Rain alert three days : ರಾಜ್ಯದೆಲ್ಲೆಡೆ ಮುಂಗಾರು ಮಳೆಯ ತೀವ್ರ ಕೊರತೆಯಿದೆ. ಈ ನಡುವೆ ಮೂರು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Rain alert three days ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಜೂನ್ 23 ರಿಂದ ಜೂನ್ 25 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂನ್ 27 ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಜೂನ್ 26 ರಂದು ಉತ್ತರ ಕನ್ನಡ, ದಕ್ಷಿಣ ಕನ್ಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಹಾಗಾಗಿ ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕೊಡಗು, ಹಾಸನ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಾಗೂ ಅತೇ ರೀತಿ ಬೀದರ್, ಯಾದಗಿರಿ, ರಾಯಚೂರು,ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಹಾಗಾಗಿ ಜೂನ್ 26 ಮತ್ತು 27 ರಂದು ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 24 ರಿಂದ 27 ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದ್ದು, ನದಿ ಹಳ್ಳಗಳು ಉಕ್ಕುಪ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಜೂನ್ 22 ರಿಂದ 23 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖಱೆ ಮುನಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ನಂತರ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Rain alert three days ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
Rain alert three days ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Belehani amount status check ಬೆಳೆ ಹಾನಿ ಪರಿಹಾರ ಜಮೆಯಾಗಬೇಕಾದರೆ ಈ ಕೆಲಸ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





