Bele hani fund released : ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಮುಂಗಾರು ಹಂಗಾಮಿನಲ್ಲಾದ ಅತೀವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ 1033.60 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಜಮೆಯಾಗಲಿದೆ.
ಹೌದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್.ಡಿ.ಆರ್.ಎಫ್) 1218 ಕೋಟಿ ರೂಪಾಯಿ ಮೊತ್ತದ ಹೊರತಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ಹೆಚ್ಚುವರಿ ಪರಿಹಾರ ಘೋಷ್ಟಿಸಿದೆ. ಈ ವಿಶೇಷ್ಟ ಪ್ಯಾಕೇಜ್ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರಿನಲ್ಲಿ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್ ತಿಂಗಳಿಂದ ಸೆಪ್ಟೆಂಬರ್ ತಿಂಗಳವರೆಗಿನ ಅವಧಿಯಲ್ಲಿನ ಅತೀವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿತ್ತು. 10748 ಕೋಟಿ ರೂಪಾಯಿ ಹಾನಿ ಅಂದಾಜಿಸಲಾಗಿತ್ತು. ಮುಖ್ಯವಾಗಿ ತೊಗರಿ 5.36 ಲಕ್ಷ ಹೆಕ್ಟೇರ್ , ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟ್ರೇರ್ ಹಾಗೂ ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿಯಾಗಿರುವುದು ಜಂಟಿ ಸಮೀಕ್ಷೆಯಲ್ಲಿ ದೃಢಪಟ್ಟಿತ್ತು ಎಂದರು.
ಇದನ್ನೂ ಓದಿ : Annabhaga gruhalakshmi amount status ಅನ್ನಭಾಗ್ಯ ಗೃಹಲಕ್ಷ್ಮೀ ಜಮೆಯ ಸ್ಟೇಟಸ್ ಇಲ್ಲೇ ಚೆಕ್ ಮಾಡಿ 2025
ಎಸ್.ಡಿ.ಆರ್.ಎಫ್ ಮಾನದಂಡಗಳ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್ ಗೆ ಸೀಮಿತವಾಗಿ 14.24 ಲಕ್ಷ ರೈತರಿಗೆ 1,218.03 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಈಗ ನೀಡುತ್ತಿರುವ ಹೆಚ್ಚುವರಿ ಪರಿಹಾರ 1033.60 ಕೋಟಿ ಸೇರಿ ಒಟ್ಟು 225 ಕೋಟಿ ರೂಪಾಯಿ ನೀಡಿದಂತಾಗಿದೆ.
Bele hani fund released ಬೆಳೆ ಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ
ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪರಿಹಾರ ಹಣ ಸಂದಾಯ ವರದಿ ಕೆಳಗಡೆ Select Calamity Type ನಲ್ಲಿ Flood, ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಅಲ್ಲಿ ಕೇಳಲಾದ ಮಾಹಿತಿ ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು.
Bele hani fund released ಬೆಳೆ ಹಾನಿ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ ?
ಸರ್ಕಾರ ಮತ್ತು ಎನ್.ಡಿ.ಆರ್.ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಜಮೀನಿಗೆ 17500 ರೂಪಾಯಿ ಪರಿಹಾರ ನೀಡಲಾಗುವುದು. ಬಹು ಬೆಳೆ ಬೆಳೆಯುವ ಜಮೀನಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್ ಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : Pm kisan credit check ರೈತರಿಗೆ ಗುಡ್ ನ್ಯೂಸ್ ಒಂದು ತಿಂಗಳ ಮೊದಲ ಪಿಎಂ ಕಿಸಾನ್ ಹಣ ಬಿಡುಗಡೆ
ಪರಿಹಾರ ಘೋಷಣೆಯಿಂದಾಗಿ ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ಗೆ 8,500 + 8,500 ಸೇರಿ 17,000 ರೂಪಾಯಿ, ನೀರಾವರಿ ಬೆಳೆಗಳಿಗೆ 17,000 + 8,500 ಸೇರಿ 25,500 ರೂಪಾಯಿ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 22,500 + 8,500 ಸೇರಿ 31,000 ರೂಪಾಯಿ ಪರಿಹಾರ ಸಿಗಲಿದೆ.





