Sixteen district rain alert : ಬಂಗಾಳ ಕೊಲ್ಲಿಯಲ್ಲಿ ಮತ್ತು ಉತ್ತ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ರಿಂದ 24 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಹೌದು, ಬೆಂಗಳೂರು, ಬೀದರ್, ಶಿವಮೊಗ್ಗ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಉತ್ತರ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮೇಲಿದ್ದ ಕಡಿಮೆ ಒತ್ತಡದ ಪ್ರದೇಶವು ಪಶ್ಚಿಮ ವಾಯುವ್ಯ ದಿಕ್ಕಿನತ್ತ ಚಲಿಸಿ ಸೆಪ್ಟೆಂಬರ್ 20 ರ ಬೆಳಗ್ಗೆ 5.30 ಗಂಟೆಗೆ ಉತ್ತರ ಅಂಡಮಾನ್ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲ್ಭಾಗದಲ್ಲಿ ನೆಲಿಸಿದೆ.
Sixteen district rain alert ಸೆಪ್ಟೆಂಬರ್ 21 ರಂದು ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಸೆಪ್ಟೆಂಬರ್ 22 ರಂದು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಾಡುವ ಸಾಧ್ಯತೆಯಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ತನ್ನ ಚಲನೆಯನ್ನು ಮುಂದುವರೆಸಿದ್ದು, ಸೆಪ್ಟೆಂಬರ್ 23 ರ ಬೆಳಗ್ಗೆ ದಕ್ಷಿಣ ಒಡಿಸ್ಸಾ ಉತ್ತರ ಆಂಧ್ರಪ್ರದೇಶದ ಕರಾವಳಿಯ ಸಮೀಪವಿರುವ ಪಶ್ಚಿಮ ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Sixteen district rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ಸೋಮವಾರದಿಂದ ನಾಲ್ಕು ದಿನಗಳ ಕಾಲ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಸೆಪ್ಟೆಂಬರ್ 24 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

Sixteen district rain alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
Sixteen district rain alert ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Bele vime detail information ಬೆಳೆ ವಿಮೆ ಮಾಡಿಸಲು ಯಾವ ದಾಖಲೆ ಬೇಕು? ಎಲ್ಲಿ ಮಾಡಬೇಕು ? ಹೇಗೆ ಜಮೆಯಾಗಲಿದೆ? ಇಲ್ದಿದೆ ಮಾಹಿತಿ 2026
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
Sixteen district rain alert ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





