Goods taxi vehicle subsidy : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ಸಾಗಾಣಿಕೆ ವಾಹನ ಟ್ಯಾಕ್ಸಿ ಖರೀಗಿಗೆ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಇದಕ್ಕೆ ಬೇಕಾಗುವ ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Goods taxi vehicle subsidy ಎಷ್ಟು ಸಹಾಯಧನ ಸಿಗಲಿದೆ ?
ವಾಹನ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡಲಾಗುವುದು. ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಸೌಲಭ್ಯ ಸಿಗುತ್ತದೆ.
ಇದಕ್ಕಿಂತ ಮೊದಲು ಅರ್ಜಿ ಆಹ್ವಾನಿಸಲಾಗಿತ್ತು. ರೈತರ ಅನುಕೂಲಕ್ಕಾಗಿ ಅಕ್ಟೋಬರ್ 31 ರವರೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕಾಲಾವಕಾಶ ನೀಡಲಾಗಿದೆ.
Goods taxi vehicle subsidy ಯಾವ ಯಾವ ಯೋಜನೆಗಳಡಿ ಸೌಲಭ್ಯ ಸಿಗಲಿದೆ ?
ಸ್ವಾವಲಂಬಿ ಸಾರಥಿ, ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ 1-2, , ಮೈಕ್ರೋ ಕ್ರೆಡಿಟ್ ಯೋಜನೆ (ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆ) ಫಾಸ್ಟ್ ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಫುಡ್ ಕಿಯೋಸ್ಥ ಯೋಜನೆ, ಭೂ ಒಡೆತನ ಯೋಜನೆ ಅಡಿಯಲ್ಲಿ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Goods taxi vehicle subsidy ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು. ಲಘು ವಾಹನ ಚಾಲನಾ ಪರವಾನಗೆ (ಎಲ್.ಎಮ್.ವಿ ಡ್ರೈವಿಂಗ್ ಲೈಸನ್ಸ್) ಹೊಂದಿರಬೇಕು.

ಜಾತಿ ಮತ್ತು ಆಧಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಪಡಿತರ ಚೀಟಿ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಓಟರ್ ಐಡಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು.
ಇದನ್ನೂ ಓದಿ : PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 34, ಹಾವೇರಿ ಇವರನ್ನು ಸಂಪರ್ಕಿಸಬಹುದು. ಹಾವೇರಿ ಜಿಲ್ಲೆಯ ರೈತರು ದೂರವಾಣಿ ಸಂಖ್ಯೆ 08375 234408 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯಾ ಜಿಲ್ಲೆಯ ರೈತರು ತಮ್ಮ ಜಿಲ್ಲೆಯಲ್ಲಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿಯಿದೆ. ಕೂಡಲೇ ನಿಮ್ಮ ಹತ್ತಿರದ ಸಿ.ಎಸ್.ಸಿ, ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.
Goods taxi vehicle subsidy ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿಯೂ ಅರ್ಜಿ ಸಲ್ಲಿಸಬಹುದು
ಹೌದು, ರೈತರು ತಮ್ಮ ಜಮೀನುಗಳಲ್ಲಿ ನೀರಾವರಿ ಸೌಲಭ್ಯ ಮಾಡಿಕೊಳ್ಳಲಿಚ್ಚಿಸುವವರು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆ ಅಡಿಯಲ್ಲಿಯೂ ರೈತರಿಗೆ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗುತ್ತದೆ. ಇದಕ್ಕಿಂತ ಈ ಮೊದಲು ಈ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯದೆ ಇರುವ ರೈತರು ಅರ್ಜಿ ಸಲ್ಲಿಸಬಹುದು. ಲಭ್ಯತೆಯ ಆಧಾರದ ಮೇಲೆ ರೈತರಿಗೆ ಸೌಲಭ್ಯ ಸಿಗಲಿದೆ. ರೈತರು ಸ್ವಂತ ಜಮೀನು ಇರಬೇಕು. ಇಂತಹ ರೈತರು 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ರೈತರು ಸೇವಾಸಿಂಧು ಯಾಪ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.





