Ganga Kalyana subsidy application ಗಂಗಾ ಕಲ್ಯಾಣ ಯೋಜನೆಯಡಿ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ

Written by Admin

Published on:

Spread the love

Ganga Kalyana subsidy application: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ನೀರಾವರಿ ಸೌಲಭ್ಯ ಮಾಡಲಿಚ್ಚಿಸುವ ರೈತರಿಗೆ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಇದಕ್ಕಿಂತ ಮೊದಲು ಅರ್ಜಿ ಆಹ್ವಾನಿಸಲಾಗಿತ್ತು. ರೈತರ ಅನುಕೂಲಕ್ಕಾಗಿ ಅಕ್ಟೋಬರ್ 31 ರವರೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕಾಲಾವಕಾಶ ನೀಡಲಾಗಿದೆ.

ಅರ್ಜಿ ಯಾರು ಸಲ್ಲಿಸಬಹುದು. ಎಲ್ಲಿ ಸಲ್ಲಿಸಬೇಕು ಎಷ್ಟು ಸಬ್ಸಿಡಿ ಹಣ ಸಿಗಲಿದೆ. ಯಾವ ಯಾವ ಯೋಜನೆಗಳ ಅಡಿಯಲ್ಲಿ ಸಬ್ಸಿಡಿ ಸಿಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಲ ಸೌಲಭ್ಯಕ್ಕೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನಲೈನ್ ಮೂಲಕ ಅಂದರೆ ಸೇವಾ ಸಿಂಧು ಯಾಪ್ ಮೂಲಕ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.

Ganga Kalyana subsidy application ಯಾವ ಯಾವ ಯೋಜನೆಗಳಡಿ ಸೌಲಭ್ಯ ಸಿಗಲಿದೆ ?

ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ 1-2, ಸ್ವಾವಲಂಬಿ ಸಾರಥಿ, ಮೈಕ್ರೋ  ಕ್ರೆಡಿಟ್ ಯೋಜನೆ (ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆ) ಫಾಸ್ಟ್ ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಫುಡ್ ಕಿಯೋಸ್ಥ ಯೋಜನೆ, ಭೂ ಒಡೆತನ ಯೋಜನೆ ಅಡಿಯಲ್ಲಿ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Ganga Kalyana subsidy application

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ರೈತರು 1.20 ಎಕರಯಿಂದ 5 ಎಕರೆಯವರೆಗೆ ಜಮೀನಿ ಇರಬೇಕು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಬೆಂಗಳೂರ ಗ್ರಾಮಾಂತರ ರಾಮನಗರ ಜಿಲ್ಲೆಗಲಿಗೆ 4.25 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ, ಇತರ ಜಿಲ್ಲೆಗಳ ರೈತರಿಗೆ 3.25 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ.

Ganga Kalyana subsidy application ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಫಲಾಫೇಕ್ಷಿಗಳು ಆನ್ಲೈನ್ ನಲ್ಲಿ ಸಂಬಂಧಪಟ್ಟ ಯೋಜನೆಗಳಿಗೆ ಅಗತ್ಯ ದಾಖಲಾತಿಗಳಾದ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಪಡಿತರ ಚೀಟಿ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಓಟರ್ ಐಡಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ವಾಹನವಾಗಿದ್ದಲ್ಲಿ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.

Ganga Kalyana subsidy application ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಜಮೀನಿನ ಪಹಣಿ ಇರಬೇಕು. ಆಧಾರ್ ಕಾರ್ಡ್, ಇರಬೇಕು. ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರಗಳನ್ನು ಅಪ್ಲೋಡ್ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ : PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 34, ಹಾವೇರಿ ಇವರನ್ನು ಸಂಪರ್ಕಿಸಬಹುದು. ಹಾವೇರಿ ಜಿಲ್ಲೆಯ ರೈತರು ದೂರವಾಣಿ ಸಂಖ್ಯೆ 08375 234408 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ganga Kalyana subsidy application ಆಯಾ ಜಿಲ್ಲೆಯ ರೈತರು ತಮ್ಮ ಜಿಲ್ಲೆಯಲ್ಲಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಪರ್ಕಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿಯಿದೆ. ಕೂಡಲೇ ನಿಮ್ಮ ಹತ್ತಿರದ ಸಿ.ಎಸ್.ಸಿ, ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

Leave a Comment