೆ ಬಿಸಿಲಿನ ಝಳವೂ ಹೆಚ್ಚಾಗಿತ್ತು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಂಪಾದ ವಾತಾವರಣ ಉಂಟಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ತಾಪ ನಂತರ ಗುಡುಗುಸಿಡಿಲಿನ ಆರ್ಭಟ ಇದಾದ ನಂತರ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ತಂಪಾದ ಗಾಳಿ ಬೀಸುತ್ತಿದೆ.
heavy rain alert again ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಏಪ್ರೀಲ್ 27 ರಿಂದ 30 ರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರೀಲ್ 27 ರಂದು ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ನಂತರ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ : Fish farm pond subsidy ಮೀನುಮರಿ ಪಾಲನೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ 2025
ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.
heavy rain alert again ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?
ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.
heavy rain alert again ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.