Bhagyalakshmi amount status check ಭಾಗ್ಯಲಕ್ಷ್ಮೀ ಯೋಜನೆಯಡಿ 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಎಲ್ಐಸಿ ಸಂಸ್ಥೆಯ ವತಿಯಿಂದ ನೇರವಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ತಿಳಿಸಿದ್ದಾರೆ.
2006-07ನೇ ಸಾಲಿನಲ್ಲಿ 32.352 ರಂತೆ 6057 ಫಲಾನುಭವಿಗಳಿಗೆ ಹಾಗೂ 2007-08ನೇ ಸಾಲಿನಲ್ಲಿ 31.765 ರಂತೆ 4835 ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗಿದೆ.
2006-7 ಮತ್ತು 2007-08ನೇ ಸಾಲಿನಲ್ಲಿ ಬಾಂಡ್ ಪಡೆದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿದ್ದು, ಪರಿಪಕ್ವ ಮೊತ್ತ ಪಡೆಯಬಹುದಾಗಿದೆ. ಫಲಾನುಭವಿಗಳು ಭಾಗ್ಯಲಕ್ಷ್ಮೀ ಮೂಲ ಬಾಂಡ್, ಜನನ, ವ್ಯಾಸಂಗ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ತೆಗೆದುಕೊಂಡು ಹತ್ತಿರದ ಅಂಗನವಾಡಿಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Bhagyalakshmi amount status check ಏನಿದು ಭಾಗ್ಯಲಕ್ಷ್ಮೀ ಯೋಜನೆ?
ಬಡನತ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿ,ಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮೀ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ ತಂದೆ ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ಹಣ ಜಮೆ ಮಾಡಲಾಗುವುದು.
Bhagyalakshmi amount status check ಭಾಗ್ಯಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹತೆ ಪಡೆದಿರುತ್ತಾರೆ?
ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31-03-2006 ನ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿರುತ್ತಾರೆ.
ಇದನ್ನೂ ಓದಿ : Gruhalakshmi 29th installment credit ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ
ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿತ್ತು.
ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ ನೋಂದಣಿಯಾದ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ 19300 ಹಾಗೂ ಅದೇ ಕುಟುಂಬದಲ್ಲಿ 2ನೇ ಹೆಣ್ಣು ಮಗವಿನ ಹೆಸರಿನಲ್ಲಿ 18350 ರೂಪಾಯಿಗಳನ್ನು ಠೇವಣಿ ಇಡಲಾಗುತ್ತದೆ. 18 ವರ್ಷ ಪೂಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು 1 ಲಕ್ಷ ರೂಪಾಯಿ ಹಣ ಪಡೆಯಲು ಅರ್ಹರಿರುತ್ತಾರೆ.
Bhagyalakshmi amount status check ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಭಾಗ್ಯಲಕ್ಷೀ ಬಾಂಡ್ ಸ್ಟೇಟಸ್ ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಭಾಗ್ಯಲಕ್ಷ್ಮೀ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನೀವು ಅಲ್ಲಿ ಅಲ್ಲಿ ನೀವು ನಿಮ್ಮ ಮಗಳ ಹೆಸರಿಗೆ ನೀಡಲಾದ ಭಾಗ್ಯಲಕ್ಷ್ಮೀ ಬಾಂಡ್ ಐಡಿ ನಂಬರ್ ಹಾಕಬೇಕು. ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮಗಳ ಹೆಸರಿಗೆ ಭಾಗ್ಯಲಕ್ಷ್ಮೀ ಬಾಂಡ್ ಯಾವಾಗ ಮಾಡಿಸಲಾಗಿದೆ. ಭಾಗ್ಯಲಕ್ಷ್ಮೀ ಹಣ ಎಷ್ಟು ಬರುತ್ತದೆ. ಯಾವ ದಿನಾಂಕ ನಿಮ್ಮ ಖಾತೆಗೆ ಜಮೆಯಾಗಬಹುದು ಸೇರಿದಂತೆ ಎಲ್ಲಾ ಮಾಹಿತಿ ಮೊಬೈಲ್ ನಲ್ಲೇ ಸಿಗುತ್ತದೆ.





