Gruhalakshmi 29th installment credit ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ

Written by Admin

Published on:

Spread the love

Gruhalakshmi 29th installment credit : ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ.

ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು 77,66,82,000 ಬಿಡುಗಡೆ ಮಾಡಿದೆ. ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಅವರಿಗೆ ಮನೆಯಲ್ಲಿ ಗೌರವ ಹೆಚ್ಚಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಫಲಾನುಭವಿಗಳು ಸಹ ತಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Gruhalakshmi 29th installment credit  ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದಿದ್ದರೆ ಯಾರಿಗೆ ಕರೆ ಮಾಡಬೇಕು?

ಗೃಹಲಕ್ಷ್ಮೀ ಯೋಜನೆಯ 27ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವಾದರೆ ಕೂಡಲೇ ನೀವು 181 ನಂಬರಿಗೆ ಕರೆ ಮಾಡಬಹುದು.ಈ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮ ಖಾತೆಗೆ ಯಾವಾಗ ಜಮೆಯಾಗುತ್ತದೆ ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡಿಹಿಡಿಯಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.

Gruhalakshmi 29th installment credit  ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯ ಸ್ಟೇಟಸ್  ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗೃಹಲಕ್ಷ್ಮೀ ಹಣ ಜಮೆ ಮಾಡುವ ಪ್ರಕ್ರಿಯೆ ನಿಂತಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.

ಸತ್ತವರ ಖಾತೆಗೂ ಗೃಹಲಕ್ಷ್ಮೀ ಹಣ ಜಮೆ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಣ ಸತ್ತವರ ಖಾತೆಗೆ ಜಮೆಯಾಗುತ್ತಿದೆ. ಹೌದು, ಸತ್ತವರ ಖಾತೆಗೆ 10 ಕೋಟಿ ರೂಪಾಯಿ ಹಣ ಜಮೆಯಾಗಿದೆಯಂತೆ.

ಇದನ್ನೂ ಓದಿ  Bele hani parihara jama 3 ಲಕ್ಷ ರೈತರಿಗೆ ಒಟ್ಟು 250 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಜಮೆ

ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಹಾಯಧನ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇಲ್ಲಿ ಮೃತಪಟ್ಟ ಮಹಿಳೆಯರ ಖಾತೆಗೆ ವರ್ಗಾವಣೆಯಾಗಿದೆ ಎಂಬುದು ಬಯಲಿಗೆ ಬಂದಿದೆ.

Gruhalakshmi 29th installment credit  ಅತೀ ಶೀಘ್ರದಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಈಗಾಗಲೇ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ ಹಾವೇರಿ, ಕೊಡಗು, ದಾವಣಗೆರೆ, ವಿಜಯಪುರ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಅತೀ ಶೀಘ್ರದಲ್ಲಿ ಎಲ್ಲಾ ಫಲಾನುಭವಿಗಳ ಖಾತಗೆ ಹಣ ಜಮೆ ಮಾಡಲಾಗುವದು.

ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್. ರೇಶನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಾಗಿದ್ದರೆ ಅಂತಹ ಮಹಿಳೆಯರ ಖಾತೆಗೆ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ

 

Leave a Comment