Goat sheep unit subsidy ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ಮಂಜೂರಾತಿ: ಅರ್ಜಿ ಆಹ್ವಾನ 2026

Written by Admin

Published on:

Spread the love

Goat sheep unit subsidy : ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ (ನಿ) ವತಿಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳ್ಳಲಿರುವ ವಿಶೇಷ ಘಟಕ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) (ಖಿSP) ಅಡಿ (10+1) ಕುರಿ/ಮೇಕೆ ಘಟಕಗಳ ವಿತರಣೆಗಾಗಿ ಸಹಾಯಧನ ಪಡೆಯಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿದಾರರು  ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು ಫ್ರೂಟ್ಸ್  ತಂತ್ರಾಶದಲ್ಲಿ ನೊಂದಾಯಿಸಿಕೊAಡಿರಬೇಕು. ಅರ್ಹ ಫಲಾನುಭವಿಗಳನ್ನು ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ತಾಲ್ಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ (ನಿ) ಕಲಬುರಗಿ, ಪಶು ಆಸ್ಪತ್ರೆ ಆವರಣ, ಸೇಡಂ ರಸ್ತೆ-ಕಲಬುರಗಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ 2026ರ ಮಾರ್ಚ್ 16ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ (ನಿ) ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ಕುರಿ ನಿಗಮದ ಜಿಲ್ಲಾ ಕಛೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 10 + 1  ಕುರಿ ಅಥವಾ ಮೇಕೆ ಘಟಕ ಯೋಜನೆಯನ್ನು ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Goat sheep unit subsidy ಬಾಗಲಕೋಟೆ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ

ಪ್ರಸಕ್ತ 2025-26ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಗೆ 18 ಜನ ಫಲಾನುಭವಿಗಳು ಹಾಗೂ ಗಿರಿಜಯ ಉಪ ಯೋಜನೆಯಡಿ 5 ಜನ ಫಲಾನುಭವಿಗಳಿಗೆ 10 + 1 ಕುರಿ ಮೇಕೆ ಘಟಕ ಸ್ಥಾಪಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

Goat sheep unit subsidy ಅರ್ಜಿದಾರರು ಆರ್. ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ರೇಶನ್ ಕಾರ್ಡ್, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಆಸಕ್ತರು ಅರ್ಜಿಗಳನ್ನು ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆಯಿಂದ ಪಡೆದುಕೊಂಡು ಪ್ರಕಟಣೆ ದಿನಾಕಂದಿಂದ 10 ದಿನದ ಒಳಗಾಗಿ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸುವಂತೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Goat sheep unit subsidy ರಾಯಚೂರು  ಜಿಲ್ಲೆಯ ರೈತರಿಂದ ಕುರಿ ಮೇಕೆ ಘಟಕ ಸ್ಥಾಪನೆಗೆ ಸಬ್ಡಿ ನೀಡಲು ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 10 + 1  ಕುರಿ ಅಥವಾ ಮೇಕೆ ಘಟಕ ಯೋಜನೆಯನ್ನು ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Goat sheep unit subsidy

ರಾಯಚೂರು ಜಿಲ್ಲೆಗೆ ಪರಿಶಿಷ್ಟ ಜಾತಿ -23, ಪರಿಶಿಷ್ಟ ಪಂಗಡ 22 ಸೇರಿ ಒಟ್ಟು 45 ಗುರಿಯನ್ನು ನೀಡಲಾಗಿದ್ದು, ಸರ್ಕಾರದ ಮಾರ್ಗ ಸೂಚಿಗಳಂತೆ ವಿಧಾನ ಸಭಾ ಕ್ಷೇತ್ರದ ಶಾಸಕ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ನಡೆಯಲಿದೆ.

ಇದನ್ನೂ ಓದಿ Bele hani pariahra status check ಅತಿವೃಷ್ಠಿಯಿಂದ ಬೆಳೆ ಹಾನಿ: 1,033 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆ

ಈ ಯೋಜನೆಯ ಗ್ರಾಮೀಣ ಭಾಗದ ಎಸ್ಟಿ ಮತ್ತು ಎಸ್ಟಿ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 11 ರೊಳಗಾಗಿ ದ್ವಿ ಪ್ರತಿಯನ್ನು ಸಲ್ಲಿಸಬಹುದು.

Goat sheep unit subsidy ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಮುಖ್ಯ ಪಶು ವೈದ್ಯಾಧಿಕಾರಿಗಳು ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ನಿಗಮದ ಸಹಾಯಕ ನಿರ್ದೇಶಕ ಕಚೇರಿ ರಾಯಚೂರುರನ್ನು ಸಂಪರ್ಕಿಸಬಹುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment